Adipurush Trailer: ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ: ರಾಮನ ಪಾತ್ರದಲ್ಲಿ ಪ್ರಭಾಸ್​ ಕಂಡು ಖುಷಿಪಟ್ಟ ಸಿನಿಪ್ರಿಯರು

​Adipurush Movie: ‘ಟಿ ಸೀರೀಸ್‌’ ಮೂಲಕ ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಆಗಿದೆ. ಪ್ರಭಾಸ್​, ಕೃತಿ ಸನೋನ್​ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

Adipurush Trailer: ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ: ರಾಮನ ಪಾತ್ರದಲ್ಲಿ ಪ್ರಭಾಸ್​ ಕಂಡು ಖುಷಿಪಟ್ಟ ಸಿನಿಪ್ರಿಯರು
ಪ್ರಭಾಸ್
Follow us
ಮದನ್​ ಕುಮಾರ್​
|

Updated on: May 09, 2023 | 2:11 PM

ಸೆಟ್ಟೇರಿದ ದಿನದಿಂದಲೂ ‘ಆದಿಪುರುಷ್​’ ಚಿತ್ರ ಸಾಕಷ್ಟು ಸದ್ದು ಮಾಡುತ್ತಲೇ ಇತ್ತು. ಈಗ ಈ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಜೂನ್​ 16ರಂದು ಈ ಚಿತ್ರ ಅದ್ದೂರಿಯಾಗಿ ರಿಲೀಸ್​ ಆಗಲಿದೆ. ಇಂದು (ಮೇ 9) ‘ಆದಿಪುರುಷ್​’ ಟ್ರೇಲರ್​ (Adipurush Trailer) ಬಿಡುಗಡೆ ಮಾಡುವ ಮೂಲಕ ಕೌತುಕ ಹೆಚ್ಚಿಸಲಾಗಿದೆ. ರಾಮಾಯಣವನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಓಂ ರಾವತ್​ ಅವರು ನಿರ್ದೇಶನ ಮಾಡಿದ್ದಾರೆ. ರಾಮನಾಗಿ ಪ್ರಭಾಸ್​ (Prabhas), ಸೀತೆಯಾಗಿ ಕೃತಿ ಸನೋನ್​, ರಾವಣನಾಗಿ ಸೈಫ್​ ಅಲಿ ಖಾನ್​, ಆಂಜನೇಯನಾಗಿ ದೇವದತ್ತ​ ನಾಗೆ, ಲಕ್ಷ್ಮಣನಾಗಿ ಸನ್ನಿ ಸಿಂಗ್​ ನಟಿಸಿದ್ದಾರೆ. ಬಹುಕೋಟಿ ರೂಪಾಯಿ ವೆಚ್ಚದಲ್ಲಿ ಈ ಚಿತ್ರ ನಿರ್ಮಾಣ ಆಗಿದೆ. ಬಿಡುಗಡೆ ಆಗಿರುವ ಟ್ರೇಲರ್​ನಲ್ಲಿ ಅದ್ದೂರಿತನ ಕಾಣಿಸುತ್ತಿದೆ. ದೊಡ್ಡ ಪರದೆಯಲ್ಲಿ ‘ಆದಿಪುರುಷ್​’ (Adipurush) ಚಿತ್ರವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಪ್ರದರ್ಶನ ಆಗಲಿರುವುದು ವಿಶೇಷ.

‘ಟಿ ಸೀರೀಸ್‌’ನ ಭೂಷಣ್‌ ಕುಮಾರ್ ಅವರು ‘ಆದಿಪುರುಷ್​’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ. ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ತೆರೆಕಾಣಲಿದೆ. ಮೊದಲ ದಿನ ಈ ಚಿತ್ರಕ್ಕೆ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ
Image
ನಿಕ್ ನೇಮ್​ನಿಂದ ಪ್ರಭಾಸ್​ನ ಕರೆದ ಅನುಷ್ಕಾ ಶೆಟ್ಟಿ; ನಟಿ ಪ್ರೀತಿಯಿಂದ ಇಟ್ಟ ಹೆಸರೇನು?
Image
ಕ್ಷುಲ್ಲಕ ಕಾರಣಕ್ಕೆ ಪವನ್ ಕಲ್ಯಾಣ್ ಅಭಿಮಾನಿಯನ್ನು ಕೊಂದ ಪ್ರಭಾಸ್ ಅಭಿಮಾನಿ
Image
Adipurush: ವಿದೇಶಿ ಪ್ರೇಕ್ಷಕರಿಗೆ ಮೊದಲು ದರ್ಶನ ನೀಡಲಿರುವ ‘ಆದಿಪುರುಷ್​’; ಟ್ರೈಬ್ಯಾಕಾದಲ್ಲಿ ಪ್ರೀಮಿಯರ್​
Image
‘ಆದಿಪುರುಷ್​’ ಚಿತ್ರದ ಅವಧಿ ಬರೋಬ್ಬರಿ 3 ಗಂಟೆ; ಪ್ರಭಾಸ್ ಅಭಿಮಾನಿಗಳಿಗೆ ಶುರುವಾಯ್ತು ಚಿಂತೆ

ಪ್ರಭಾಸ್​ ಅವರು ‘ಆದಿಪುರುಷ್​’ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಯಾಕೆಂದರೆ ‘ಬಾಹುಬಲಿ 2’ ಬಳಿಕ ಅವರು ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಹಾಗಾಗಿ ‘ಆದಿಪುರುಷ್​’ ಚಿತ್ರ ಗೆಲ್ಲಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಇದಲ್ಲದೇ ‘ಸಲಾರ್​’, ‘ಪ್ರಾಜೆಕ್ಟ್​ ಕೆ’ ಸಿನಿಮಾದ ಕೆಲಸದಲ್ಲೂ ಪ್ರಭಾಸ್​ ಬ್ಯುಸಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.