ಕ್ರಿಕೆಟರ್ ಆಗಬೇಕಿದ್ದ ಆದಿತ್ಯ ರಾಯ್ ಕಪೂರ್ ಹೀರೋ ಆಗಿದ್ದು ಹೇಗೆ?

| Updated By: ರಾಜೇಶ್ ದುಗ್ಗುಮನೆ

Updated on: Nov 16, 2024 | 8:45 AM

ಆದಿತ್ಯ ರಾಯ್ ಕಪೂರ್ ಅವರು ಬಾಲಿವುಡ್​ಗೆ ಕಾಲಿಟ್ಟಿದ್ದು 2009ರ ‘ಲಂಡನ್ ಡ್ರೀಮ್ಸ್’ ಸಿನಿಮಾ ಮೂಲಕ. ಆ ಬಳಿಕ  ‘ಆಶಿಕಿ 2’, ‘ಯೇ ಜವಾನಿ ಹೇ ದಿವಾನಿ’ ‘ಕಳಂಕ್’ ರೀತಿಯ ಸಿನಿಮಾ ಮಾಡಿ ಗಮನ ಸೆಳೆದರು. ಅವರು ನಟಿಸಿದ ‘ದಿ ನೈಟ್ ಮ್ಯಾನೇಜರ್’ ಸೀರಿಸ್ ಭರ್ಜರಿ ಮೆಚ್ಚುಗೆ ಪಡೆಯಿತು.

ಕ್ರಿಕೆಟರ್ ಆಗಬೇಕಿದ್ದ ಆದಿತ್ಯ ರಾಯ್ ಕಪೂರ್ ಹೀರೋ ಆಗಿದ್ದು ಹೇಗೆ?
ಆದಿತ್ಯ ರಾಯ್ ಕಪೂರ್
Follow us on

ಚಿತ್ರರಂಗದಲ್ಲಿ ಅನೇಕ ಕಲಾವಿದರು ಇದ್ದಾರೆ. ಹೀರೋ/ಹೀರೋಯಿನ್ ಆಗಬೇಕು ಎಂದು ಕನಸು ಕಂಡ ಬಂದವರು ಕೆಲವರಾದರೆ, ಇನ್ನೂ ಕೆಲವರು ಬೇರೆಯದೇ ಆಲೋಚನೆ ಇಟ್ಟುಕೊಂಡು ನಂತರ ಚಿತ್ರರಂಗಕ್ಕೆ ಬಂದು ಗೆಲುವು ಕಾಣುತ್ತಾರೆ. ಈ ಸಾಲಿನಲ್ಲಿ ಆದಿತ್ಯ ರಾಯ್ ಕಪೂರ್ ಕೂಡ ಇದ್ದಾರೆ. ಕ್ರಿಕೆಟರ್ ಆಗಬೇಕು ಎಂದು ಕನಸು ಕಂಡಿದ್ದ ಅವರು ನಂತರ ಆಗಿದ್ದು ಬಾಲಿವುಡ್​ನ ಸ್ಟಾರ್ ಹೀರೋ ಆದರು.

ಆದಿತ್ಯ ರಾಯ್ ಕಪೂರ್ ಅವರು ಬಾಲಿವುಡ್​ಗೆ ಕಾಲಿಟ್ಟಿದ್ದು 2009ರ ‘ಲಂಡನ್ ಡ್ರೀಮ್ಸ್’ ಸಿನಿಮಾ ಮೂಲಕ. ಆ ಬಳಿಕ  ‘ಆಶಿಕಿ 2’, ‘ಯೇ ಜವಾನಿ ಹೇ ದಿವಾನಿ’ ‘ಕಳಂಕ್’ ರೀತಿಯ ಸಿನಿಮಾ ಮಾಡಿ ಗಮನ ಸೆಳೆದರು. ಅವರು ನಟಿಸಿದ ‘ದಿ ನೈಟ್ ಮ್ಯಾನೇಜರ್’ ಸೀರಿಸ್ ಭರ್ಜರಿ ಮೆಚ್ಚುಗೆ ಪಡೆಯಿತು. ಈ ಸರಣಿಯಲ್ಲಿ ಅವರ ನಟನೆ ಸಾಕಷ್ಟು ಗಮನ ಸೆಳೆಯಿತು. ಈ ಸರಣಿಂದ ಅವರ ಜನಪ್ರಿಯತೆ ಹೆಚ್ಚಾಗಿದೆ. ಇದಕ್ಕೆ ಸೀಕ್ವೆಲ್ ಕೂಡ ಬರಬೇಕಿದೆ. ಇಷ್ಟೆಲ್ಲ ಹೆಸರು ಮಾಡಿದ ಆದಿತ್ಯ ಅವರ ಮೂಲ ಕನಸು ಮಾತ್ರ ಬೇರೆಯದೇ ಇತ್ತು.

‘ನಾನು ಕ್ರಿಕೆಟರ್ ಆಗಬೇಕು ಎಂದುಕೊಂಡಿದ್ದೆ. ಆದರೆ, ಅದು ಹೊಂದಾಣಿಕೆ ಆಗಿಲ್ಲ. ನಂತರ ನಟನೆಗೆ ಬಂದೆ. ನಾನು ವಿಡಿಯೋ ಜಾಕಿ ಕೂಡ ಆಗಿದ್ದೆ’ ಎಂದಿದ್ದರು ಆದಿತ್ಯ ರಾಯ್ ಕಪೂರ್. ಹಾಗಂತ ಆದಿತ್ಯ ರಾಯ್ ಕಪೂರ್ ಅವರಿಗೆ ಯಾವುದೇ ಹಿನ್ನೆಲೆ ಇಲ್ಲ ಎಂದುಕೊಳ್ಳಬೇಡಿ. ಅವರು ದೊಡ್ಡ ಕುಟುಂಬದ ಹಿನ್ನೆಲೆಯಿಂದಲೇ ಬಂದವರು.

ಇದನ್ನೂ ಓದಿ: ಆದಿತ್ಯ ರಾಯ್ ಕಪೂರ್-ಅನನ್ಯಾ ಪಾಂಡೆ ಮದುವೆ ಆದ್ರೆ ಇವರ ಒಟ್ಟೂ ಆಸ್ತಿ ಎಷ್ಟು ಕೋಟಿ ರೂಪಾಯಿ ಆಗುತ್ತೆ?

ಆದಿತ್ಯ ರಾಯ್ ಕಪೂರ್ ಅವರ ಸಹೋದರ ಸಿದ್ದಾರ್ಥ್ ರಾಯ್ ಕಪೂರ್. ಅವರು ಬಾಲಿವುಡ್​ನ ಖ್ಯಾತ ನಿರ್ಮಾಪಕರು ಮತ್ತು ವಿದ್ಯಾ ಬಾಲನ್ ಅವರ ಪತಿ. ಹೀಗಾಗಿ, ಆದಿತ್ಯ ಅವರಿಗೆ ಚಿತ್ರರಂಗಕ್ಕೆ ಬರೋದು ದೊಡ್ಡ ಕಷ್ಟ ಎನಿಸಲಿಲ್ಲ. ಸದ್ಯ ಅವರು ‘ಮೆಟ್ರೋ ಇನ್ ದಿಲೋನ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಅವರು ಇತ್ತೀಚೆಗೆ ಚಿತ್ರಕ್ಕಾಗಿ ಲುಕ್ ಕೂಡ ಬದಲಿಸಿಕೊಂಡಿದ್ದಾರೆ. ಈ ವಿಡಿಯೋಗಳು ಆಗಾಗ ವೈರಲ್ ಆಗುತ್ತಾ ಇರುತ್ತವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.