Prabhas: ‘ಆದಿಪುರುಷ್’ ಚಿತ್ರದ ಬಗ್ಗೆ ಟೀಕೆ; ಯಾರ ಕಣ್ಣಿಗೂ ಬಿದ್ದಿಲ್ಲ ಪ್ರಭಾಸ್​, ಕಾರಣವೇನು?

‘ಆದಿಪುರುಷ್​’ ಸಿನಿಮಾ ಟೀಕೆಗೆ ಒಳಗಾಗಿರುವುದಕ್ಕೂ ಅವರು ವಿದೇಶಕ್ಕೆ ತೆರಳಿರುವುದಕ್ಕೂ ಯಾವುದೇ ಸಂಬಂಧ ಇಲ್ಲ. ಇದಕ್ಕೆ ಅಸಲಿ ಕಾರಣ ಇಲ್ಲಿದೆ.

Prabhas: ‘ಆದಿಪುರುಷ್’ ಚಿತ್ರದ ಬಗ್ಗೆ ಟೀಕೆ; ಯಾರ ಕಣ್ಣಿಗೂ ಬಿದ್ದಿಲ್ಲ ಪ್ರಭಾಸ್​, ಕಾರಣವೇನು?
ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on: Jun 17, 2023 | 7:44 AM

ಪ್ರಭಾಸ್ ರಾಮನಾಗಿ ಹಾಗೂ ಕೃತಿ ಸೋನನ್ (Kriti Sanon) ಸೀತೆಯಾಗಿ ನಟಿಸಿದ ‘ಆದಿಪುರುಷ್’ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿದೆ. ರಾಮ ಹಾಗೂ ಹನುಮನ ಭಕ್ತರಿಗೆ ಸಿನಿಮಾ ಇಷ್ಟವಾಗಿದೆ. ಆದರೆ, ಒಂದು ವರ್ಗದ ಜನರು ಈ ಚಿತ್ರವನ್ನು ಬೇಕಾಬಿಟ್ಟಿ ಟೀಕೆ ಮಾಡುತ್ತಿದ್ದಾರೆ. ಸಿನಿಮಾ ಬಗ್ಗೆ ಸಾಕಷ್ಟು ಟ್ರೋಲ್​ಗಳು ಹುಟ್ಟಿಕೊಂಡಿವೆ. ಇಷ್ಟೆಲ್ಲ ನಡೆಯುತ್ತಿದ್ದರೂ ಪ್ರಭಾಸ್ (Prabhas) ಅವರು ಎಲ್ಲಿಯೂ ಕಾಣಿಸಿಕೊಳ್ಳಲೇ ಇಲ್ಲ! ಇದಕ್ಕೆ ಕಾರಣ ಪ್ರಭಾಸ್ ಅಮೆರಿಕದಲ್ಲಿರುವುದು. ಅಂದಹಾಗೆ, ಸಿನಿಮಾ ಟೀಕೆಗೆ ಒಳಗಾಗಿರುವುದಕ್ಕೂ ಅವರು ವಿದೇಶಕ್ಕೆ ತೆರಳಿರುವುದಕ್ಕೂ ಯಾವುದೇ ಸಂಬಂಧ ಇಲ್ಲ.

‘ಆದಿಪುರುಷ್’ ಸಿನಿಮಾ ಯಶಸ್ಸು ಕಾಣಬಹುದು ಎಂದು ಕೆಲವರು ಭಾವಿಸಿದ್ದರು. ಆದರೆ, ಟೀಸರ್ ಹಾಗೂ ಟ್ರೇಲರ್ ನೋಡಿದ ಒಂದು ವರ್ಗದ ಜನರಿಗೆ ಸಿನಿಮಾ ಯಾವ ರೀತಿಯಲ್ಲಿ ಪ್ರತಿಕ್ರಿಯೆ ಪಡೆಯಬಹುದು ಎಂಬ ಅಂದಾಜು ಇತ್ತು. ಹೀಗಾಗಿ ಸಿನಿಮಾ ಟೀಕೆಗೆ ಗುರಿಯಾಗಲಿದೆ ಎಂದು ಭವಿಷ್ಯ ನುಡಿದಿದ್ದರು. ಈಗ ಹಾಗೆಯೇ ಆಗಿದೆ. ಸಿನಿಮಾ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದಿವೆ. ಹೀಗಿರುವಾಗಲೇ ಪ್ರಭಾಸ್ ಅಮೆರಿಕಕ್ಕೆ ತೆರಳಿದ್ದಾರೆ. ಇದರ ಹಿಂದೆ ಬೇರೆಯದೇ ಕಾರಣ ಇದೆ.

‘ಆದಿಪುರುಷ್’ ಸಿನಿಮಾ ಅಮೆರಿಕದಲ್ಲೂ ರಿಲೀಸ್ ಆಗಿದೆ. ಅಲ್ಲಿರುವ ಭಾರತೀಯರು ಈ ಸಿನಿಮಾ ವೀಕ್ಷಿಸುತ್ತಿದ್ದಾರೆ. ಅಲ್ಲಿನ ಜನರ ಜೊತೆ ಕುಳಿತು ಪ್ರಭಾಸ್ ಈ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಇತ್ತೀಚೆಗೆ ಶೂಟಿಂಗ್ ವೇಳೆ ಅವರು ಗಾಯಗೊಂಡಿದ್ದರು. ಈ ವೇಳೆ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿ ಒಂದು ತಿಂಗಳು ವಿಶ್ರಾಂತಿ ಪಡೆದಿದ್ದರು. ಈಗ ಮತ್ತೊಮ್ಮೆ ಅವರು ಸರ್ಜರಿಗೆ ಒಳಗಾಗಬೇಕಿದೆ. ಇಷ್ಟು ದಿನ ‘ಆದಿಪುರುಷ್’ ಪ್ರಚಾರದಲ್ಲಿ ಬ್ಯುಸಿ ಇದ್ದ ಅವರು ಈಗ ಬ್ರೇಕ್ ಪಡೆಯುತ್ತಿದ್ದಾರೆ. ಈ ಕಾರಣಕ್ಕೆ ಸರ್ಜರಿಗೆ ಒಳಗಾಗೋದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: Adipurush Movie: ‘ಓಂ ರಾವತ್​ ದಯವಿಟ್ಟು ನಿಮ್ಮ ಅಡ್ರೆಸ್ ಕೊಡಿ’; ‘ಆದಿಪುರುಷ್’ ಸಿನಿಮಾ ನೋಡಿ ಸಿಟ್ಟಾದ ಫ್ಯಾನ್ಸ್

‘ಆದಿಪುರುಷ್’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಇನ್ನು ಕೆಲವೇ ಸಮಯದಲ್ಲಿ ಈ ಚಿತ್ರದ ಕಲೆಕ್ಷನ್ ಕುರಿತು ಮಾಹಿತಿ ಸಿಗಲಿದೆ. ಮೊದಲ ದಿನ ಈ ಚಿತ್ರ ಒಳ್ಳೆಯ ಗಳಿಕೆ ಮಾಡಲಿದೆ. ವಾರದ ದಿನಗಳಲ್ಲಿ ಸಿನಿಮಾ ಹೇಗೆ ಪರ್ಫಾರ್ಮ್ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ