AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ರೀತಿ ‘ಎ’ ಪ್ರಮಾಣಪತ್ರ ಪಡೆದ ‘ಸಲಾರ್​’; ಇದು ಕ್ರೌರ್ಯದ ಮುನ್ಸೂಚನೆ

ಪ್ರಭಾಸ್​ ಅವರು ‘ಸಲಾರ್​’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಪ್ರಶಾಂತ್ ನೀಲ್​ ಅವರು ನಿರ್ದೇಶನ ಮಾಡಿದ್ದಾರೆ. ಪ್ರಭಾಸ್​ ನಟನೆಯ ಸಿನಿಮಾಗಳಲ್ಲಿ ಅಭಿಮಾನಿಗಳು ಆ್ಯಕ್ಷನ್​ ಬಯಸುತ್ತಾರೆ. ‘ಸಲಾರ್​’ ಸಿನಿಮಾದಲ್ಲಿ ಭರಪೂರ ಆ್ಯಕ್ಷನ್​ ದೃಶ್ಯಗಳು ಇರಲಿವೆ ಎಂದು ‘ಹೊಂಬಾಳೆ ಫಿಲ್ಸ್​’ ಈಗಾಗಲೇ ಹೇಳಿದೆ.

‘ಅನಿಮಲ್​’ ರೀತಿ ‘ಎ’ ಪ್ರಮಾಣಪತ್ರ ಪಡೆದ ‘ಸಲಾರ್​’; ಇದು ಕ್ರೌರ್ಯದ ಮುನ್ಸೂಚನೆ
ಪ್ರಭಾಸ್​
ಮದನ್​ ಕುಮಾರ್​
|

Updated on: Dec 11, 2023 | 2:26 PM

Share

ಬಿಡುಗಡೆಯಾಗಿ 10 ದಿನ ಕಳೆದಿದ್ದರೂ ಕೂಡ ಅನಿಮಲ್​’ (Animal) ಸಿನಿಮಾದ ಹವಾ ಕಡಿಮೆ ಆಗಿಲ್ಲ. ಈ ಸಿನಿಮಾದಲ್ಲಿ ಹೆಚ್ಚು ಕ್ರೌರ್ಯ ಇದೆ ಎಂದು ಅನೇಕರು ಟೀಕಿಸಿದ್ದಾರೆ. ಹಾಗಿದ್ದರೂ ಕೂಡ ಪ್ರೇಕ್ಷಕರು ಈ ಚಿತ್ರವನ್ನು ನೋಡಿ ಗೆಲ್ಲಿಸಿದ್ದಾರೆ. ಹಿಂಸೆಯ ವಿಜೃಂಭಣೆ ಮಾಡಲಾಗಿದೆ, ಅಸಭ್ಯ ಭಾಷೆ ಬಳಸಲಾಗಿದೆ ಎಂಬ ಕಾರಣಕ್ಕೆ ಈ ಸಿನಿಮಾಗೆ ಸೆನ್ಸಾರ್​ ಮಂಡಳಿ ‘ಎ’ ಪ್ರಮಾಣ ಪತ್ರ ನೀಡಿತ್ತು. ಈಗ ‘ಸಲಾರ್​’ (Salaar) ಸಿನಿಮಾಗೂ ಸೆನ್ಸಾರ್​ ಬೋರ್ಡ್​ನಿಂದ ‘ಎ’ ಸರ್ಟಿಫಿಕೇಟ್​ (A certificate) ನೀಡಲಾಗಿದೆ. ಹಾಗಾಗಿ ಈ ಸಿನಿಮಾದಲ್ಲೂ ಕ್ರೌರ್ಯ ಅಬ್ಬರಿಸಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ.

ಪ್ರಭಾಸ್​ ಅವರು ‘ಸಲಾರ್​’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಪ್ರಶಾಂತ್ ನೀಲ್​ ಅವರು ನಿರ್ದೇಶನ ಮಾಡಿದ್ದಾರೆ. ಪ್ರಭಾಸ್​ ಅವರ ಸಿನಿಮಾಗಳಲ್ಲಿ ಅಭಿಮಾನಿಗಳು ಆ್ಯಕ್ಷನ್​ ಬಯಸುತ್ತಾರೆ. ‘ಸಲಾರ್​’ ಸಿನಿಮಾದಲ್ಲಿ ಭರಪೂರ ಆ್ಯಕ್ಷನ್​ ದೃಶ್ಯಗಳು ಇರಲಿವೆ ಎಂದು ‘ಹೊಂಬಾಳೆ ಫಿಲ್ಸ್​’ ಈಗಾಗಲೇ ಹೇಳಿದೆ. ಅದ್ದರಿಂದ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿದೆ.

ಯಾವುದೇ ಸಿನಿಮಾಗೆ ‘ಎ’ ಪ್ರಮಾಣಪತ್ರ ಸಿಕ್ಕರೆ 18 ವರ್ಷಕ್ಕಿಂತ ಕಿರಿಯರು ಆ ಸಿನಿಮಾವನ್ನು ನೋಡುವಂತಿಲ್ಲ. ಇದರಿಂದ ಮಕ್ಕಳ ಜೊತೆ ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ತೊಂದರೆ ಆಗಲಿದೆ. ಅದರ ನಡುವೆಯೂ ಕೆಲವು ಸಿನಿಮಾಗಳು ಅಬ್ಬರಿಸುತ್ತವೆ. ಈಗ ‘ಸಲಾರ್​’ ಸಿನಿಮಾ ಎ ಪ್ರಮಾಣಪತ್ರ ಪಡೆದುಕೊಂಡಿದೆ. ‘ಅನಿಮಲ್​’ ರೀತಿಯೇ ‘ಸಲಾರ್​’ ಕೂಡ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಕಲೆಕ್ಷನ್​ ಮಾಡುತ್ತಾ ಎಂದು ಕಾದುನೋಡಬೇಕು.

ಇದನ್ನೂ ಓದಿ: ‘ಸಲಾರ್​’ ವರ್ಸಸ್​ ‘ಡಂಕಿ’ ಟ್ರೇಲರ್ ಪೈಪೋಟಿ; ಹಿಂದಿಯಲ್ಲಿ ಶಾರುಖ್​ ಖಾನ್​ ಮೇಲುಗೈ

‘ಸಲಾರ್​’ ಸಿನಿಮಾದಲ್ಲಿ ಪ್ರಭಾಸ್​ ಅವರಿಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸಿದ್ದಾರೆ. ಮಾಲಿವುಡ್​ನ ಖ್ಯಾತ ನಟ ಪೃಥ್ವಿರಾಜ್​ ಸುಕುಮಾರನ್​ ಅವರಿಗೂ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಇದೆ. ಟ್ರೇಲರ್​ನಲ್ಲಿ ಅವರ ಪಾತ್ರ ಹೈಲೈಟ್​ ಆಗಿದೆ. ಕೆಲವರು ಈ ಚಿತ್ರವನ್ನು ‘ಉಗ್ರಂ’ ರಿಮೇಕ್​ ಎನ್ನುತ್ತಿದ್ದಾರೆ. ಅದು ಹೌದೋ, ಅಲ್ಲವೋ ಎಂಬುದು ಬಿಡುಗಡೆ (ಡಿ.22) ನಂತರವೇ ತಿಳಿಯಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್