AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಂಟೂರು ಖಾರಂ’ ಬಳಿಕ ಮೂರು ವರ್ಷ ಮಹೇಶ್ ಬಾಬು ಹೊಸ ಸಿನಿಮಾ ಒಪ್ಪಿಕೊಳ್ಳಲ್ಲ

ಸಿನಿಮಾ ಶೂಟಿಂಗ್ ಆರಂಭ ಆದ ಬಳಿಕ ಅವರ ಸಿನಿಮಾ ಹೀರೋ ಬೇರೆ ಸಿನಿಮಾದಲ್ಲಿ ನಟಿಸುವುದನ್ನು ರಾಜಮೌಳಿ ಒಪ್ಪುವುದಿಲ್ಲ. ಇದು ಮಹೇಶ್ ಬಾಬು ನಿರ್ಧಾರಕ್ಕೆ ಕಾರಣ.

‘ಗುಂಟೂರು ಖಾರಂ’ ಬಳಿಕ ಮೂರು ವರ್ಷ ಮಹೇಶ್ ಬಾಬು ಹೊಸ ಸಿನಿಮಾ ಒಪ್ಪಿಕೊಳ್ಳಲ್ಲ
ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on: Jun 01, 2023 | 12:10 PM

Share

ಟಾಲಿವುಡ್ ನಟ ಮಹೇಶ್ ಬಾಬು (Mahesh Babu) ಅವರ ಹೊಸ ಸಿನಿಮಾಗೆ ರಗಡ್ ಶೀರ್ಷಿಕೆ ಇಡಲಾಗಿದೆ. ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ಚಿತ್ರ ಇದಾಗಿದ್ದು, ‘ಗುಂಟೂರು ಖಾರಂ’ ಎಂದು ಟೈಟಲ್ ನೀಡಲಾಗಿದೆ. ಮಹೇಶ್ ಬಾಬು ಪೂಜಾ ಹೆಗ್ಡೆ ಮತ್ತು ಶ್ರೀಲೀಲಾ (Sreeleela) ನಟಿಸಲಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಚಿತ್ರದ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾದಲ್ಲಿ ಮಹೇಶ್ ಬಾಬು ಮಾಸ್ ಲುಕ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ತೆರೆಕಂಡ ಬಳಿಕ ಮಹೇಶ್ ಬಾಬು ಅವರು ಮೂರು ವರ್ಷ ಯಾವುದೇ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲವಂತೆ.

ತ್ರಿವಿಕ್ರಂ ಸಿನಿಮಾದ ಬಳಿಕ ಮಹೇಶ್ ಬಾಬು ಅವರು ರಾಜಮೌಳಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ. ತಮ್ಮ ಸಿನಿಮಾದಲ್ಲಿ ನಟಿಸೋ ಹೀರೋಗಳಿಗೆ ರಾಜಮೌಳಿ ಅವರು ಕೆಲ ಷರತ್ತುಗಳನ್ನು ಹಾಕುತ್ತಾರೆ. ಸಿನಿಮಾ ಶೂಟಿಂಗ್ ಆರಂಭ ಆದ ಬಳಿಕ ಅವರ ಸಿನಿಮಾ ಹೀರೋ ಬೇರೆ ಸಿನಿಮಾದಲ್ಲಿ ನಟಿಸುವುದನ್ನು ರಾಜಮೌಳಿ ಒಪ್ಪುವುದಿಲ್ಲ. ರಾಜಮೌಳಿ ಅವರು ಈ ರೀತಿಯ ನಿಯಮ ಹಾಕಿಕೊಳ್ಳುವುದಕ್ಕೂ ಕಾರಣ ಇದೆ.

‘ಗುಂಟೂರು ಖಾರಂ’ ಬಿಡುಗಡೆಯಾದ ನಂತರ ಮಹೇಶ್ ಬಾಬು ಅವರು ರಾಜಮೌಳಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ರಾಜಮೌಳಿ ಅವರು ಈ ಚಿತ್ರಕ್ಕೆ ಅಂದಾಜು 3 ವರ್ಷ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಚಿತ್ರ ಮುಗಿಯುವವರೆಗೂ ಮಹೇಶ್ ಬಾಬು ಬೇರೆ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ರಾಜಮೌಳಿ ಚಿತ್ರಕ್ಕಾಗಿ ಮಹೇಶ್ ತಮ್ಮ ಲುಕ್ ಕೂಡ ಬದಲಾಯಿಸಿಕೊಳ್ಳಲಿದ್ದಾರೆ. ಈ ಪಾತ್ರಕ್ಕೆ ಸಾಕಷ್ಟು ಸಿದ್ಧತೆ ಕೂಡ ಬೇಕಿದೆ. ಹೀಗಾಗಿ, ಸಂಪೂರ್ಣವಾಗಿ ಮಹೇಶ್​ ಬಾಬು ಈ ಸಿನಿಮಾದಲ್ಲಿ ತೊಡಗಿಕೊಳ್ಳಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಮಹೇಶ್ ಬಾಬು ಹೊಸ ಸಿನಿಮಾದ ಹೆಸರು ಘೋಷಣೆ: ಹೆಸರಲ್ಲೇ ಇದೆ ಖಾರ

ಮಹೇಶ್ ಬಾಬು ಹಾಗೂ ರಾಜಮೌಳಿ ಸಿನಿಮಾದ ಮೇಲೆ ಈಗಾಗಲೇ ಭಾರೀ ನಿರೀಕ್ಷೆ ಸೃಷ್ಟಿ ಆಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಗೆ ಬರಲಿದೆ. ಇದು ಮಹೇಶ್ ಬಾಬು ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಅನ್ನೋದು ವಿಶೇಷ. ‘ಗುಂಟೂರು ಖಾರಂ’ ಸಿನಿಮಾ 2024ರ ಜನವರಿಯಲ್ಲಿ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?