AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ರಿಲೀಸ್ ಪೋಸ್ಟ್​ಪೋನ್ ಆದ ಬೆನ್ನಲ್ಲೇ ವಿದೇಶಕ್ಕೆ ಹಾರಿದ ನಟ ಪ್ರಭಾಸ್

‘ಸಲಾರ್’ ಸಿನಿಮಾ ರಿಲೀಸ್​ಗಾಗಿ ಕಾದಿದ್ದರು ಪ್ರಭಾಸ್. ಸಾಲು ಸಾಲು ಸೋಲು ಕಾಣುತ್ತಿರುವುದರಿಂದ ಅವರಿಗೆ ‘ಸಲಾರ್’ ಮೂಲಕ ಒಂದು ದೊಡ್ಡ ಗೆಲವು ಬೇಕಿತ್ತು. ಆದರೆ, ಸಿನಿಮಾ ರಿಲೀಸ್ ಪೋಸ್ಟ್​ಪೋನ್ ಮಾಡಲಾಗಿದೆ. ಈ ಬಗ್ಗೆ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಹೀಗಾಗಿ, ಪ್ರಭಾಸ್​ ಬೇರೆ ದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

‘ಸಲಾರ್’ ರಿಲೀಸ್ ಪೋಸ್ಟ್​ಪೋನ್ ಆದ ಬೆನ್ನಲ್ಲೇ ವಿದೇಶಕ್ಕೆ ಹಾರಿದ ನಟ ಪ್ರಭಾಸ್
ಸಲಾರ್
ರಾಜೇಶ್ ದುಗ್ಗುಮನೆ
|

Updated on: Sep 14, 2023 | 7:33 AM

Share

ಪ್ರಭಾಸ್ ಅವರು ಸಾಲು ಸಾಲು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸ್ ಆಗುತ್ತಿವೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಲಾರ್’ ಸಿನಿಮಾ (Salaar Movie) ಸೆಪ್ಟೆಂಬರ್ 28ರಂದು ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಈ ಬೆನ್ನಲ್ಲೇ ಪ್ರಭಾಸ್ (Prabhas) ವಿದೇಶಕ್ಕೆ ಹಾರಿದ್ದಾರೆ ಎಂದು ವರದಿ ಆಗಿದೆ. ಆದರೆ, ಯಾವುದೂ ಅಧಿಕೃತವಾಗಿಲ್ಲ.

‘ಸಲಾರ್’ ಸಿನಿಮಾ ರಿಲೀಸ್​ಗಾಗಿ ಕಾದಿದ್ದರು ಪ್ರಭಾಸ್. ಸಾಲು ಸಾಲು ಸೋಲು ಕಾಣುತ್ತಿರುವುದರಿಂದ ಅವರಿಗೆ ‘ಸಲಾರ್’ ಮೂಲಕ ಒಂದು ದೊಡ್ಡ ಗೆಲವು ಬೇಕಿತ್ತು. ಆದರೆ, ಸಿನಿಮಾ ಪೋಸ್ಟ್​ ಪ್ರೊಡಕ್ಷನ್ ಕೆಲಸಗಳಿಗೆ ಇನ್ನೂ ಹೆಚ್ಚಿನ ಸಮಯ ಬೇಕು ಎಂದು ನಿರ್ದೇಶಕ ಪ್ರಶಾಂತ್​ ನೀಲ್​ಗೆ ಅನಿಸಿದೆ. ಈ ಕಾರಣದಿಂದ ಅವರು ಸಿನಿಮಾ ರಿಲೀಸ್  ಪೋಸ್ಟ್​ಪೋನ್ ಮಾಡಿದ್ದಾರೆ. ಈ ಬಗ್ಗೆ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಹೀಗಾಗಿ, ಪ್ರಭಾಸ್​ ಬೇರೆ ದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಕೆಲವು ವರದಿಗಳ ಪ್ರಕಾರ ಪ್ರಭಾಸ್ ಅವರು ವಿದೇಶಕ್ಕೆ ತೆರಳಿದ್ದು ಕಾಲಿನ ಸರ್ಜರಿಗೆ ಎನ್ನಲಾಗುತ್ತಿದೆ. ಕಾಲಿನ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಈ ಮೊದಲು ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈಗ ಅವರು ಎರಡನೇ ಬಾರಿಗೆ ಅವರು ಸರ್ಜರಿ ಮಾಡಿಸಿಕೊಳ್ಳಬೇಕಿದೆ. ಇನ್ನೂ ಕೆಲವು ವರದಿಗಳು ಹೇಳೋದೇ ಬೇರೆ. ‘ಆದಿಪುರುಷ್’ ರಿಲೀಸ್ ಬಳಿಕ ಅವರು ಒಂದಷ್ಟು ಸಮಯ ವಿದೇಶದಲ್ಲಿ ಕಳೆದು ಬಂದಿದ್ದರು. ಆ ಬಳಿಕ ಅವರು ನಿರಂತರವಾಗಿ ‘ಕಲ್ಕಿ 2898 ಎಡಿ’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಆದರು. ಅವರಿಗೆ ಒಂದು ಬ್ರೇಕ್ ಬೇಕಿದೆ. ಹೀಗಾಗಿ ಅವರು ವಿದೇಶ ಪ್ರವಾಸ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.

ಪ್ರಭಾಸ್ ಉಳಿದ ಸೆಲೆಬ್ರಿಟಗಳಂತಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಅಷ್ಟೊಂದು ಆ್ಯಕ್ಟೀವ್ ಆಗಿಲ್ಲ. ಅವರು ಫೋಟೋಗಳನ್ನು ಹಂಚಿಕೊಳ್ಳೋದು ತುಂಬಾನೇ ಕಡಿಮೆ. ಈ ಕಾರಣಕ್ಕೆ ಅವರು ಯಾವ ದೇಶಕ್ಕೆ ತೆರಳಿದ್ದಾರೆ, ಯಾವ ಕಾರಣಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ರಿವೀಲ್ ಆಗೋ ಸಾಧ್ಯತೆ ಕಡಿಮೆ.

ಇದನ್ನೂ ಓದಿ: ‘ಸಲಾರ್’ ರಿಲೀಸ್ ಡೇಟ್​ನಲ್ಲಿ ಬರುತ್ತಿದೆ ಶ್ರೀಲೀಲಾ ಸಿನಿಮಾ; ಪ್ರಮೋಷನ್​ಗೆ ಭರ್ಜರಿ ಪ್ಲಾನ್

‘ಸಲಾರ್’ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಮೊದಲಾದವರು ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಮೂಲಕ ವಿಜಯ್ ಕಿರಗಂದೂರು ಇದನ್ನು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು