AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಬಳಿಕ ಮದುವೆಗೆ ರೆಡಿ ಆದ ದಕ್ಷಿಣದ ಮತ್ತೋರ್ವ ಸ್ಟಾರ್ ನಟಿ

ನಟಿ ಸಮಂತಾ ರುತ್ ಪ್ರಭು ನಿರ್ದೇಶಕ ರಾಜ್ ಅವರನ್ನು ವರಿಸಿದ್ದಾರೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸಮಂತಾ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈಗ ದಕ್ಷಿಣದಲ್ಲಿ ಸೆಲೆಬ್ರಿಟಿ ಜೋಡಿ ಮದುವೆಗೆ ರೆಡಿ ಆಗಿದೆ. ಫೆಬ್ರವರಿಯಲ್ಲಿ ರಾಜಸ್ಥಾನದಲ್ಲಿ ಇವರ ವಿವಾಹ ನಡೆಯಲಿದೆ ಎನ್ನಲಾಗಿದೆ. ಇತ್ತೀಚೆಗೆ ಇವರು ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ಸಮಂತಾ ಬಳಿಕ ಮದುವೆಗೆ ರೆಡಿ ಆದ ದಕ್ಷಿಣದ ಮತ್ತೋರ್ವ ಸ್ಟಾರ್ ನಟಿ
ಸಮಂತಾ
ರಾಜೇಶ್ ದುಗ್ಗುಮನೆ
|

Updated on: Dec 04, 2025 | 11:55 AM

Share

ನಟಿ ಸಮಂತಾ ರುತ್ ಪ್ರಭು ಅವರು ಇತ್ತೀಚೆಗೆ ನಿರ್ದೇಶಕ ರಾಜ್ ಅವರನ್ನು ವಿವಾಹ ಆಗಿದ್ದಾರೆ. ತಮಿಳುನಾಡಿನ ಕೊಯಿಮತ್ತೂರಿನಲ್ಲಿ ಈ ವಿವಾಹ ನಡೆದಿದೆ. ಇಶಾ ಫೌಂಡೇಷನ್​ ಅಲ್ಲಿ ಸಿಂಪಲ್ ಆಗಿ ದಂಪತಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಸಮಂತಾ ಬೆನ್ನಲ್ಲೇ ದಕ್ಷಿಣದ ಸ್ಟಾರ್ ನಟಿ ಮದುವೆಗೆ ಸಿದ್ಧರಾಗಿದ್ದಾರೆ. ಅಷ್ಟಕ್ಕೂ ಯಾರು ಅವರು? ರಶ್ಮಿಕಾ ಮಂದಣ್ಣ. ಹೌದು ಫೆಬ್ರವರಿ ವೇಳೆಗೆ ರಶ್ಮಿಕಾ (Rashmika Mandanna) ಹಾಗೂ ವಿಜಯ್ ದೇವರಕೊಂಡ ವಿವಾಹ ನಡೆಯಲಿದೆ. ಈ ಬಗ್ಗೆ ಅವರು ಇತ್ತೀಚೆಗೆ ಮಾತನಾಡಿದ್ದು, ಅಡ್ಡ ಗೋಡೇ ಮೇಲೆ ದೀಪ ಇಟ್ಟಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದಾರೆ. ಅಕ್ಟೋಬರ್​ನಲ್ಲಿ ಇವರ ನಿಶ್ಚಿತಾರ್ಥ ಹೈದರಾಬಾದ್​ನಲ್ಲಿ ನಡೆದಿದೆ ಎನ್ನಲಾಗಿದೆ. ಇವರ ಮದುವೆ ಫೆಬ್ರವರಿಯಲ್ಲಿ ರಾಜಸ್ಥಾನದಲ್ಲಿ ನಡೆಯಲಿದೆ ಎಂದು ವರದಿ ಆಗಿದೆ. ಈ ಪ್ರಶ್ನೆಗೆ ರಶ್ಮಿಕಾಗೆ ಕೇಳಲಾಗಿದೆ. ಇದಕ್ಕೆ ಅವರು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ.

‘ನಾನು ಮದುವೆ ವಿಷಯವನ್ನು ತಳ್ಳಿಯೂ ಹಾಕುತ್ತಿಲ್ಲ, ಒಪ್ಪಿಯೂ ಕೊಳ್ಳುತ್ತಿಲ್ಲ. ಅದರ ಬಗ್ಗೆ ಯಾವಾಗ ಮಾತನಾಡಬೇಕೋ ಆಗ ಮಾತನಾಡುತ್ತೇವೆ’ ಎಂದು ರಶ್ಮಿಕಾ ಹೇಳಿದ್ದಾರೆ. ಈ ಮೂಲಕ ವಿವಾಹ ವಿಷಯವನ್ನು ಗುಟ್ಟಾಗಿಟ್ಟಿದ್ದಾರೆ. ಇವರು ಫೆಬ್ರವರಿಯಲ್ಲಿ ಮದುವೆ ಆಗುತ್ತಿರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ‘ನಾನು ಕಲಾವಿದೆ. ಆದರೆ, ಮನೆಗೆ ಹೋದಾಗ ನಟನೆಯ ಬಗ್ಗೆ ಯೋಚಿಸದಿರಲು ನಿರ್ಧರಿಸುತ್ತೇನೆ. ಕೆಲಸದ ಬಗ್ಗೆ ಮನೆಯಲ್ಲಿ ನಾನು ಮಾತನಾಡುವುದಿಲ್ಲ’ ಎಂದಿದ್ದಾರೆ.

‘ನಾವು ದಿನದ 24 ಗಂಟೆಯೂ ಕೆಲಸ ಮಾಡಲು ಸಾಧ್ಯವಿಲ್ಲ. ನೀವು ಕೆಲಸದ ಬಗ್ಗೆ ಮಾತನಾಡುತ್ತಿದ್ದೀರಿ ಎಂದರೆ ಅದು ಕೂಡ ಕೆಲಸ ಮಾಡಿದಂತೆ. ಕೆಲಸ ಎಂಬುದು ಬಂದಾಗ ನನ್ನ ಪ್ರಯತ್ನ ನೂರರಷ್ಟು ಇರುತ್ತದೆ. ಆದರೆ, ಮನೆಯಲ್ಲಿ ಇದ್ದೇನೆ ಎಂದಾಗ ನಾನು ಸಂಪೂರ್ಣ ಅಲ್ಲಿಯೇ ಸಮಯ ಕಳೆಯಲು ಬಯಸುತ್ತೇನೆ’ ಎಂದಿದ್ದಾರೆ ರಶ್ಮಿಕಾ.

ಇದನ್ನೂ ಓದಿ: ಮತ್ತೆ ರಶ್ಮಿಕಾ ಮಂದಣ್ಣರನ್ನು ಕಾಡಿದ ಎಐ, ಕಠಿಣವಾಗಿ ಶಿಕ್ಷಿಸಿ ಎಂದ ನಟಿ

ರಶ್ಮಿಕಾ ಮಂದಣ್ಣ ಅವರು ಈ ಮೊದಲು ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ‘ಗೀತ ಗೋವಿಂದಂ’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಇವರು ಬೇರೆ ಆಗುವ ಘೋಷಣೆ ಮಾಡಿದರು. ವಿಜಯ್ ಹಾಗೂ ರಶ್ಮಿಕಾ ನಡುವೆ ಪ್ರೀತಿ ಮೂಡಿದೆ ಎಂದು ಆಗಲೇ ಹೇಳಲಾಗಿತ್ತು. ಈಗ ಇವರು ಮದುವೆ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು