ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಸಾವಿನ ಬೆನ್ನಲ್ಲೇ ಮತ್ತೋರ್ವ ನಟಿಯ ಆತ್ಮಹತ್ಯೆ; ಪ್ರಿಯಕರನಿಗಾಗಿ ಹುಡುಕಾಟ

ಕಿರಣ್​ಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆತ ಘಟನೆ ನಂತರದಲ್ಲಿ ತಲೆಮರಿಸಿಕೊಂಡಿದ್ದಾರೆ. ಸದ್ಯ, ಅವರ​ ವಿರುದ್ಧ ಪ್ರಕರಣ ದಾಖಲಾಗಿದೆ. ಶೀಘ್ರವೇ ಅವರನ್ನು ಬಂಧಿಸುವ ಬಗ್ಗೆ ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಸಾವಿನ ಬೆನ್ನಲ್ಲೇ ಮತ್ತೋರ್ವ ನಟಿಯ ಆತ್ಮಹತ್ಯೆ; ಪ್ರಿಯಕರನಿಗಾಗಿ ಹುಡುಕಾಟ
ಅನುರಾಧಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Sep 30, 2021 | 10:05 PM

ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಅವರು ಇಂದು (ಸೆಪ್ಟೆಂಬರ್​ 30) ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದರು. ಇದಾದ ಬೆನ್ನಲ್ಲೇ ಟಾಲಿವುಡ್​ನಲ್ಲೂ ಒಂದು ಆತ್ಮಹತ್ಯೆ ನಡೆದಿದೆ. ತೆಲುಗಿನ ಜ್ಯೂನಿಯರ್​ ಆರ್ಟಿಸ್ಟ್​ ಅನುರಾಧಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿ ವಿಚಾರ ಈ ಸಾವಿಗೆ ಕಾರಣ ಎಂದು ತಿಳಿದು ಬಂದಿದೆ.

ಹೈದರಾಬಾದ್​ನ ಬಂಜಾರಾ ಹಿಲ್ಸ್​ನಲ್ಲಿರುವ ತಮ್ಮ ನಿವಾಸದಲ್ಲೇ ಅನುರಾಧಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅನುರಾಧಾ ಮನೆಯಿಂದ ಹೊರಗೆ ಬಂದಿರಲಿಲ್ಲ. ಇದು ನೆರೆಹೊರೆಯವರಿಗೆ ಅನುಮಾನ ಮೂಡಿಸಿತ್ತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಈ ವೇಳೆ ಅವರು ನೇಣು ಹಾಕಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ಪೊಲೀಸರು ಮನೆಗೆ ಬಂದು ಬಾಗಿಲನ್ನು ಒಡೆದಿದ್ದಾರೆ. ಈ ವೇಳೆ ಅನುರಾಧಾ ಫ್ಯಾನ್​ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಂತರ ಅವರ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅನುರಾಧಾ ಅವರು ಕಿರಣ್​ ಎಂಬುವವರನ್ನು ಪ್ರೀತಿಸುತ್ತಿದ್ದರು. ಅವರು ಅನುರಾಧಾಗೆ ಪ್ರೀತಿ ಹೆಸರಲ್ಲಿ ಮೋಸ ಮಾಡಿದ್ದರು. ಈ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅನುರಾಧಾ ಅವರು ತೆಲುಗು ಇಂಡಸ್ಟ್ರಿಯಲ್ಲಿ ಜ್ಯೂನಿಯರ್​ ಆರ್ಟಿಸ್ಟ್​ ಆಗಿ ಕೆಲಸ ಮಾಡುತ್ತಿದ್ದರು. ಕಿರಣ್​ ಕೂಡ ಸಿನಿಮಾ ಇಂಡಸ್ಟ್ರಿಯಲ್ಲೇ ಕೆಲಸ ಮಾಡಿಕೊಂಡಿದ್ದರು. ಆರು ವರ್ಷದ ಹಿಂದೆ ಇಬ್ಬರ ಪರಿಚಯವಾಗಿತ್ತು. ಶೀಘ್ರವೇ ಮದುವೆ ಆಗಲು ಇಬ್ಬರೂ ನಿರ್ಧರಿಸಿದ್ದರು. ಆದರೆ, ಕಿರಣ್ ಸಂಬಂಧ ಮುರಿದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು. ಇದರಿಂದ ಅನುರಾಧಾ ಖಿನ್ನತೆಗೆ ಒಳಗಾದರು. ಈಗ ಅವರು ಆತ್ಮಹತ್ಯೆ ಮಾಡಿಕೊಂಡು ಜೀವವನ್ನೇ ತೆಗೆದುಕೊಂಡಿದ್ದಾರೆ.

ಸದ್ಯ, ಕಿರಣ್​ಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆತ ಘಟನೆ ನಂತರದಲ್ಲಿ ತಲೆಮರಿಸಿಕೊಂಡಿದ್ದಾರೆ. ಸದ್ಯ, ಅವರ​ ವಿರುದ್ಧ ಪ್ರಕರಣ ದಾಖಲಾಗಿದೆ. ಶೀಘ್ರವೇ ಅವರನ್ನು ಬಂಧಿಸುವ ಬಗ್ಗೆ ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಟಿ ಸವಿ ಮಾದಪ್ಪ ಸಾವಿನ ಬಗ್ಗೆ ರಾಮನಗರ ಎಸ್​​ಪಿ ಹೇಳಿದ್ದಿಷ್ಟು

ಮೇಕಪ್ ಮ್ಯಾನ್​ ಮಹೇಶ್​ ಜತೆ ನಟಿ ಸವಿ ಮಾದಪ್ಪ ಕೊನೆಯ ಮಾತು

Published On - 9:46 pm, Thu, 30 September 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ