AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ ಆಯ್ತು ಈಗ ಮತ್ತೋರ್ವ ಸೂಪರ್​ಸ್ಟಾರ್​ಗೆ ಕ್ಯಾನ್ಸರ್? ಸಿಕ್ಕಿತು ಸ್ಪಷ್ಟನೆ

ಶಿವರಾಜ್​ಕುಮಾರ್ ಅವರು ಈಗಷ್ಟೇ ಕ್ಯಾನ್ಸರ್ ಮುಕ್ತರಾಗಿ ಮರಳಿದ್ದಾರೆ. ಒಂದು ತಿಂಗಳ ಕಾಲ ಅಮೆರಿಕದಲ್ಲಿ ಇದ್ದ ಅವರು ಈಗ ಚೇತರಿಕೆ ಕಂಡಿದ್ದಾರೆ. ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಮಧ್ಯೆ ಮತ್ತೋರ್ವ ಸ್ಟಾರ್ ಹೀರೋಗೆ ಕ್ಯಾನ್ಸರ್ ಆಗಿದೆ ಎಂಬ ಸುದ್ದಿ ಹರಿದಾಡಿದೆ .

ಶಿವಣ್ಣ ಆಯ್ತು ಈಗ ಮತ್ತೋರ್ವ ಸೂಪರ್​ಸ್ಟಾರ್​ಗೆ ಕ್ಯಾನ್ಸರ್? ಸಿಕ್ಕಿತು ಸ್ಪಷ್ಟನೆ
ಶಿವಣ್ಣ ಆಯ್ತು ಈಗ ಮತ್ತೋರ್ವ ಸೂಪರ್​ಸ್ಟಾರ್​ಗೆ ಕ್ಯಾನ್ಸರ್?
ರಾಜೇಶ್ ದುಗ್ಗುಮನೆ
|

Updated on: Mar 19, 2025 | 7:36 AM

Share

ಶಿವರಾಜ್​ಕುಮಾರ್ ಅವರಿಗೆ ಕ್ಯಾನ್ಸರ್ ಇರೋ ವಿಚಾರ ತಿಳಿದ ಬಳಿಕ ಫ್ಯಾನ್ಸ್ ಆತಂಕಗೊಂಡಿದ್ದರು. ಅಮೆರಿಕದಲ್ಲಿ ಚಿಕಿತ್ಸೆ ಪಡೆದ ಅವರು, ಈಗ ಅವರು ಕ್ಯಾನ್ಸರ್ ಮುಕ್ತರಾಗಿದ್ದಾರೆ. ಕ್ಯಾನ್ಸರ್​ನಿಂದ ಚೇತರಿಸಿಕೊಂಡು ಅವರು ಮತ್ತೆ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ಹೀಗಿರುವಾಗಲೇ ಸ್ಟಾರ್ ಹೀರೋ ಒಬ್ಬರಿಗೆ ಕ್ಯಾನ್ಸರ್ ಇರೋ ಬಗ್ಗೆ ಸುದ್ದಿ ಹರಿದಾಡಿತ್ತು. ಈ ವಿಚಾರ ಕೇಳಿ ಅವರ ಅಭಿಮಾನಿಗಳಲ್ಲಿ ಆತಂಕ ಉಂಟಾಗಿತ್ತು. ಅಷ್ಟಕ್ಕೂ ಕ್ಯಾನ್ಸರ್ ಇದೆ ಎಂದು ಸುದ್ದಿ ಹಬ್ಬಿದ್ದು ಯಾರ ಬಗ್ಗೆ? ಮಲಯಾಳಂ ಮೆಗಾಸ್ಟಾರ್ ಮಮ್ಮುಟ್ಟಿ (Mammootty) ಬಗ್ಗೆ. ಹೌದು, ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಸುದ್ದಿ ಒಂದು ಹರಿದಾಡಿತ್ತು. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ನೀಡೋ ಕೆಲಸ ಆಗಿದೆ.

ಮಮ್ಮೂಟಿ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಮಲಯಾಳಂ ಚಿತ್ರರಂಗದಲ್ಲಿ ಈಗಲೂ ಬೇಡಿಕೆ ಉಳಿಸಿಕೊಂಡಿದ್ದಾರೆ. ಅವರಿಗೆ ಈಗ 73 ವರ್ಷ ವಯಸ್ಸು. ಈ ವಯಸ್ಸಿನಲ್ಲೂ ಅವರು ಶ್ರಮವಹಿಸಿ ಸಿನಿಮಾ ಮಾಡುತ್ತಿದ್ದಾರೆ. ಅವರಿಗೆ ಕ್ಯಾನ್ಸರ್ ಇದೆ ಎನ್ನುವ ಸುದ್ದಿ ಹುಟ್ಟಿಕೊಂಡಿತ್ತು. ಅವರು ಸಿನಿಮಾ ಕೆಲಸಗಳ ಮಧ್ಯೆಯೇ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗುತ್ತಾರೆ ಎಂದು ಹೇಳಲಾಗಿತ್ತು.  ಆದರೆ, ಮಮ್ಮುಟ್ಟಿ ತಂಡದವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

‘ಮಮ್ಮುಟ್ಟಿ ಸದ್ಯ ವೆಕೇಶನ್​ನಲ್ಲಿ ಇದ್ದಾರೆ. ಅವರು ಆರೋಗ್ಯವಾಗಿದ್ದಾರೆ. ಅವರಿಗೆ ಕ್ಯಾನ್ಸರ್ ಇದೆ ಎಂಬ ವಿಚಾರದಲ್ಲಿ ಸತ್ಯ ಇಲ್ಲ’ ಎಂದು ತಂಡದ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ‘ರಂಜಾನ್ ಕಾರಣಕ್ಕೆ ಮಮ್ಮುಟ್ಟಿ ಅವರು ಉಪವಾಸ ಮಾಡುತ್ತಿದ್ದಾರೆ. ಇದಕ್ಕಾಗಿ ಬ್ರೇಕ್ ಪಡೆದಿದ್ದಾರೆ. ಅವರು ವೆಕೇಶನ್ ತೆರಳಿದ್ದು, ಶೀಘ್ರವೇ ಶೂಟ್​ಗೆ ಮರಳಲಿದ್ದಾರೆ’ ಎಂದು ಮಮ್ಮುಟ್ಟಿ ತಂಡದವರು ಹೇಳಿದ್ದಾರೆ.

ಇದನ್ನೂ ಓದಿ
Image
ಪುನೀತ್ ಸಮಾಧಿಗೆ ಶಿವಣ್ಣ-ಗೀತಕ್ಕ ಭೇಟಿ; ಭಾವುಕರಾದ ದಂಪತಿ
Image
ಸುದೀಪ್, ದರ್ಶನ್, ಯಶ್ ಫ್ಯಾನ್ಸ್ ಕೂಡ ಪ್ರಾರ್ಥನೆ ಮಾಡಿದ್ದರು: ಶಿವಣ್ಣ
Image
ಎರಡು ತಿಂಗಳ ಬಳಿಕ ನಟನೆಗೆ ಮರಳಿದ ಶಿವಣ್ಣ; ವಿಗ್ ಹಾಕಿ ಶೂಟ್
Image
ದೆಹಲಿ ಸಂಸತ್ತು ಹತ್ತಲಿದ್ದಾರೆ ಶಿವರಾಜ್​ಕುಮಾರ್; ಸಿಕ್ಕಿತು ಹೊಸ ಸುದ್ದಿ

ಇದನ್ನೂ ಓದಿ:  ದೆಹಲಿ ಸಂಸತ್ತು ಹತ್ತಲಿದ್ದಾರೆ ಶಿವರಾಜ್​ಕುಮಾರ್; ಸಿಕ್ಕಿತು ಹೊಸ ಸುದ್ದಿ

ಮಮ್ಮುಟ್ಟಿ ನಟನೆಯ ‘ಬಜೂಕಾ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಏಪ್ರಿಲ್ 10ರಂದು ಸಿನಿಮಾ ರಿಲೀಸ್ ಆಗಲಿದೆ. ಈ ಇತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ