ಕೊವಿಡ್​ ಕಾರಣದಿಂದ ಅರ್ಧಕ್ಕೆ ನಿಂತ ಖ್ಯಾತ ಧಾರಾವಾಹಿ; ವೀಕ್ಷಕರಿಗೆ ಬೇಸರ

ಬಹುತೇಕ ರಾಜ್ಯಗಳಲ್ಲಿ ಲಾಕ್​ಡೌನ್​ ಇರುವುದರಿಂದ ಸಿನಿಮಾ ಶೂಟಿಂಗ್​ ಬೇರೆಡೆ ಶಿಫ್ಟ್​ ಮಾಡೋಣ ಎಂದರೆ ಅದೂ ಅಸಾಧ್ಯವೇ. ಹೀಗಾಗಿ, ವಾಹಿನಿಯವರು ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಕೊವಿಡ್​ ಕಾರಣದಿಂದ ಅರ್ಧಕ್ಕೆ ನಿಂತ ಖ್ಯಾತ ಧಾರಾವಾಹಿ; ವೀಕ್ಷಕರಿಗೆ ಬೇಸರ
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: May 22, 2021 | 7:42 PM

bಕೊವಿಡ್​ ಹೆಚ್ಚುತ್ತಿರುವುದಕ್ಕೆ ದೇಶದ ಬಹುತೇಕ ಕಡೆಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ಇನ್ನು, ಚಿತ್ರಮಂದಿರಗಳು ಮುಚ್ಚಿದ್ದು, ಸಿನಿಮಾ ಹಾಗೂ ಧಾರಾವಾಹಿ ಶೂಟಿಂಗ್​ ಕೂಡ ನಿಲ್ಲಿಸಲಾಗಿದೆ. ಹೀಗಾಗಿ ಅನೇಕ ಧಾರಾವಾಹಿಗಳಿಗೆ ಅರ್ಧಕ್ಕೆ ನಿಲ್ಲುವ ಭಯ ಕಾಡಿದೆ. ಈಗ ಹಿಂದಿಯ ಜನಪ್ರಿಯ ಧಾರಾವಾಹಿ ‘ಶಾದಿ ಮುಬಾರಕ್’​ ಅರ್ಧಕ್ಕೆ ನಿಂತಿದೆ.

​‘ಶಾದಿ ಮುಬಾರಕ್’​ ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ಬಗ್ಗೆ ಸ್ಟಾರ್​ ಪ್ಲಸ್ ನಿರ್ಧಾರ ಕೈಗೊಂಡಿದೆ. ಧಾರಾವಾಹಿಯ ಮುಖ್ಯಪಾತ್ರಧಾರಿ ಮಾನವ್​ ಗೋಹಿಲ್​ಗೆ​ ಕೊವಿಡ್​-19 ಪಾಸಿಟಿವ್​ ಬಂದಿತ್ತು. ಹೀಗಾಗಿ, ಅವರು ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಚೇತರಿಸಿಕೊಳ್ಳಲು ಸಮಯ ಬೇಕು ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸರ್ಕಾರ ಅನುಮತಿ ನೀಡಿದರೂ ಶೂಟಿಂಗ್​ ಅರಂಭವಾಗೋದು ಅನುಮಾನವೇ.

ಬಹುತೇಕ ರಾಜ್ಯಗಳಲ್ಲಿ ಲಾಕ್​ಡೌನ್​ ಇರುವುದರಿಂದ ಸಿನಿಮಾ ಶೂಟಿಂಗ್​ ಬೇರೆಡೆ ಶಿಫ್ಟ್​ ಮಾಡೋಣ ಎಂದರೆ ಅದೂ ಅಸಾಧ್ಯವೇ. ಹೀಗಾಗಿ, ವಾಹಿನಿಯವರು ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಈ ನಿರ್ಧಾರದ ಬಗ್ಗೆ ಪಾತ್ರ ವರ್ಗದವರಿಗೆ ಈಗಾಗಲೇ ಸಂದೇಶ ರವಾನೆ ಆಗಿದೆ.

ಕೊರೊನಾ ಮೊದಲನೇ ಅಲೆ ಕಾಣಿಸಿಕೊಂಡಾಗ ಕನ್ನಡದ ಅನೇಕ ಧಾರಾವಾಹಿಗಳು ಅರ್ಧಕ್ಕೆ ನಿಂತಿದ್ದವು. ಹಿಂದಿಯಲ್ಲೂ ಕೂಡ ಸಾಕಷ್ಟು ಧಾರಾವಾಹಿಗಳು ಅರ್ಧಕ್ಕೆ ನಿಲ್ಲಲ್ಪಟ್ಟಿವೆ. ಈಗ ಎರಡನೇ ಅಲೆ ಕಾಣಿಸಿಕೊಂಡಿದ್ದು ಮತ್ತೆ ಶೂಟಿಂಗ್​ ಸ್ಥಗಿತವಾಗಿದೆ. ಕರ್ನಾಟಕದಲ್ಲಿ ಲಾಕ್​ಡೌನ್​ ವಿಸ್ತರಣೆ ಆಗಿದೆ. ಹೀಗಾಗಿ, ಕನ್ನಡದ ಸಾಕಷ್ಟು ಧಾರಾವಾಹಿಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳುತ್ತಿವೆ. ಇನ್ನೂ ಕೆಲ ಧಾರಾವಾಹಿಗಳು ಅರ್ಧಕ್ಕೆ ನಿಲ್ಲಲ್ಲಿವೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಹೊರ ಬಿದ್ದಿಲ್ಲ.

ಇದನ್ನೂ ಓದಿ: Ranjani Raghavan: ‘ಕನ್ನಡತಿ’ ಧಾರಾವಾಹಿ ನಟಿ ರಂಜನಿ ರಾಘವನ್​ ಫೇಸ್​ಬುಕ್​ ಹ್ಯಾಕ್​; ಯಾರ ಮೇಲಿದೆ ಅನುಮಾನ?

ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿಗೆ ಟೈಟಲ್​ ಫಿಕ್ಸ್​; ಮೇಧಾ ವಿದ್ಯಾಭೂಷಣ​ ನಾಯಕಿ!

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್