AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ನಿರ್ದೇಶಕಿಯನ್ನು ಅನ್​ಫಾಲೋ ಮಾಡಿದ್ದಕ್ಕೆ ನಟಿ ಪಾರ್ವತಿ ಪ್ರತಿಕ್ರಿಯೆ

‘ಮಿಲನ’ ಸಿನಿಮಾದ ನಟಿ ಪಾರ್ವತಿ ಅವರು ‘ಟಾಕ್ಸಿಕ್’ ಚಿತ್ರದ ನಿರ್ದೇಶಕಿ ಗೀತು ಮೋಹನ್​ದಾಸ್ ಅವರನ್ನು ಅನ್​ಫಾಲೋ ಮಾಡಿದ್ದಾರೆ. ಆ ಬಗ್ಗೆ ಎದುರಾದ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪಾವರ್ತಿ ಅವರು ಕೆಲವು ಪ್ರಮುಖ ವಿಚಾರಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಟಾಕ್ಸಿಕ್’ ನಿರ್ದೇಶಕಿಯನ್ನು ಅನ್​ಫಾಲೋ ಮಾಡಿದ್ದಕ್ಕೆ ನಟಿ ಪಾರ್ವತಿ ಪ್ರತಿಕ್ರಿಯೆ
Geetu Mohandas, Parvathy Thiruvothu
ಮದನ್​ ಕುಮಾರ್​
|

Updated on: Sep 09, 2026 | 4:16 PM

Share

‘ಟಾಕ್ಸಿಕ್’ ಸಿನಿಮಾದ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಲಯಾಳಂನ ಪ್ರಖ್ಯಾತ ನಟಿ ಪಾರ್ವತಿ ತಿರುವತ್ತು ಅವರು ಕೊನೆಗೂ ಮೌನ ಮುರಿದಿದ್ದಾರೆ. ಯಶ್ ನಟನೆಯ, ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ ತೆರೆಕಂಡ ಬೆನ್ನಲ್ಲೇ ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಪಾರ್ವತಿ, ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

2016ರಲ್ಲಿ ‘ಕಸಬಾ’ ಸಿನಿಮಾ ವಿವಾದ ಎದುರಾಗಿದ್ದ ಸಮಯದಿಂದಲೂ ಪಾರ್ವತಿ ಮತ್ತು ಗೀತು ಮೋಹನ್‌ದಾಸ್ ಉತ್ತಮ ಸ್ನೇಹಿತರಾಗಿದ್ದರು. ಆದರೆ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನ ಪಾರ್ವತಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಗೀತು ಅವರನ್ನು ಅನ್‌ಫಾಲೋ ಮಾಡಿದ್ದರು. ಇದರಿಂದ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ವದಂತಿಗಳು ಹಬ್ಬಿದ್ದವು.

ಮೌನ ಮುರಿದ ಪಾರ್ವತಿ:

ಈ ಕುರಿತು ಇತ್ತೀಚೆಗೆ ‘ಗಲಾಟಾ ಪ್ಲಸ್’ಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟನೆ ನೀಡಿದ ಪಾರ್ವತಿ ಅವರು, ‘ಅಲ್ಲಿ ಯಾವುದೇ ಗಂಭೀರ ವಿಚಾರ ನಡೆದಿಲ್ಲ. ಇದನ್ನೊಂದು ಸುದ್ದಿ ಮಾಡುವ ಅಗತ್ಯವೂ ಇಲ್ಲ. ಮಹಿಳೆಯರನ್ನು ಪರಸ್ಪರ ಎತ್ತಿಕಟ್ಟುವ ಪ್ರಯತ್ನಗಳು ನಡೆಯುತ್ತಿವೆ. ಆದರೆ ನಾನು ಅಂತಹ ವಿಷಯಗಳಿಗೆ ಬಲಿಯಾಗುವುದಿಲ್ಲ’ ಎಂದು ಖಡಕ್ ಆಗಿ ಹೇಳಿದ್ದಾರೆ.

ಮಲಯಾಳಂ ಚಿತ್ರರಂಗದ ಮಹಿಳೆಯರ ಸಂಘಟನೆಯಾದ ‘ಡಬ್ಲ್ಯುಸಿಸಿ’ (ವುಮೆನ್ ಇನ್ ಸಿನಿಮಾ ಕಲೆಕ್ಟಿವ್) ಕುರಿತು ಮಾತನಾಡುತ್ತಾ, ‘ನಮ್ಮ ನಡುವೆ ಉತ್ತಮ ತಿಳುವಳಿಕೆ ಇದೆ. ಸಿನಿಮಾ ತನ್ನದೇ ಆದ ರೀತಿಯಲ್ಲಿ ಪ್ರೇಕ್ಷಕರನ್ನು ತಲುಪಬೇಕು. ಯಾವುದೇ ವೈಯಕ್ತಿಕ ಇಷ್ಟ-ಕಷ್ಟಗಳು ಸಿನಿಮಾದ ಮೇಲೆ ಪ್ರಭಾವ ಬೀರಬಾರದು’ ಎಂದು ಪಾರ್ವತಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಈ ವಿಡಿಯೋದಲ್ಲಿದೆ ಪೂರ್ತಿ ವಿವರ

‘ಟೇಕ್ ಆಫ್’, ‘ಚಾರ್ಲಿ’, ‘ಬೆಂಗಳೂರು ಡೇಸ್’ ಮುಂತಾದ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಪಾರ್ವತಿ ಅವರು ಶೀಘ್ರದಲ್ಲೇ ಮಲಯಾಳಂನ ‘ಪ್ರಥಮ ದೃಷ್ಟ್ಯಾ ಕುಟ್ಟಕ್ಕಾರ್’ ಹಾಗೂ ಹೃತಿಕ್ ರೋಷನ್ ನಿರ್ಮಾಣದ ‘ದಿ ಸ್ಟಾರ್ಮ್’ ವೆಬ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ‘ಮಿಲನ’ ಸಿನಿಮಾ ಮೂಲಕ ಪಾರ್ವತಿ ಅವರು ಕನ್ನಡದ ಸಿನಿಪ್ರಿಯರನ್ನು ರಂಜಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್