AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ವರ್ಷ ವಯಸ್ಸಿನ ರಾಜ್ ನಿಡಿಮೋರು ಜೊತೆ ಸಮಂತಾ ರುತ್ ಪ್ರಭು ಮದುವೆ

ಸಮಂತಾ ರುತ್ ಪ್ರಭು ಮತ್ತು ನಿರ್ದೇಶಕ ರಾಜ್ ನಿಡಿಮೋರು ನಡುವೆ ದೊಡ್ಡ ವಯಸ್ಸಿನ ಅಂತರ ಇದೆ. ಇಷ್ಟು ದಿನಗಳ ಕಾಲ ಈ ಜೋಡಿಯ ಬಗ್ಗೆ ಗಾಸಿಪ್ ಹರಡಿತ್ತು. ಈಗ ಮದುವೆ ಮೂಲಕ ಅಧಿಕೃತ ಆಗಿದೆ. ಹೊಸ ದಂಪತಿ ರಾಜ್ ನಿಡಿಮೋರು ಮತ್ತು ಸಮಂತಾ ರುತ್ ಪ್ರಭು ವಯಸ್ಸಿನ ಬಗ್ಗೆ ಇಲ್ಲಿದೆ ಮಾಹಿತಿ..

50 ವರ್ಷ ವಯಸ್ಸಿನ ರಾಜ್ ನಿಡಿಮೋರು ಜೊತೆ ಸಮಂತಾ ರುತ್ ಪ್ರಭು ಮದುವೆ
Samantha Ruth Prabhu, Raj Nidimoru
ಮದನ್​ ಕುಮಾರ್​
|

Updated on: Dec 01, 2025 | 5:01 PM

Share

ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಇಷ್ಟು ದಿನ ಅವರ ಖಾಸಗಿ ಬದುಕಿನ ಬಗ್ಗೆ ಗಾಸಿಪ್ ಕೇಳಿಬರುತ್ತಿತ್ತು. ಅದು ಈಗ ನಿಜವಾಗಿದೆ. ನಿರ್ದೇಶಕ ರಾಜ್ ನಿಡಿಮೋರು ಜೊತೆ ಸಮಂತಾ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಮಂತಾ ಮತ್ತು ರಾಜ್ ನಿಡಿಮೋರು (Raj Nidimoru) ಅವರಿಗೆ ಇದು 2ನೇ ಮದುವೆ. ಈ ಮೊದಲು ನಾಗಚೈತನ್ಯ ಜೊತೆ ಮದುವೆ ಆಗಿದ್ದ ಸಮಂತಾ ಅವರು ವಿಚ್ಛೇದನ ಪಡೆದಿದ್ದರು. ಈಗ ರಾಜ್ ನಿಡಿಮೋರು ಜೊತೆ ದಾಂಪತ್ಯ ಜೀವನ ಶುರು ಮಾಡಿದ್ದಾರೆ. ಇವರಿಬ್ಬರ ನಡುವೆ 12 ವರ್ಷಗಳ ವಯಸ್ಸಿನ ಅಂತರ (Age Gap) ಇದೆ.

ಭಾರತೀಯ ಚಿತ್ರರಂಗದಲ್ಲಿ ಭಾರಿ ಜನಪ್ರಿಯತೆ ಹೊಂದಿರುವ ಸಮಂತಾ ರುತ್ ಪ್ರಭು ಅವರಿಗೆ ಈಗ 38 ವರ್ಷ ವಯಸ್ಸು. ಇತ್ತೀಚಿನ ವರ್ಷಗಳಲ್ಲಿ ಅವರಿಗೆ ಅನಾರೋಗ್ಯ ಕಾಡಿತ್ತು. ಆದರೂ ಕೂಡ ಅವರು ಫಿಟ್ನೆಸ್ ಕಡೆಗೆ ಗಮನ ಹರಿಸುವುದನ್ನು ನಿಲ್ಲಿಸಲಿಲ್ಲ. ಆ ಕಾರಣದಿಂದ ಅವರು ಹದಿಹರೆಯದ ಹುಡುಗಿಯಂತೆ ಕಾಣುತ್ತಾರೆ. ಅವರನ್ನು ಕೈ ಹಿಡಿದಿರುವ ರಾಜ್ ನಿಧಿಮೋರು ಅವರಿಗೆ ಈಗ 50 ವರ್ಷ ವಯಸ್ಸು.

ರಾಜ್ ನಿಡಿಮೋರು ಅವರು ನಿರ್ದೇಶನ ಮಾಡಿದ್ದ ‘ದಿ ಫ್ಯಾಮಿಲಿ ಮ್ಯಾನ್ 2’ ವೆಬ್ ಸರಣಿಯಲ್ಲಿ ಸಮಂತಾ ರುತ್ ಪ್ರಭು ಅವರು ನಟಿಸಿದ್ದರು. ಆಗ ಅವರಿಬ್ಬರ ನಡುವೆ ಆಪ್ತತೆ ಬೆಳೆದಿತ್ತು. ಅದೇ ವೇಳೆಗೆ ನಾಗ ಚೈತನ್ಯ ಜೊತೆ ಸಮಂತಾ ಅವರಿಗೆ ವೈಮನಸ್ಸು ಉಂಟಾಗಿತ್ತು. ಬಳಿಕ ಅವರು ವಿಚ್ಛೇದನ ಪಡೆದುಕೊಂಡು ಅಕ್ಕಿನೇನಿ ಕುಟುಂಬದಿಂದ ಹೊರಬಂದರು.

ಹಲವು ದಿನಗಳಿಂದ ರಾಜ್ ನಿಡಿಮೋರು ಜೊತೆಗೆ ಸಮಂತಾ ರುತ್ ಪ್ರಭು ಸುತ್ತಾಡುತ್ತಿದ್ದರು. ಒಟ್ಟಿಗೆ ಫಾರಿನ್ ಟ್ರಿಪ್ ಕೂಡ ಮಾಡಿದ್ದರು. ಕೆಲವು ಸಮಾರಂಭಗಳಲ್ಲಿ ಕೂಡ ಅವರಿಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದರು. ತಾವಿಬ್ಬರು ತುಂಬ ಆಪ್ತವಾಗಿರುವ ಕೆಲವು ಫೋಟೋಗಳನ್ನು ಇನ್​ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದರು. ಆಗಲೇ ಅಭಿಮಾನಿಗಳಿಗೆ ಎಲ್ಲವೂ ಖಚಿತ ಆಗಿತ್ತು. ಆದರೆ ಈ ಜೋಡಿ ಬಾಯಿ ಬಿಟ್ಟಿರಲಿಲ್ಲ.

ಇದನ್ನೂ ಓದಿ: ಸಮಂತಾ ಮದುವೆ ಆದ ರಾಜ್ ನಿಡಿಮೋರು ಆಸ್ತಿ ಎಷ್ಟು ಕೋಟಿ?

ಇಂದು (ಡಿಸೆಂಬರ್ 1) ಸಮಂತಾ ರುತ್ ಪ್ರಭು ಅವರು ರಾಜ್ ನಿಡಿಮೋರು ಜೊತೆ ಮದುವೆ ಆಗಿದ್ದಾರೆ. ಕೆಲವೇ ಕೆಲವು ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಮದುವೆ ಬಳಿಕ ಒಂದಷ್ಟು ಫೋಟೋಗಳನ್ನು ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಕಮೆಂಟ್ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?