AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ವಿಮಾನ ದುರಂತ; ಯಶ್, ರಾಧಿಕಾ ಪಂಡಿತ್, ರಮ್ಯಾ, ರಶ್ಮಿಕಾ ಮಂದಣ್ಣ ಸಂತಾಪ

ಅಹಮದಾಬಾದ್​ನಿಂದ ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವುದು ತೀವ್ರ ನೋವಿನ ಸಂಗತಿ. ಈ ದುರಂತದಲ್ಲಿ ಎಲ್ಲ 242 ಪ್ರಯಾಣಿಕರು ಮೃತರಾಗಿದ್ದಾರೆ. ದುರ್ಘಟನೆ ಬಗ್ಗೆ ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಯಶ್, ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್ ಮುಂತಾದ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಭೀಕರ ವಿಮಾನ ದುರಂತ; ಯಶ್, ರಾಧಿಕಾ ಪಂಡಿತ್, ರಮ್ಯಾ, ರಶ್ಮಿಕಾ ಮಂದಣ್ಣ ಸಂತಾಪ
Ahmedabad Plane Crash
ಮದನ್​ ಕುಮಾರ್​
|

Updated on: Jun 12, 2025 | 8:15 PM

Share

242 ಜನರು ಪ್ರಯಾಣ ಮಾಡುತ್ತಿದ್ದ ಏರ್ ಇಂಡಿಯಾ ವಿಮಾನ ಪತನ (Air India Plane Crash) ಆಗಿದೆ. ಈ ಸುದ್ದಿ ಕೇಳಿ ವಿಶ್ವಾದ್ಯಂತ ಜನರು ಸಂತಾಪ ಸೂಚಿಸುತ್ತಿದ್ದಾರೆ. ಅಹಮದಾಬಾದ್​ನಲ್ಲಿ ನಡೆದ ಈ ಘಟನೆಯಿಂದ ಅನೇಕ ಸೆಲೆಬ್ರಿಟಿಗಳಿಗೂ ಶಾಕ್ ಆಗಿದೆ. ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಈಡಾಗಿದೆ. ಈ ಭೀಕರ ದುರಂತದ ಬಗ್ಗೆ ಯಶ್ (Yash), ರಮ್ಯಾ, ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್ (Allu Arjun), ರಾಧಿಕಾ ಪಂಡಿತ್ ಸೇರಿದಂತೆ ಅನೇಕ ಸೆಲಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಇನ್​ಸ್ಟಾಗ್ರಾಮ್ ಸ್ಟೋರಿ ಮೂಲಕ ಕಂಬನಿ ಮಿಡಿದಿದ್ದಾರೆ.

‘ಅಹಮದಾಬಾದ್​ ಏರ್ ಇಂಡಿಯಾ ಫ್ಲೈಟ್ ವಿಮಾನ ದುರಂತ ಭಯಾನಕವಾಗಿದೆ. ಪ್ರತಿ ಪ್ರಯಾಣಿಕರು, ಸಿಬ್ಬಂದಿ ಹಾಗೂ ಪ್ರಾಣ ಕಳೆದುಕೊಂಡ ಎಲ್ಲ ಮುಗ್ಧ ಜನರಿಗಾಗಿ ನನ್ನ ಹೃದಯ ಮಿಡಿಯುತ್ತಿದೆ. ಇದು ದೊಡ್ಡ ದುರಂತ. ನೋವಿನಲ್ಲಿರುವ ಕುಟುಂಬದವರಿಗೆ ಯಾವ ಮಾತುಗಳಿಂದಲೂ ಸಮಾಧಾನ ಮಾಡಲು ಸಾಧ್ಯವಿಲ್ಲ. ನಿಮಗಾಗಿ ಪ್ರಾರ್ಥಿಸುತ್ತೇವೆ’ ಎಂದು ನಟ ಯಶ್ ಅವರು ಬರೆದುಕೊಂಡಿದ್ದಾರೆ.

‘ಪ್ರತಿ ಪ್ರಯಾಣಿಕರು, ಹಾಸ್ಟೆಲ್​ನಲ್ಲಿ ಇದ್ದ ವಿದ್ಯಾರ್ಥಿಗಳಿಗಾಗಿ ಪ್ರಾರ್ಥಿಸುವೆ. ಈ ದುರಂತದಿಂದ ಆಗಿರುವ ನಷ್ಟದ ಪ್ರಮಾಣ ತುಂಬ ಭೀಕರವಾಗಿದೆ’ ಎಂದು ರಾಧಿಕಾ ಪಂಡಿತ್ ಅವರು ಪೋಸ್ಟ್ ಮಾಡಿದ್ದಾರೆ. ‘ಅಹಮದಾಬಾದ್ ವಿಮಾನ ಪತನದ ಸುದ್ದಿ ಕೇಳಿ ಶಾಕ್ ಆಗಿದೆ. ಮೃತರ ಕುಟುಂಬಕ್ಕಾಗಿ ನನ್ನ ಪ್ರಾರ್ಥನೆಗಳು’ ಎಂದು ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ
Image
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
Image
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
Image
ಅಪಘಾತಕ್ಕೊಳಗಾದ ಏರ್ ಇಂಡಿಯಾ ವಿಮಾನದಲ್ಲಿ ಮಾಜಿ ಸಿಎಂ ರೂಪಾನಿ ಇದ್ರು
Image
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ

‘ಈ ಘಟನೆ ನನ್ನನ್ನು ತೀವ್ರವಾಗಿ ಆಘಾತಗೊಳಿಸಿದೆ. ಪ್ರತಿ ದಿನ ವಿಮಾನದಲ್ಲಿ ಪ್ರಯಾಣಿಸುತ್ತೇನೆ. ಇಷ್ಟು ಹತ್ತಿರದಲ್ಲಿ ಇಂಥ ಘಟನೆ ನಡೆದಿದೆ. ಇದು ತುಂಬ ಭಯಾನಕವಾಗಿದೆ. ಎಲ್ಲ ಪ್ರಯಾಣಿಕರು ಮತ್ತು ಅವರ ಕುಟುಂಬದವರಿಗಾಗಿ ನನ್ನ ಮನ ಮಿಡಿಯುತ್ತಿದೆ’ ಎಂದ ನಟಿ ರಶ್ಮಿಕಾ ಮಂದಣ್ಣ ಅವರು ಬರೆದುಕೊಂಡಿದ್ದಾರೆ.

‘ಅಹ್ಮದಾಬಾದ್ ಏರ್ ಇಂಡಿಯಾ ವಿಮಾನ ಪತನದಿಂದ ಹೃದಯ ಛಿದ್ರವಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದಿದ್ದಾರೆ ನಟ ಅಲ್ಲು ಅರ್ಜುನ್. ಅದೇ ರೀತಿಯ ಬಾಲಿವುಡ್ ಸೆಲೆಬ್ರಿಟಿಗಳಾದ ಅಕ್ಷಯ್ ಕುಮಾರ್, ಸನ್ನಿ ಡಿಯೋಲ್, ರಣದೀಪ್ ಹೂಡಾ, ಪರಿಣೀತಿ ಚೋಪ್ರಾ ಮುಂತಾದವರು ಸಹ ಈ ಘಟನೆಗೆ ಮರುಗಿದ್ದಾರೆ.

ಇದನ್ನೂ ಓದಿ: ಅಹಮದಾಬಾದ್‌ ವಿಮಾನ ಪತನ: ಕರ್ನಾಟಕ ಮೂಲದ ಕೋ ಪೈಲಟ್ ಸಾವು

ಅಹಮದಾಬಾದ್​ನಿಂದ ಲಂಡನ್​ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್​ ಆದ ಕೆಲ ನಿಮಿಷಗಳಲ್ಲಿ ತಾಂತ್ರಿಕ ದೋಷದಿಂದ ನೆಲಕ್ಕೆ ಉರುಳಿತು. ಕೂಡಲೇ ಸ್ಫೋಟಗೊಂಡಿತು. ಆ ಸ್ಥಳದಲ್ಲಿ ಇದ್ದ ಕಟ್ಟಡಗಳು ಕೂಡ ಬೆಂಕಿಗೆ ಆಹುತಿ ಆದವು. 242ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, ಓರ್ವ ಕೆನಡಾ ಪ್ರಜೆ ಹಾಗೂ 7 ಪೋರ್ಚುಗೀಸ್ ಪ್ರಜೆಗಳು ಇದ್ದರು ಎಂಬ ಮಾಹಿತಿ ಇದೆ. ಎಲ್ಲರೂ ಮೃತರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್