AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಜಾನ್ಹವಿಯ ಎಐ ವಿಡಿಯೋ: ‘ಸುಮ್ಮನೆ ಬಿಡಲ್ಲ’ ಎಚ್ಚರಿಕೆ ನೀಡಿದ ಜೂ ಎನ್​​ಟಿಆರ್

ಸಿನಿಮಾ ನಟಿಯರ ಅಶ್ಲೀಲ ವಿಡಿಯೋಗಳನ್ನು, ಚಿತ್ರಗಳನ್ನು ಎಐ ಬಳಸಿ ಸೃಷ್ಟಿಸಿ ಹರಿಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ನಟಿ ಜಾನ್ಹವಿಯ ಕೆಟ್ಟ ವಿಡಿಯೋ ಹರಿಬಿಡಲಾಗಿತ್ತು. ಜೂ ಎನ್​ಟಿಆರ್ ಮತ್ತು ಜಾನ್ಹವಿ ಒಟ್ಟಿಗೆ ನಟಿಸಿದ ಹಾಡನ್ನು ಎಐ ಬಳಸಿ ಕೆಟ್ಟದಾಗಿ ತಿರುಚಲಾಗಿದೆ. ನಟ ಜೂ ಎನ್​​ಟಿಆರ್ ಈ ಕಾರ್ಯವನ್ನು ತೀವ್ರವಾಗಿ ಖಂಡಿಸಿದ್ದು, ‘ದುಷ್ಟರನ್ನು ಸುಮ್ಮನೆ ಬಿಡಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ನಟಿ ಜಾನ್ಹವಿಯ ಎಐ ವಿಡಿಯೋ: ‘ಸುಮ್ಮನೆ ಬಿಡಲ್ಲ’ ಎಚ್ಚರಿಕೆ ನೀಡಿದ ಜೂ ಎನ್​​ಟಿಆರ್
Janhvi Kapoor Jr Ntr
ಮಂಜುನಾಥ ಸಿ.
|

Updated on:Oct 06, 2026 | 3:30 PM

Share

ಎಐ ಜಗತ್ತನೇ ಬದಲಾಯಿಸುತ್ತಿದೆ. ಕೋಟ್ಯಂತರ ಮಂದಿ ಎಐ ಬಳಸಿಕೊಂಡು ತಮ್ಮ ದಿನವಹಿ ಕೆಲಸಗಳನ್ನು ಸುಲಭ ಮಾಡಿಕೊಂಡಿದ್ದಾರೆ. ಆದರೆ ಕೆಲ ದುಷ್ಕರ್ಮಿಗಳು ಇದೇ ಎಐ ಅನ್ನು ದುಷ್ಕೃತ್ಯಗಳಿಗಾಗಿ ಬಳಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಸಿನಿಮಾ ನಟಿಯರ ಅಶ್ಲೀಲ ವಿಡಿಯೋಗಳನ್ನು, ಚಿತ್ರಗಳನ್ನು ಎಐ ಬಳಸಿ ಸೃಷ್ಟಿಸಿ ಹರಿಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ನಟಿ ಜಾನ್ಹವಿಯ ಕೆಟ್ಟ ವಿಡಿಯೋ ಹರಿಬಿಡಲಾಗಿತ್ತು. ನಟ ಜೂ ಎನ್​​ಟಿಆರ್ ಈ ಕಾರ್ಯವನ್ನು ತೀವ್ರವಾಗಿ ಖಂಡಿಸಿದ್ದು, ‘ದುಷ್ಟರನ್ನು ಸುಮ್ಮನೆ ಬಿಡಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್​ಟಿಆರ್ ನಟನೆಯ ‘ದೇವರಾ’ ಸಿನಿಮಾದ ಸೂಪರ್ ಹಿಟ್ ‘ಚುಟ್ಟಮಲ್ಲೇ’ ಹಾಡಿನಲ್ಲಿ ಜೂ ಎನ್​​ಟಿಆರ್ ಮತ್ತು ಜಾನ್ಹವಿ ನಟಿಸಿದ್ದರು. ಎಐ ಬಳಸಿ ಆ ಹಾಡನ್ನು ಕೆಟ್ಟದಾಗಿ ಬದಲಾಯಿಸಿ ಹಂಚಿಕೊಳ್ಳಲಾಗಿತ್ತು. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಕೃತ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜೂನಿಯರ್ ಎನ್​ಟಿಆರ್, ಇದೊಂದು ಅಸಹ್ಯಕರ ಮತ್ತು ನಾಚಿಕೆಗೇಡಿನ ವರ್ತನೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಮಹಿಳೆಯರನ್ನು ತಾಯಂದಿರು ಮತ್ತು ದೇವತೆಯರಂತೆ ಪೂಜಿಸುವ, ‘ಮಾತೃದೇವೋ ಭವ’ ಎನ್ನುವುದನ್ನು ಸಂಸ್ಕೃತಿಯ ಭಾಗವಾಗಿ ಹೊಂದಿರುವ ನಮ್ಮ ದೇಶದಲ್ಲಿ, ಕೆಲವರು ಎಐ ಬಳಸಿ ಮಹಿಳೆಯರನ್ನು ಅತ್ಯಂತ ಕೀಳು ಮಟ್ಟದಲ್ಲಿ ಅವಮಾನಿಸುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಎನ್​ಟಿಆರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯ ವಿಕೃತ ಮನಸ್ಥಿತಿಯ ಕೆಲಸಕ್ಕೆ ಪದಗಳೇ ಇಲ್ಲ ಎಂದು ಅವರು ಕಿಡಿಕಾರಿದ್ದಾರೆ. ಮಾರ್ಫ್ ಮಾಡಿದ ಈ ‘ಚುಟ್ಟಮಲ್ಲೇ’ ವಿಡಿಯೋದ ಹಿಂದೆ ಇರುವ ಕಿಡಿಗೇಡಿಗಳನ್ನು ತಾವೂ ಬಿಡುವುದಿಲ್ಲ ಎಂದು ಎನ್​ಟಿಆರ್ ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೋವನ್ನು ಸೃಷ್ಟಿಸಿದವರ ವಿರುದ್ಧ ಹಾಗೂ ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ:ಮುಂದಕ್ಕೆ ಹೋಯ್ತು ‘ಎಕೆ 47’ ಸಿನಿಮಾ ರಿಲೀಸ್, ಕ್ಷಮೆ ಕೇಳಿದ ನಿರ್ಮಾಪಕ

ಯಾರೂ ಸಹ ಇಂತಹ ಅಸಹ್ಯಕರ ಕಂಟೆಂಟ್ ಅನ್ನು ವೀಕ್ಷಿಸಬೇಡಿ, ಶೇರ್ ಮಾಡಬೇಡಿ ಅಥವಾ ಇದರೊಂದಿಗೆ ಯಾವುದೇ ರೀತಿಯಲ್ಲಿ ತೊಡಗಿಸಿಕೊಳ್ಳಬೇಡಿ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇಂದು ಇದು ಬೇರೆಯವರ ವಿಚಾರವಾಗಿರಬಹುದು, ಆದರೆ ನಾಳೆ ಇದು ನಿಮ್ಮ ತಾಯಿ, ತಂಗಿ, ಪತ್ನಿ ಅಥವಾ ಮಗಳಿಗೂ ಸಂಭವಿಸಬಹುದು ಎಂದು ಎನ್​ಟಿಆರ್ ಆತಂಕ ವ್ಯಕ್ತಪಡಿಸಿದ್ದಾರೆ. ಈ ಕೃತ್ಯವನ್ನು ಜೂ ಎನ್​​ಟಿಆರ್ ಮಾತ್ರವೇ ಅಲ್ಲದೆ ತೆಲುಗು ಚಿತ್ರರಂಗದ ಹಲವರು ಖಂಡಿಸಿದ್ದಾರೆ. ಈ ವಿಷಯದ ಕುರಿತಾಗಿ ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಸರ್ಕಾರಗಳಿಗೆ ಸಹ ದೂರು ನೀಡುವುದಾಗಿ ಹೇಳಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Tue, 6 October 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!