ಎಂಡ್ರೀಲಾ ಶರ್ಮಾ ಸಾವಿನ ವದಂತಿಯನ್ನು ಅಲ್ಲಗಳೆದ ಪ್ರಿಯಕರ; ಈಗ ಹೇಗಿದೆ ನಟಿಯ ಆರೋಗ್ಯ?
ನಟಿ ಎಂಡ್ರೀಲಾ ಶರ್ಮಾ ಸಾವಿನ ವದಂತಿಯನ್ನು ನಟ, ಪ್ರಿಯಕರ ಸಬ್ಯಸಾಚಿ ಚೌಧರಿ ಅಲ್ಲಗಳೆದಿದ್ದು, ಸುಳ್ಳು ಸುದ್ದಿ ಹಬ್ಬಿಸುವವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.
ಬೆಂಗಾಲಿ ಧಾರಾವಾಹಿ ನಟಿ ಎಂಡ್ರೀಲಾ ಶರ್ಮಾ (Aindrila Sharma) ಅವರಿಗೆ ಇತ್ತೀಚೆಗೆ ಒಂದೇ ದಿನ ಹಲವು ಬಾರಿ ಹೃದಯಾಘಾತವಾಗಿತ್ತು. ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ ಎಂಡ್ರೀಲಾ ಶರ್ಮಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಎಂಡ್ರೀಲಾ ಶರ್ಮಾ ಪ್ರಿಯಕರ, ನಟ ಸಬ್ಯಸಾಚಿ ಚೌಧರಿ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡು ‘ಎಂಡ್ರೀಲಾ ಶರ್ಮಾಗಾಗಿ ದೇವರಲ್ಲಿ ಪಾರ್ಥಿಸಿ’ ಎಂದು ಫ್ಯಾನ್ಸ್ ಬಳಿ ವಿನಂತಿಸಿದ್ದರು. ಆದರೆ ಈಗ ಕೆಲ ಕಿಡಿಗೇಡಿಗಳು ಎಂಡ್ರೀಲಾ ಶರ್ಮಾ ಅವರು ಮೃತಪಟ್ಟಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎನ್ನಲಾಗುತ್ತಿದೆ.
ಸುಳ್ಳು ಸುದ್ದಿ ಹಬ್ಬಿಸುವವರಿಗೆ ಎಂಡ್ರೀಲಾ ಶರ್ಮಾ ಪ್ರಿಯಕರ ಮನವಿ
ಎಂಡ್ರೀಲಾ ಶರ್ಮಾ ಅವರು ಮೃತಪಟ್ಟಿದ್ದಾರೆ ಎಂಬ ಸುಳ್ಳು ಸುದ್ದಿ ತಿಳಿಯುತ್ತಿದ್ದಂತೆ ನಟ ಸಬ್ಯಸಾಚಿ ಚೌಧರಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪತ್ರ ಒಂದನ್ನು ಬರೆಕೊಂಡಿದ್ದಾರೆ. ‘ಎಂಡ್ರೀಲಾ ಶರ್ಮಾ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ ಹೃದಯ ಬಡಿತವು ಮುಂಚೆಗಿಂತ ಈಗ ಸುಧಾರಿಸಿದೆ. ಅವರ ರಕ್ತದೊತ್ತಡ ಕೂಡ ಸಾಮಾನ್ಯ ಸ್ಥಿತಿಗೆ ಬಂದಿದೆ. ಸದ್ಯ ಎಂಡ್ರೀಲಾ ಅವರು ಯಾವುದೇ ರೀತಿಯ ಬೆಂಬಲವಿಲ್ಲದೇ ತನಗೆ ಎದುರಾದ ಸಮಸ್ಯೆಯಿಂದ ಹೊರಬರಲು ಪ್ರಯತ್ನಿಸುತ್ತಿದ್ದಾರೆ. ದಯಮಿಟ್ಟು ಇಲ್ಲಸಲ್ಲದ ವದಂತಿಯನ್ನು ಹಬ್ಬಿಸಬೇಡಿ’ ಎಂದು ಸಬ್ಯಸಾಚಿ ಚೌಧರಿ ಅವರು ಮನವಿ ಮಾಡಿದ್ದಾರೆ.
ಎಂಡ್ರೀಲಾ ಶರ್ಮಾಗೆ ಈ ಹಿಂದೆ ಮಿದುಳು ಸ್ಟ್ರೋಕ್ ಕೂಡ ಉಂಟಾಗಿತ್ತು. ಬಳಿಕ ನ. 1 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೆ ವೇಳೆ ಅವರ ಮೆದುಳಲ್ಲಿ ರಕ್ತಸ್ರಾವ ಕೂಡ ಉಂಟಾಗಿದ್ದು, ವೈದ್ಯರು ಕೆಲ ಶಸ್ತ್ರಚಿಕಿತ್ಸೆ ಮಾಡಿದ್ದರು. ಸಿಟಿ ಸ್ಕ್ಯಾನ್ ವರದಿ ಪ್ರಕಾರ ನಟಿಯ ಮೆದುಳಿನ ಎದುರು ಭಾಗದಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿತ್ತು. ರಕ್ತ ಹೆಪ್ಪುಗಟ್ಟುವಿಕೆ ತಡೆಯಲು ವೈದ್ಯರು ಔಷಧಗಳನ್ನು ನೀಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು.
ಎಂಡ್ರೀಲಾ ಶರ್ಮಾ ಅವರಿಗೆ ಈ ಮೊದಲು ಕ್ಯಾನ್ಸರ್ ಉಂಟಾಗಿತ್ತು. ಅದನ್ನು ಅವರು ಜಯಿಸಿ ಬಂದಿದ್ದರು. ಈಗ ಅವರಿಗೆ ಬ್ರೈನ್ ಸ್ಟ್ರೋಕ್ ಆಗಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಎಂಡ್ರೀಲಾ ಶರ್ಮಾ ‘ಜುಮುರ್’ ಧಾರಾವಾಹಿ ಮೂಲಕ ಕಿರುತೆಗೆ ಎಂಟ್ರಿ ಕೊಟ್ಟರು. ‘ಜಿಬೊನ್ ಜೋತ್ಯಿ’, ‘ಜಿಯೋನ್ ಕಥಿ’ ಎಂಬ ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದರು.
ಮತ್ತಷ್ಟು ಮನರಂಜನೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.