ಮದುವೆಯಲ್ಲಿ ಪಾಲ್ಗೊಳ್ಳಲು ಬಂದ ಐಶ್ವರ್ಯಾ ರೈ ಕುಟುಂಬ; ಭರ್ಜರಿ ಡಾನ್ಸ್​ ವಿಡಿಯೋ ವೈರಲ್

ಐಶ್ವರ್ಯಾ ರೈ ತಾಯಿ ಕೂಡ ಈ ಮದುವೆಯಲ್ಲಿ ಪಾಲ್ಗೊಂಡಿದ್ದರು. ಇದು ತುಂಬಾನೇ ಖಾಸಗಿಯಾಗಿ ನಡೆದ ಕಾರ್ಯಕ್ರಮ ಆಗಿದ್ದರಿಂದ ಕೇವಲ ಆಪ್ತರು ಮಾತ್ರ ಭಾಗಿಯಾಗಿದ್ದರು.

ಮದುವೆಯಲ್ಲಿ ಪಾಲ್ಗೊಳ್ಳಲು ಬಂದ ಐಶ್ವರ್ಯಾ ರೈ ಕುಟುಂಬ; ಭರ್ಜರಿ ಡಾನ್ಸ್​ ವಿಡಿಯೋ ವೈರಲ್
ಐಶ್ವರ್ಯಾ ರೈ
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on: Feb 26, 2021 | 5:41 PM

ನಟಿ ಐಶ್ವರ್ಯಾ ರೈ ಮಂಗಳೂರು ಮೂಲದವರು. ಅವರು ಮುಂಬೈನಲ್ಲೇ ಸೆಟಲ್​ ಆದರೂ ಕರ್ನಾಟಕಕ್ಕೆ ಆಗಾಗ ಭೇಟಿ ನೀಡುತ್ತಿರುತ್ತಾರೆ. ಕೆಲವೊಮ್ಮೆ ಅವರು ಮಂಗಳೂರಿನ ದೇವಾಲಯಕ್ಕೆ ಭೇಟಿ ನೀಡಿದ ಉದಾಹರಣೆ ಕೂಡ ಇದೆ. ಈಗ ಅವರು ಸಂಬಂಧಿಯೊಬ್ಬರ ಮದುವೆಗಾಗಿ ಕುಟುಂಬ ಸಮೇತವಾಗಿ ಬೆಂಗಳೂರಿಗೆ ಬಂದಿದ್ದರು. ಪತಿ ಅಭಿಷೇಕ್​ ಬಚ್ಚನ್​ ಹಾಗೂ ಮಗಳು ಆರಾಧ್ಯ ಕೂಡ ಐಶ್ವರ್ಯಾಗೆ ಕಂಪನಿ ನೀಡಿದ್ದರು. ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಐಶ್ವರ್ಯಾ ರೈ ತಾಯಿ ಕೂಡ ಈ ಮದುವೆಯಲ್ಲಿ ಪಾಲ್ಗೊಂಡಿದ್ದರು. ಇದು ತುಂಬಾನೇ ಖಾಸಗಿಯಾಗಿ ನಡೆದ ಕಾರ್ಯಕ್ರಮ ಆಗಿದ್ದರಿಂದ ಕೇವಲ ಆಪ್ತರು ಮಾತ್ರ ಭಾಗಿಯಾಗಿದ್ದರು. ಕೆಲವರು ಸೆಲ್ಫಿ ತೆಗೆದುಕೊಂಡು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇನ್ನು, ಐಶ್ವರ್ಯಾ ರೈ ಅಭಿಮಾನಿಗಳು ಈ ಫೋಟೋಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಇನ್ನು, ಐಶ್ವರ್ಯಾ ಹಾಗೂ ಅಭಿಷೇಕ್​ ಬಚ್ಚನ್​ ಹಿಂದಿ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಆರಾಧ್ಯ ಹುಟ್ಟಿದ ನಂತರ ಐಶ್ವರ್ಯಾ ಸಿನಿಮಾ ರಂಗದಿಂದ ದೂರವೇ ಉಳಿದಿದ್ದಾರೆ. ತಮಿಳಿನ ಪೊನ್ನಿಯಿನ್ ಸೆಲ್ವನ್ ಸಿನಿಮಾದಲ್ಲಿ ಐಶ್ವರ್ಯಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅಭಿಷೇಕ್ ಬಚ್ಚನ್ ಜತೆಗಿನ ‘ಗುರು’ ನೆನಪು ಹಂಚಿಕೊಂಡ ಐಶ್ವರ್ಯಾ ರೈ