ರಜನಿಕಾಂತ್​ಗೆ ನಾಯಕಿ ಆದ ಐಶ್ವರ್ಯಾ ರೈ; ಹೊಸ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ

‘ಬೀಸ್ಟ್’ ಸಿನಿಮಾ ಹೇಳಿಕೊಳ್ಳುವಂತಹ ಉತ್ತಮ ವಿಮರ್ಶೆ ಪಡೆದುಕೊಂಡಿಲ್ಲ. ಈ ಚಿತ್ರಕ್ಕೆ ನೆಲ್ಸನ್ ದಿಲೀಪ್​ಕುಮಾರ್ ಅವರು ಆ್ಯಕ್ಷನ್​ ಕಟ್​ ಹೇಳಿದ್ದರು. ರಜನಿ 169ನೇ ಚಿತ್ರಕ್ಕೆ ನೆಲ್ಸನ್ ಆ್ಯಕ್ಷನ್​ಕಟ್​ ಹೇಳುತ್ತಿದ್ದಾರೆ. ಈ ಚಿತ್ರಕ್ಕೆ ಐಶ್ವರ್ಯಾ ಅವರು ನಾಯಕಿ ಆಗಿ ತಂಡ ಸೇರಿಕೊಂಡಿದ್ದಾರೆ ಎಂದು ವರದಿ ಆಗಿದೆ.

ರಜನಿಕಾಂತ್​ಗೆ ನಾಯಕಿ ಆದ ಐಶ್ವರ್ಯಾ ರೈ; ಹೊಸ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ
ಐಶ್ವರ್ಯಾ-ರಜನಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 07, 2022 | 5:46 PM

ರಜನಿಕಾಂತ್ (Rajanikanth) ಹಾಗೂ ಐಶ್ವರ್ಯಾ ರೈ (Aishwarya Rai Bachchan)ಇಬ್ಬರೂ ‘ರೋಬೋ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಆ ಬಳಿಕ ಐಶ್ವರ್ಯಾ ರೈ ಅವರು ಮತ್ತೆ ದಕ್ಷಿಣದತ್ತ ಮುಖ ಮಾಡಿರಲಿಲ್ಲ. ಈಗ ಅವರು ಕುಟುಂಬದ ಜವಾಬ್ದಾರಿಗಳನ್ನು ನಿಭಾಯಿಸುವುದರಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಐಶ್ವರ್ಯಾ ರೈ ಮತ್ತೆ ದಕ್ಷಿಣ ಭಾರತದತ್ತ ಮುಖ ಮಾಡುತ್ತಿದ್ದಾರೆ. ಅವರು ರಜನಿಕಾಂತ್ ನಟನೆಯ 169ನೇ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಆಗಿದ್ದಾರೆ ಎಂದು ವರದಿ ಆಗಿದೆ.

‘ಬೀಸ್ಟ್’ ಸಿನಿಮಾ ಹೇಳಿಕೊಳ್ಳುವಂತಹ ಉತ್ತಮ ವಿಮರ್ಶೆ ಪಡೆದುಕೊಂಡಿಲ್ಲ. ಈ ಚಿತ್ರಕ್ಕೆ ನೆಲ್ಸನ್ ದಿಲೀಪ್​ಕುಮಾರ್ ಅವರು ಆ್ಯಕ್ಷನ್​ ಕಟ್​ ಹೇಳಿದ್ದರು. ರಜನಿ 169ನೇ ಚಿತ್ರಕ್ಕೆ ನೆಲ್ಸನ್ ಆ್ಯಕ್ಷನ್​ಕಟ್​ ಹೇಳುತ್ತಿದ್ದಾರೆ. ಈ ಚಿತ್ರಕ್ಕೆ ಐಶ್ವರ್ಯಾ ಅವರು ನಾಯಕಿ ಆಗಿ ತಂಡ ಸೇರಿಕೊಂಡಿದ್ದಾರೆ ಎಂದು ವರದಿ ಆಗಿದೆ. ಕೊನೆಯ ಸಿನಿಮಾ ಸೋತಿದ್ದರಿಂದ ನೆಲ್ಸನ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದಾರೆ.

ಐಶ್ವರ್ಯಾ ರೈ ಅವರು ಇತ್ತೀಚೆಗೆ ಫ್ಯಾಮಿಲಿ ಜವಾಬ್ದಾರಿಗಳನ್ನು ನಿಭಾಯಿಸುವುದರಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ, ಸಿನಿಮಾ ಆಯ್ಕೆಯಲ್ಲಿ ತುಂಬಾನೇ ಚ್ಯೂಸಿ ಆಗಿದ್ದಾರೆ. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅದು ರಜನಿಕಾಂತ್ ಜತೆಗೆ ಅನ್ನೋದು ವಿಶೇಷ. ಈ ವಿಚಾರ ಅವರ ಫ್ಯಾನ್ಸ್​​ಗೆ ಖುಷಿ ನೀಡಿದೆ.

ಇದನ್ನೂ ಓದಿ
Image
ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು
Image
‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ
Image
ಭೂಗತ ಲೋಕದ ಕಥೆಯಲ್ಲಿ ಶಿವರಾಜ್​​ಕುಮಾರ್; ‘ಓಂ’ ರೀತಿಯಲ್ಲಿ ಹೊಸ ಸಿನಿಮಾ
Image
ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವರಾಜ್​ಕುಮಾರ್

ರಜನಿಕಾಂತ್​ ಅವರ 169ನೇ ಸಿನಿಮಾ ನೆಲ್ಸನ್​ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಖ್ಯಾತ ನಿರ್ದೇಶಕ ಅನಿರುದ್ಧ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸನ್​ ಪಿಕ್ಚರ್ಸ್​ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಚಿತ್ರಕ್ಕೆ ಜುಲೈ ತಿಂಗಳಿಂದ ಶೂಟಿಂಗ್ ಆರಂಭವಾಗಲಿದೆ.

ಇದನ್ನೂ ಓದಿ: ‘ಬೀಸ್ಟ್​’ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಸಿನಿಮಾದಲ್ಲಿ ಶಿವರಾಜ್​ಕುಮಾರ್​-ರಜನಿಕಾಂತ್​ ನಟನೆ?

ನೆಲ್ಸನ್ ನಿರ್ದೇಶನದ ‘ಡಾಕ್ಟರ್​’ ಸಿನಿಮಾ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಈ ಸಿನಿಮಾ ಬಳಿಕ ನೆಲ್ಸನ್​ ಕೈಗೆತ್ತಿಕೊಂಡಿದ್ದು ‘ಬೀಸ್ಟ್​’ ಚಿತ್ರ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಹೀನಾಯ ಸೋಲು ಕಂಡಿತ್ತು. ಈಗ ಅವರ ಮುಂದಿನ ಸಿನಿಮಾ ಬಗ್ಗೆ ನಿರೀಕ್ಷೆ ಇದೆ.

ಐಶ್ವರ್ಯಾ ರೈ ಅವರು ಇತ್ತೀಚೆಗೆ ಕಾನ್​ ಚಿತ್ರೋತ್ಸವದಲ್ಲಿ ಕಾಣಿಸಿಕೊಂಡಿದ್ದರು. ಅವರು ನಟನೆಗೆ ಬರುವುದಕ್ಕೂ ಮೊದಲೂ ಮಾಡೆಲಿಂಗ್​ನಲ್ಲಿ ಬ್ಯುಸಿ ಆಗಿದ್ದರು. 1992ರಲ್ಲಿ ಅವರು ಪಡೆದ ಮೊದಲ ಸಂಭಾವನೆ 1500 ರೂಪಾಯಿ ಎನ್ನುವ ವಿಚಾರ ಕೂಡ ಇತ್ತೀಚೆಗೆ ಸಾಕಷ್ಟು ಚರ್ಚೆ ಆಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:46 pm, Tue, 7 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ