AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಕಮೆಂಟ್; ರಮ್ಯಾ, ವಿಜಯಲಕ್ಷ್ಮೀ ಬಳಿಕ ದೂರು ದಾಖಲಿಸಿದ ಐಶ್ವರ್ಯಾ ಸಿಂಧೋಗಿ

ಸ್ಯಾಂಡಲ್‌ವುಡ್ ನಟಿ ಐಶ್ವರ್ಯ ಸಿಂದೋಗಿ ಆನ್‌ಲೈನ್ ಕಿರುಕುಳದ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಮೆಂಟ್‌ಗಳನ್ನು ಹಾಕುತ್ತಿರುವ ಪರಿಚಯಸ್ಥ ವ್ಯಕ್ತಿಯ ವಿರುದ್ಧ ಸಂಜಯ್ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಮ್ಯಾ ಮತ್ತು ವಿಜಯಲಕ್ಷ್ಮಿ ಪ್ರಕರಣಗಳಲ್ಲಿ ಕಿಡಿಗೇಡಿಗಳನ್ನು ಬಂಧಿಸಿದ ನಂತರವೂ ನಟಿಯರ ಮೇಲೆ ಇಂತಹ ಸೈಬರ್ ದಾಳಿಗಳು ಮುಂದುವರಿದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಅಶ್ಲೀಲ ಕಮೆಂಟ್; ರಮ್ಯಾ, ವಿಜಯಲಕ್ಷ್ಮೀ ಬಳಿಕ ದೂರು ದಾಖಲಿಸಿದ ಐಶ್ವರ್ಯಾ ಸಿಂಧೋಗಿ
ಐಶ್ವರ್ಯಾ
ಪ್ರದೀಪ್​ ಚಿಕ್ಕಾಟಿ
| Edited By: |

Updated on: Jul 20, 2026 | 8:40 AM

Share

ಮುಖ್ಯಾಂಶಗಳು

  • ಸಾಮಾಜಿಕ ಜಾಲತಾಣಗಳಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ
  • ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು
  • ಪರಿಚಯಸ್ಥ ವ್ಯಕ್ತಿಯಿಂದಲೇ ನಕಲಿ ಖಾತೆಗಳ ಜಾಲ

ಸ್ಯಾಂಡಲ್‌ವುಡ್ ನಟಿಯರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸುವ ಮತ್ತು ಅವಹೇಳನಕಾರಿ ಕಮೆಂಟ್ ಮಾಡುವುದಕ್ಕೆ ಬ್ರೇಕ್ ಬಿದ್ದಿಲ್ಲ. ನಟಿ ರಮ್ಯಾ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ಈ ವಿಷಯವನ್ನು ಗಂಭೀರವಾಗಿ ಸ್ವೀಕರಿಸಿ ಕೇಸ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಅರೆಸ್ಟ್ ಕೂಡ ನಡೆಯಿತು. ಆದರೂ ಕೆಲವರು ಬುದ್ಧಿ ಕಲಿತಿಲ್ಲ. ಈಗ ಕನ್ನಡದ ಮತ್ತೋರ್ವ ನಟಿ ಐಶ್ವರ್ಯ ಸಿಂದೋಗಿ ಅವರು ಇಂತಹ ಕಿಡಿಗೇಡಿಗಳ ಕಾಟಕ್ಕೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ನಟಿ ಐಶ್ವರ್ಯ ಸಿಂಧೋಗಿ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಅಪ್‌ಲೋಡ್ ಮಾಡಿರುವ ಪೋಸ್ಟ್‌ಗಳಿಗೆ ಸತತವಾಗಿ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಕಮೆಂಟ್‌ಗಳನ್ನು ಮಾಡಲಾಗುತ್ತಿದೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮಗೆ ಪರಿಚಯವಿರುವ ವ್ಯಕ್ತಿಯೊಬ್ಬರ ಹೆಸರನ್ನು ಉಲ್ಲೇಖಿಸಿ ದೂರು ದಾಖಲಿಸಿದ್ದಾರೆ.

ಈ ಹಿಂದೆ ಕೂಡ ಇದೇ ವ್ಯಕ್ತಿ ಐಶ್ವರ್ಯಾಗೆ ಬೆದರಿಕೆ ಹಾಕಿದ್ದರು. ಆ ವೇಳೆ ಕೇಸ್ ದಾಖಲಾಗಿತ್ತು. ಈಗ ಅದೇ ವ್ಯಕ್ತಿ ನಕಲಿ ಖಾತೆಗಳನ್ನು ಸೃಷ್ಟಿಸಿ, ಅವುಗಳ ಮೂಲಕ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ತಮಗೆ ತೊಂದರೆ ನೀಡುತ್ತಿರುವ ಆ ನಕಲಿ ಖಾತೆಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಐಶ್ವರ್ಯಾ ಮನವಿ ಮಾಡಿದ್ದಾರೆ. ನಟಿಯ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಸದ್ಯ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಹಿಂದಿನ ಪ್ರಕರಣಗಳ ಹಿನ್ನೆಲೆ:

ಸಾಮಾಜಿಕ ಜಾಲತಾಣಗಳಲ್ಲಿ ನಟಿಯರಿಗೆ ಈ ರೀತಿಯ ಕಿರುಕುಳ ನೀಡುತ್ತಿರುವುದು ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ರಮ್ಯಾ ಹಾಗೂ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರಿಗೂ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಕಮೆಂಟ್‌ಗಳ ಮೂಲಕ ನಿಂದಿಸಲಾಗಿತ್ತು.

ಇದನ್ನೂ ಓದಿ: ‘ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ’ ವಿಜಯಲಕ್ಷ್ಮಿ ದರ್ಶನ್ ಟಾಂಗ್ ಕೊಟ್ಟಿದ್ದು ಯಾರಿಗೆ?

ಆನ್‌ಲೈನ್‌ನಲ್ಲಿ ಅವಹೇಳನಕಾರಿ ಕಮೆಂಟ್‌ಗಳನ್ನು ಹಾಕಿ ಮಾನಸಿಕ ಕಿರುಕುಳ ನೀಡಿದ್ದಕ್ಕಾಗಿ ಇವರಿಬ್ಬರೂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸಿ, ನಟಿಯರಿಗೆ ಕೆಟ್ಟ ಕಮೆಂಟ್ ಮಾಡಿದ್ದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಅರೆಸ್ಟ್ ಮಾಡಿದ್ದರು. ನಟಿಯರ ತೇಜೋವಧೆ ಮಾಡುವವರ ವಿರುದ್ಧ ಕಾನೂನು ಕಠಿಣ ಕ್ರಮ ಜರುಗಿಸುತ್ತಿದ್ದರೂ, ಕಿಡಿಗೇಡಿಗಳ ಇಂತಹ ವಿಕೃತ ನಡೆ ಮಾತ್ರ ನಿಲ್ಲುತ್ತಿಲ್ಲ ಎಂಬುದಕ್ಕೆ ಐಶ್ವರ್ಯ ಸಿಂದೋಗಿ ಅವರ ಪ್ರಕರಣವೇ ಸಾಕ್ಷಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಮಧ್ಯಾಹ್ನ ಚೆನ್ನಮ್ಮ ಅಂತ್ಯಕ್ರಿಯೆ: ಪ್ರಮುಖ ಬಿಜೆಪಿ ನಾಯಕರು ಭಾಗಿ
ಇಂದು ಮಧ್ಯಾಹ್ನ ಚೆನ್ನಮ್ಮ ಅಂತ್ಯಕ್ರಿಯೆ: ಪ್ರಮುಖ ಬಿಜೆಪಿ ನಾಯಕರು ಭಾಗಿ
ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ?
ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ?
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!