AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ನಟ ಅಜಿತ್ ಆಸ್ಪತ್ರೆಗೆ ದಾಖಲು, ಅಭಿಮಾನಿಗಳಲ್ಲಿ ಆತಂಕ

Ajith Kumar: ತಮಿಳಿನ ಸ್ಟಾರ್ ನಟ ಅಜಿತ್ ಕುಮಾರ್ ಹಠಾತ್ತನೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನೈನ ಅಪೋಲೊ ಆಸ್ಪತ್ರೆಗೆ ಅಜಿತ್​ರನ್ನು ದಾಖಲಿಸಲಾಗಿದೆ.

ತಮಿಳು ನಟ ಅಜಿತ್ ಆಸ್ಪತ್ರೆಗೆ ದಾಖಲು, ಅಭಿಮಾನಿಗಳಲ್ಲಿ ಆತಂಕ
Follow us
ಮಂಜುನಾಥ ಸಿ.
|

Updated on: Mar 07, 2024 | 6:53 PM

ತಮಿಳಿನ ಜನಪ್ರಿಯ ನಟ ಅಜಿತ್ ಕುಮಾರ್ (Ajith Kumar) ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅಜಿತ್ ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು (ಮಾರ್ಚ್ 07) ರ ಬೆಳಿಗ್ಗೆ ಅಜಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಎದುರಾದ ಆರೋಗ್ಯ ಸಮಸ್ಯೆ ಏನೆಂಬುದರ ಬಗ್ಗೆ ಇನ್ನಷ್ಟೆ ಖಚಿತ ಮಾಹಿತಿ ತಿಳಿಯಬೇಕಿದೆ.

ಅಜಿತ್​ ಆಸ್ಪತ್ರೆಗೆ ದಾಖಲಾಗಿರುವ ವಿಷಯವನ್ನು ಅವರ ಆಪ್ತ ಮೂಲಗಳು ಮಾಧ್ಯಮಗಳಿಗೆ ಖಚಿತಪಡಿಸಿವೆ. ಆದರೆ ಅಜಿತ್ ಆಸ್ಪತ್ರೆಗೆ ದಾಖಲಾಗಿರುವುದಕ್ಕೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಕೆಲವು ಅಭಿಮಾನಿ ಪೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿಯಂತೆ ಅಜಿತ್ ಅವರು ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ.

ಅಜಿತ್ ಆಸ್ಪತ್ರೆಗೆ ದಾಖಲಾಗಿರುವುದು ನಿಜ ಆದರೆ ಈ ಬಗ್ಗೆ ಯಾವುದೇ ಊಹಾಪೋಹಗಳನ್ನು ಹರಿಬಿಡುವುದು ಬೇಡ, ಆಸ್ಪತ್ರೆಯಿಂದಲೇ ಖಚಿತ ಮಾಹಿತಿ ಹೊರಬೀಳಲಿದೆ ಎಂದು ಅಜಿತ್​ರ ಆಪ್ತರು ಮಾಧ್ಯಮಗಳಿಗೆ ತಿಳಿಸಿರುವುದಾಗಿ ತಮಿಳಿನ ಕೆಲ ಮಾಧ್ಯಮಗಳು ವರದಿ ಮಾಡಿವೆ. ಅಜಿತ್​, ಹಠಾತ್ತನೆ ಆಸ್ಪತ್ರೆಗೆ ದಾಖಲಾಗಿರುವುದು ಅವರ ಅಭಿಮಾನಿಗಳಿಗೆ ಆತಂಕ ತಂದಿದೆ.

ಇದನ್ನೂ ಓದಿ:ನಟ ಅಜಿತ್ ಕುಮಾರ್ ಟ್ಯಾಲೆಂಟ್ ಬಗ್ಗೆ ನಿಮಗೆಷ್ಟು ಗೊತ್ತು? ಇವರು ಫ್ಲೈಟ್ ಕೂಡ ಓಡಿಸ್ತಾರೆ

ಅಜಿತ್, ಕೆಲವು ದಿನಗಳ ಹಿಂದೆಯಷ್ಟೆ ಪತ್ನಿ ಹಾಗೂ ಕುಟುಂಬದ ಆಪ್ತರೊಡನೆ ತಮ್ಮ ಪುತ್ರನ ಹುಟ್ಟುಹಬ್ಬ ಆಚರಣೆಯಲ್ಲಿ ಪಾಲ್ಗೊಂಡಿದ್ದರು. ಅಜಿತ್, ತಮ್ಮ ವಾರಗೆಯ ಇತರೆ ನಟರಂತಲ್ಲದೆ ವೈಯಕ್ತಿಕ ಆರೋಗ್ಯ, ವೈಯಕ್ತಿಕ ಹವ್ಯಾಸಗಳಲ್ಲಿ ಹೆಚ್ಚಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬೈಕರ್ ಸಹ ಆಗಿರುವ ಅಜಿತ್ ಕುಮಾರ್, ದೇಶ-ವಿದೇಶಗಳಲ್ಲಿ ಬೈಕಿಂಗ್ ಮಾಡಿದ್ದಾರೆ. ಶಿಸ್ತಿನ ಜೀವನ ಮಾಡುತ್ತಿರುವ ಅಜಿತ್​ಗೆ ಹಠಾತ್ತನೆ ಏನಾಯ್ತು ಎಂಬುದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಅಜಿತ್ 1990ರಿಂದಲೂ ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ವಿಜಯ್, ರಜನೀಕಾಂತ್, ಸೂರ್ಯ ರೀತಿಯಲ್ಲಿಯೇ ಭಾರಿ ದೊಡ್ಡ ಅಭಿಮಾನಿ ಬಳಗವನ್ನು ಅಜಿತ್ ಹೊಂದಿದ್ದಾರೆ. ತಮ್ಮ 35 ವರ್ಷಗಳ ವೃತ್ತಿ ಜೀವನದಲ್ಲಿ ಹಲವು ಸೂಪರ್-ಡೂಪರ್ ಹಿಟ್ ಸಿನಿಮಾಗಳನ್ನು ಅಜಿತ್ ಕುಮಾರ್ ನೀಡಿದ್ದಾರೆ. ಪ್ರಸ್ತುತ ಅವರು ವಿದಾ ಮುಯಾರ್ಚಿ ತಮಿಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್