AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿ ವಿರುದ್ಧ ಸಿಟ್ಟಿಗೆದ್ದ ನಟ ಅಜಿತ್ ಕುಮಾರ್: ಜಾಲತಾಣಗಳಲ್ಲಿ ವ್ಯಾಪಕ ಟೀಕೆ

ಯುಕೆನಲ್ಲಿ ನಡೆದ ರೇಸಿಂಗ್ ಸ್ಪರ್ಧೆಯಲ್ಲಿ ನಟ ಅಜಿತ್ ಕುಮಾರ್ ಅಭಿಮಾನಿಯೊಬ್ಬನ ಮೇಲೆ ಕೋಪಗೊಂಡ ವೀಡಿಯೋ ವೈರಲ್ ಆಗಿದೆ. ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ಅಜಿತ್ ಅಸಮಾಧಾನ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಈ ವೀಡಿಯೋ ಈಗ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ.

ಅಭಿಮಾನಿ ವಿರುದ್ಧ ಸಿಟ್ಟಿಗೆದ್ದ ನಟ ಅಜಿತ್ ಕುಮಾರ್: ಜಾಲತಾಣಗಳಲ್ಲಿ ವ್ಯಾಪಕ ಟೀಕೆ
ಅಜಿತ್ ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 14, 2026 | 7:14 PM

Share

ಮುಖ್ಯಾಂಶಗಳು

  • ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ಅಜಿತ್ ಆಕ್ರೋಶ
  • ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರ ತೀವ್ರ ಕ್ಲಾಸ್
  • ವಿಜಯ್ ಸಾಥ್ ನಡುವೆಯೂ ಅಜಿತ್ ವೀಡಿಯೋ ವೈರಲ್

ಯುಕೆನಲ್ಲಿ ನಡೆದ ರೇಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಟ ಅಜಿತ್ ಕುಮಾರ್ ಅವರ ವೀಡಿಯೋ ಒಂದು ಈಗ ವೈರಲ್ ಆಗಿದೆ. ಸೆಲ್ಫಿ ಕೇಳಲು ಬಂದ ಅಭಿಮಾನಿಯೊಬ್ಬನ ಮೇಲೆ ಅವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಅಜಿತ್ ನಡವಳಿಕೆಯನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ. ನಟನ ಈ ಕೋಪದ ನಡೆ ಪ್ರೇಕ್ಷಕರಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಮಿಚೆಲಿನ್ ಲೇ ಮ್ಯಾನ್ಸ್ ಕಪ್ ರೇಸ್ ಸಿಲ್ವರ್‌ಸ್ಟೋನ್‌ನಲ್ಲಿ ಇತ್ತೀಚೆಗೆ ನಡೆಯಿತು. ಈ ರೇಸ್‌ನಲ್ಲಿ ಅಜಿತ್ ಕುಮಾರ್ ಸ್ಪರ್ಧಿಸಿದ್ದರು. ನಟ ವಿಜಯ್ ಕೂಡ ಭಾರತೀಯ ಚಾಲಕರನ್ನು ಪ್ರೋತ್ಸಾಹಿಸಲು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ರೇಸ್‌ಗೆ ಚಾಲನೆ ನೀಡಲು ವಿಜಯ್ ಹಸಿರು ಬಾವುಟ ಪ್ರದರ್ಶಿಸಿದ್ದರು. ಇಬ್ಬರೂ ದಿಗ್ಗಜ ನಟರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಫೋಟೋಗಳು ವೈರಲ್ ಆಗಿದ್ದವು.

ಈ ಸಂಭ್ರಮದ ನಡುವೆಯೇ ಅಜಿತ್ ಅವರ ಹೊಸ ವೀಡಿಯೋ ಒಂದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಅಜಿತ್ ನಡೆದು ಹೋಗುತ್ತಿದ್ದಾಗ ಅಭಿಮಾನಿಯೊಬ್ಬ ಸೆಲ್ಫಿ ತೆಗೆದುಕೊಳ್ಳಲು ಮುಂದೆ ಬಂದಿದ್ದಾನೆ. ದಾರಿ ತಡೆದಿದ್ದನ್ನು ಕಂಡು ಅಜಿತ್ ತೀವ್ರ ಕೋಪದಿಂದ ಆತನನ್ನು ದಿಟ್ಟಿಸಿ ನೋಡಿದ್ದಾರೆ. ಸೊಂಟದ ಮೇಲೆ ಕೈಯಿಟ್ಟು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಅವರ ಬಾಡಿಗಾರ್ಡ್ ಅಭಿಮಾನಿಯನ್ನು ಪಕ್ಕಕ್ಕೆ ಸರಿಸಿದ್ದಾರೆ.

ಅಜಿತ್ ಅವರ ಈ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಅಭಿಮಾನಿಗಳಿಲ್ಲದಿದ್ದರೆ ನಟರಿಗೆ ಯಾವುದೇ ಬೆಲೆ ಇಲ್ಲ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. “ಫಾರ್ಮುಲಾ ಒನ್ ಚಾಂಪಿಯನ್ ಲೂಯಿಸ್ ಹ್ಯಾಮಿಲ್ಟನ್ ಕೂಡ ಅಭಿಮಾನಿಗಳ ಜೊತೆ ಹೀಗೆ ನಡೆದುಕೊಳ್ಳುವುದಿಲ್ಲ” ಎಂದು ಜನರು ಕಿಡಿಕಾರಿದ್ದಾರೆ. ನಟರು ಅಭಿಮಾನಿಗಳಿಗೆ ಗೌರವ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: ಅಜಿತ್ ಕುಮಾರ್ 64ನೇ ಸಿನಿಮಾಗೆ  ಡೇರ್‌ಡೆವಿಲ್; ಶೀರ್ಷಿಕೆ; ರೇಸಿಂಗ್ ಸಾಕ್ಷ್ಯಚಿತ್ರ ;ಗ್ಲಾಡಿಯೇಟರ್ಸ್  ಫಸ್ಟ್ ಲುಕ್ ಔಟ್

ತಮಿಳುನಾಡು ಮುಖ್ಯಮಂತ್ರಿಯಾಗಿ ರೇಸ್‌ಗೆ ಆಗಮಿಸಿದ್ದ ವಿಜಯ್ ಕಾರ್ಯಕ್ರಮದ ಹೈಲೈಟ್ ಆಗಿದ್ದರು. ಅಜಿತ್ ಅವರ ‘ರೆಡ್‌ಆಂಟ್ ಬೈ ವಿರಾಜ್’ ತಂಡವು ರೇಸ್‌ನಲ್ಲಿ 38 ನೇ ಸ್ಥಾನ ಪಡೆಯಿತು. ರೇಸಿಂಗ್ ಅಂಗಳದ ಈ ಅಪರೂಪದ ಕ್ಷಣಗಳು ಸುದ್ದಿಯಾಗಿದ್ದವು. ಆದರೆ ಈಗ ಅಜಿತ್ ಅವರ ಕೋಪದ ವೀಡಿಯೋ ಸಿನಿಪ್ರಿಯರ ಗಮನವನ್ನು ಬೇರೆಡೆ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!