AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thunivu Movie: ‘ತುನಿವು’ ರಿಲೀಸ್ ವೇಳೆ ಅವಘಡ; ಅಜಿತ್ ಕುಮಾರ್ ಅಭಿಮಾನಿ ಸಾವು

ಭರತ್ ಕುಮಾರ್ ಅವರು ಮೃತ ವ್ಯಕ್ತಿ. ಭರತ್ ಮುಂಜಾನೆ 1 ಗಂಟೆಗೆ ಆಯೋಜನೆಗೊಂಡಿದ್ದ ಶೋ ವೀಕ್ಷಿಸಲು ತೆರಳಿದ್ದರು. ಸೆಲೆಬ್ರೇಷನ್​ನಲ್ಲಿ ಭಾಗಿಯಾಗಿದ್ದ ಭರತ್ ಟ್ರಕ್ ಏರಿದ್ದರು. ಟ್ರಕ್ ನಿಧಾನವಾಗಿ ಚಲಿಸುತ್ತಿತ್ತು. ಟ್ರಕ್​ನಿಂದ ಭರತ್ ಜಿಗಿದಿದ್ದಾರೆ.

Thunivu Movie: ‘ತುನಿವು’ ರಿಲೀಸ್ ವೇಳೆ ಅವಘಡ; ಅಜಿತ್ ಕುಮಾರ್ ಅಭಿಮಾನಿ ಸಾವು
ಅಜಿತ್ ಕುಮಾರ್
TV9 Web
| Edited By: |

Updated on: Jan 11, 2023 | 12:02 PM

Share

ಅಜಿತ್ ಕುಮಾರ್ (Ajith Kumar) ನಟನೆಯ ‘ತುನಿವು’ ಸಿನಿಮಾ ಇಂದು (ಜನವರಿ 11) ರಿಲೀಸ್ ಆಗಿದೆ. ಈ ಸಿನಿಮಾವನ್ನು ಅಜಿತ್ ಅಭಿಮಾನಿಗಳು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚೆನ್ನೈನಲ್ಲಿ ಈ ಚಿತ್ರಕ್ಕೆ ಭರ್ಜರಿ ಸ್ವಾಗತ ಸಿಕ್ಕಿದೆ. ಬೆಳಗ್ಗೆ ಐದು ಗಂಟೆಗೆ ಅನೇಕ ಕಡೆಗಳಲ್ಲಿ ‘ತುನಿವು’ ಚಿತ್ರದ (Thunivu Movie) ಶೋಗಳು ಪ್ರದರ್ಶನ ಕಂಡವು. ಈ ಚಿತ್ರವನ್ನು ಸ್ವಾಗತಿಸುವ ವೇಳೆ ಅವಘಡ ಒಂದು ಸಂಭವಿಸಿದೆ. ಈ ವೇಳೆ ಅಜಿತ್ ಕುಮಾರ್ ಅಭಿಮಾನಿ ಮೃತಪಟ್ಟಿದ್ದಾನೆ. ಆತನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೋರಲಾಗುತ್ತಿದೆ.

ಅಜಿತ್ ಕುಮಾರ್ ನಟನೆಯ ‘ತುನಿವು’ ಸಿನಿಮಾಗೆ ಎಚ್. ವಿನೋದ್ ಅವರು ನಿರ್ದೇಶನ ಮಾಡಿದ್ದಾರೆ. ಬಾಲಿವುಡ್​ನ ಖ್ಯಾತ ನಿರ್ಮಾಪಕ ಬೋನಿ ಕಪೂರ್ ಬಂಡವಾಳ ಹೂಡಿದ್ದಾರೆ. ಈ ಚಿತ್ರ ಸಂಕ್ರಾಂತಿ ಪ್ರಯುಕ್ತ ರಿಲೀಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಅಜಿತ್ ಅವರು ಮಾಸ್ ಎಂಟರ್​ಟೇನರ್ ಆಗಿ ಕಾಣಿಸಿಕೊಂಡಿದ್ದಾರೆ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ. ಈ ಸಂಭ್ರಮದ ವೇಳೆ ಅಜಿತ್ ಅಭಿಮಾನಿ ಮೃತಪಟ್ಟಿದ್ದು ಅನೇಕರಿಗೆ ಬೇಸರ ಮೂಡಿಸಿದೆ.

ಭರತ್ ಕುಮಾರ್ ಅವರು ಮೃತ ವ್ಯಕ್ತಿ. ಭರತ್ ಮುಂಜಾನೆ 1 ಗಂಟೆಗೆ ಆಯೋಜನೆಗೊಂಡಿದ್ದ ಶೋ ವೀಕ್ಷಿಸಲು ತೆರಳಿದ್ದರು. ಸೆಲೆಬ್ರೇಷನ್​ನಲ್ಲಿ ಭಾಗಿಯಾಗಿದ್ದ ಭರತ್ ಟ್ರಕ್ ಏರಿದ್ದರು. ಟ್ರಕ್ ನಿಧಾನವಾಗಿ ಚಲಿಸುತ್ತಿತ್ತು. ಟ್ರಕ್​ನಿಂದ ಭರತ್ ಜಿಗಿದಿದ್ದಾರೆ. ಈ ವೇಳೆ ಅವರು ಮೃತಪಟ್ಟಿದ್ದಾರೆ.

‘ಭರತ್ ಕುಮಾರ್ ತುನಿವು ನೋಡಲು ಬಂದಿದ್ದರು. ಅವರು ಸಾಕಷ್ಟು ಎಗ್ಸೈಟ್​ಮೆಂಟ್​ನಲ್ಲಿದ್ದರು. ನಿಧಾನವಾಗಿ ಸಾಗುತ್ತಿದ್ದ ಟ್ರಕ್​ನಿಂದ ಭರತ್ ಜಿಗಿದಿದ್ದಾರೆ. ಆಗ ಅವರಿಗೆ ಗಾಯಗಳಾಗಿತ್ತು. ಇದರಿಂದ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಮಾಸ್ ಎಂಟರ್​ಟೇನರ್​’; ಅಜಿತ್ ನಟನೆಯ ‘ತುನಿವು’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್

‘ತುನಿವು’ ಟ್ರೇಲರ್​ ನೋಡಿದವರಿಗೆ ಇದು ಒಂದು ದರೋಡೆ ಸಿನಿಮಾ ರೀತಿಯಲ್ಲಿ ಕಂಡಿತ್ತು. ಇದರ ಜತೆಗೆ ಮಾಸ್ ಎಂಟರ್​ಟೇನಿಂಗ್ ಆಗಿ ಸಿನಿಮಾವನ್ನು ಕಟ್ಟಿಕೊಡಲಾಗಿದೆ ಎಂದು ಪ್ರೇಕ್ಷಕರು ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ಚಿತ್ರದಲ್ಲಿ ಒಂದೊಳ್ಳೆಯ ಸಂದೇಶ ಕೂಡ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!