AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಸಹಾಯಕನ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟ ನಟ ಅಜಿತ್?

ತಮಿಳು ಸೂಪರ್‌ಸ್ಟಾರ್ ಅಜಿತ್ ಸಾಲು ಸಾಲು ಭಾರಿ ನಿರೀಕ್ಷೆಯ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. 'ಡೇರ್ ಡೆವಿಲ್' ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದ್ದು, ವೆಂಕಟ್ ಪ್ರಭು ಕಾಂಬಿನೇಷನ್ ಮತ್ತು ರಾಜಮೌಳಿ ಶಿಷ್ಯನ ಜೊತೆ ಪ್ಯಾನ್-ಇಂಡಿಯಾ ಸಿನಿಮಾಗೆ ಮಾತುಕತೆ ನಡೆದಿದೆ. ಜೊತೆಗೆ ರೇಸಿಂಗ್ ಡಾಕ್ಯುಮೆಂಟರಿ 'ಗ್ಲಾಡಿಯೇಟರ್ಸ್' ಕೂಡ ಬರಲಿದೆ.

ರಾಜಮೌಳಿ ಸಹಾಯಕನ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟ ನಟ ಅಜಿತ್?
ಅಜಿತ್-ರಾಜಮೌಳಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 24, 2026 | 8:15 AM

Share

ಸಾಲು ಸಾಲು ಬ್ರ್ಯಾಂಡ್ ನ್ಯೂ ಸಿನಿಮಾಗಳನ್ನು ಘೋಷಿಸುವ ಮೂಲಕ ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್ ತಮ್ಮ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದ್ದಾರೆ. ಪ್ರಸ್ತುತ ಅವರು ಆದಿಕ್ ರವಿಚಂದ್ರನ್ ನಿರ್ದೇಶನದ ‘ಡೇರ್ ಡೆವಿಲ್’ ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾದ ಚಿತ್ರೀಕರಣವು ಸೆಪ್ಟೆಂಬರ್ ತಿಂಗಳಿನಲ್ಲಿ ಹೈದರಾಬಾದ್‌ನಲ್ಲಿ ಆರಂಭವಾಗಲಿದೆ.

ಅಜಿತ್ ಅವರ ಮುಂದಿನ ಪ್ರಾಜೆಕ್ಟ್‌ಗಳ ಕುರಿತು ಕಾಲಿವುಡ್ ಅಂಗಳದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ‘ಡೇರ್ ಡೆವಿಲ್’ ಪೂರ್ಣಗೊಂಡ ನಂತರ ಅಜಿತ್ ಮತ್ತೆ ವೆಂಕಟ್ ಪ್ರಭು ಅವರೊಂದಿಗೆ ಕೈಜೋಡಿಸಲಿದ್ದಾರೆ ಎಂಬ ವರದಿಗಳಿವೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್‌ನಲ್ಲಿ ಮೂಡಿಬಂದಿದ್ದ ‘ಮಂಕಾಥ’ ಸಿನಿಮಾ ಇಂಡಸ್ಟ್ರಿ ಹಿಟ್ ಆಗಿತ್ತು. ಈ ಯಶಸ್ವಿ ಜೋಡಿ ಮತ್ತೆ ಒಂದಾಗುತ್ತಿರುವುದು ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ.

ಇಷ್ಟೇ ಅಲ್ಲದೆ ರಾಜಮೌಳಿ ಅವರ ಸಹಾಯಕ ನಿರ್ದೇಶಕರೊಬ್ಬರು ಅಜಿತ್ ಅವರಿಗೆ ಪ್ಯಾನ್-ಇಂಡಿಯಾ ಮಟ್ಟದ ಕಥೆಯನ್ನು ಹೇಳಿದ್ದಾರೆ. ಕಥೆಯ ಎಳೆ ಇಷ್ಟವಾಗಿದ್ದು ಪೂರ್ಣಪ್ರಮಾಣದ ವಿವರಣೆ ನೀಡುವಂತೆ ಅಜಿತ್ ಸೂಚಿಸಿದ್ದಾರೆ. ವೆಂಕಟ್ ಪ್ರಭು ಅವರ ಸಿನಿಮಾ ಮುಗಿದ ನಂತರ ಈ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಸೆಟ್ಟೇರುವ ಸಾಧ್ಯತೆಯಿದೆ. ರಾಜಮೌಳಿ ಸಹಾಯಕ ಎಂಬ ಕಾರಣಕ್ಕೂ ಅಭಿಮಾನಿಗಳಿಗೆ  ಕಾರಣಕ್ಕೂ ಅಭಿಮಾನಿಗಳಿಗೆ ಸಾಕಷ್ಟು ಕುತೂಹಲ ಮೂಡಿದೆ.

ಇದನ್ನೂ ಓದಿ: ಅಜಿತ್ ಹಾಗೂ ನಯನತಾರಾ ನಡೆಗೆ ವಿತರಕರ ವಲಯದಲ್ಲಿ ಆಕ್ರೋಶ; ಮಾಡಿದ ತಪ್ಪೇನು?

ಇದರ ಜೊತೆಗೆ ಅಜಿತ್ ಅವರ ಕಾರ್ ರೇಸಿಂಗ್ ಜರ್ನಿ ಆಧಾರಿತ ‘ಗ್ಲಾಡಿಯೇಟರ್ಸ್’ ಎಂಬ ಡಾಕ್ಯುಮೆಂಟರಿ ಕೂಡ ಸಿದ್ಧವಾಗುತ್ತಿದೆ. ಇದು ಅವರ ಮೊದಲ ಓಟಿಟಿ ರಿಲೀಸ್ ಆಗುವ ನಿರೀಕ್ಷೆಯಿದೆ. ಒಟ್ಟಿನಲ್ಲಿ ‘ಡೇರ್ ಡೆವಿಲ್’, ವೆಂಕಟ್ ಪ್ರಭು ಸಿನಿಮಾ, ಪ್ಯಾನ್-ಇಂಡಿಯಾ ಚಿತ್ರ ಹಾಗೂ ‘ಗ್ಲಾಡಿಯೇಟರ್ಸ್’ ಡಾಕ್ಯುಮೆಂಟರಿ ಮೂಲಕ ಅಜಿತ್ ಸಾಲು ಸಾಲು ರೋಮಾಂಚಕ ಸಿನಿಮಾಗಳೊಂದಿಗೆ ಪ್ರೇಕ್ಷಕರ ಎದುರು ಬರಲು ಸಜ್ಜಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ