ಐಸೋಲೇಟ್​​ ಆಗಲು ಗೋವಾ ರೆಸಾರ್ಟ್​ಗೆ ತೆರಳಿದ ಅಕ್ಕಿನೇನಿ ನಾಗಾರ್ಜುನ

‘ಬಂಗಾರ‍್ರಾಜು’ ಸಿನಿಮಾದಲ್ಲಿ ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ ಹಾಗೂ ಕೃತಿ ಶೆಟ್ಟಿ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದ್ದು, ಅಕ್ಕಿನೇನಿ ನಾಗಾರ್ಜುನಗೆ ಖುಷಿ ನೀಡಿದೆ.

ಐಸೋಲೇಟ್​​ ಆಗಲು ಗೋವಾ ರೆಸಾರ್ಟ್​ಗೆ ತೆರಳಿದ ಅಕ್ಕಿನೇನಿ ನಾಗಾರ್ಜುನ
ಪತ್ನಿ ಜತೆ ನಾಗಾರ್ಜುನ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 22, 2022 | 5:56 PM

ಕೊವಿಡ್​ನಿಂದ ದೇಶದ ಪರಿಸ್ಥಿತಿ ಹದಗೆಟ್ಟಿದೆ. ನಿತ್ಯ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇದನ್ನು ನಿಯಂತ್ರಿಸೋಕೆ ಯಾವ ಸರ್ಕಾರಗಳಿಂದಲೂ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಸರ್ಕಾರಗಳು ಕಠಿಣ ನಿಯಮಗಳನ್ನು ಜಾರಿಗೆ ತಂದಿವೆ. ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಇದೆ. ಇದರ ಜತೆಗೆ ಕೆಲ ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ, ವೀಕೆಂಡ್​ ಕರ್ಫ್ಯೂ ನಿಯಮಗಳು ಜಾರಿಯಲ್ಲಿವೆ. ಇದರ ಮಧ್ಯೆಯೂ ಅಕ್ಕಿನೇನಿ ನಾಗಾರ್ಜುನ (Akkineni Nagarjun) ಹಾಗೂ ನಾಗ ಚೈತನ್ಯ (Naga Chaitanya) ಅಭಿನಯದ ‘ಬಂಗಾರ‍್ರಾಜು’ ಚಿತ್ರ (Bangarraju Movie) ತೆರೆಗೆ ಬಂದಿದೆ. ಸಂಕ್ರಾಂತಿ ಪ್ರಯುಕ್ತ ಜನವರಿ 14ರಂದು ಚಿತ್ರ ರಿಲೀಸ್​ ಆಗಿದ್ದು, ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಈ ಮಧ್ಯೆ ಅವರು ಗೋವಾಗೆ ತೆರಳಿದ್ದಾರೆ. ಅದೂ ಐಸೋಲೇಟ್​​ ಆಗುವ ಉದ್ದೇಶದಿಂದ.

‘ಬಂಗಾರ‍್ರಾಜು’ ಸಿನಿಮಾದಲ್ಲಿ ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ ಹಾಗೂ ಕೃತಿ ಶೆಟ್ಟಿ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದ್ದು, ಅಕ್ಕಿನೇನಿ ನಾಗಾರ್ಜುನಗೆ ಖುಷಿ ನೀಡಿದೆ. ಈ ಮಧ್ಯೆ, ‘ಬಂಗಾರ‍್ರಾಜು’ ಚಿತ್ರತಂಡದ ಅನೇಕರಿಗೆ ಕೊವಿಡ್​ ಅಂಟಿದೆ. ಇದು ಅಕ್ಕಿನೇನಿ ನಾಗಾರ್ಜುನ ಆತಂಕಕ್ಕೆ ಕಾರಣವಾಗಿದೆ.

ಸಿನಿಮಾ ರಿಲೀಸ್​ ದಿನ, ಸಿನಿಮಾ ತೆರೆಕಂಡ ಬಳಿಕ ‘ಬಂಗಾರ‍್ರಾಜು’ ತಂಡದ ಅನೇಕರನ್ನು ಅಕ್ಕಿನೇನಿ ನಾಗಾರ್ಜುನ ಅವರು ಭೇಟಿ ಮಾಡಿದ್ದರು. ಅವರಲ್ಲಿ ಕೆಲವರಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಹೀಗಾಗಿ, ನಾಗಾರ್ಜುನ ಐಸೋಲೇಟ್​​ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಅದೂ ಗೋವಾದಲ್ಲಿ ಅನ್ನೋದು ವಿಶೇಷ.

ಮನೆಯಲ್ಲಿ ಐಸೋಲೇಟ್​​ ಆದರೆ ನಾಲ್ಕು ಗೋಡೆಗಳ ಮಧ್ಯೆ ಇರಬೇಕು. ಇದು ಮಾನಸಿಕ ಆರೋಗ್ಯದ ಮೇಲೆ ಪ್ರಭಾವ ಬೀರಬಹುದು. ಈ ಕಾರಣಕ್ಕೆ ಅವರು ಪತ್ನಿ ಸಮೇತ ಗೋವಾಕ್ಕೆ ತೆರಳಿದ್ದಾರೆ. ಅಲ್ಲಿ ಸಮುದ್ರ ತೀರದ ರೆಸಾರ್ಟ್​ ಒಂದರಲ್ಲಿ ಪತ್ನಿ ಜತೆ ಎರಡು ವಾರ ಕಳೆಯಲು ನಿರ್ಧರಿಸಿದ್ದಾರೆ. ಸಂಪೂರ್ಣ ರೆಸಾರ್ಟ್​ನಲ್ಲಿ ಪತಿ, ಪತ್ನಿ ಇಬ್ಬರೇ ಎರಡು ವಾರ ಇರಲಿದ್ದಾರೆ ಎನ್ನಲಾಗಿದೆ.

ಶುಕ್ರವಾರ (ಜನವರಿ 21) ಅಕ್ಕಿನೇನಿ ನಾಗಾರ್ಜುನ ಅವರು ತಿರುಪತಿಗೆ ಭೇಟಿ ನೀಡಿದ್ದರು. ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಅವರು ಮರಳಿದ್ದರು. ಈಗ ತಮ್ಮ ಸ್ವಂತ ಫ್ಲೈಟ್​ನಲ್ಲಿ ಗೋವಾ ತೆರಳಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ಅಕ್ಕಿನೇನಿ ನಾಗಾರ್ಜುನ ಚಿತ್ರದಿಂದ ಎರಡನೇ ಹೀರೋಯಿನ್​ ಔಟ್​; ಇದಕ್ಕಿದೆ ಮಹತ್ವದ ಕಾರಣ

ಅಕ್ಕಿನೇನಿ ಕುಟುಂಬಕ್ಕೆ ಸಿಹಿ ಸುದ್ದಿ; ಖುಷಿಪಟ್ಟ ಅಭಿಮಾನಿಗಳು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ