ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?

ಇಂದು ಅಕ್ಷಯ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ತಿಳಿಸಿದ್ದಾರೆ.

ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?
ಅಕ್ಷಯ್​ ಕುಮಾರ್
Follow us
ರಾಜೇಶ್ ದುಗ್ಗುಮನೆ
|

Updated on: Apr 05, 2021 | 6:48 PM

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿರುವ ವಿಚಾರ ಭಾನುವಾರ ಖಚಿತವಾಗಿತ್ತು. ಇದನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಜತೆಗೆ ಅವರು ಕ್ವಾರಂಟೈನ್​ ಆಗಿದ್ದರು. ಈಗ ಅವರು ಏಕಾಏಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ‘ಇಂದು ಬೆಳಿಗ್ಗೆ ನನಗೆ ಕೋವಿಡ್​-19 ಪಾಸಿಟಿವ್​ ಆಗಿದೆ. ಎಲ್ಲ ನಿಯಮಗಳನ್ನು ಪಾಲಿಸಿ ನಾನು ತಕ್ಷಣ ಐಸೊಲೇಟ್​ ಆಗಿದ್ದೇನೆ. ಸದ್ಯ ಹೋಮ್​ ಕ್ವಾರಂಟೈನ್​ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ನೀವಾಗಿಯೇ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಎಚ್ಚರಿಕೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ. ಶೀಘ್ರದಲ್ಲೇ ನಾನು ಗುಣಮುಖನಾಗಿ ಬರುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದರು.

ಇಂದು ಅಕ್ಷಯ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ತಿಳಿಸಿದ್ದಾರೆ. ನಿಮ್ಮೆಲ್ಲರ ಹಾರೈಕೆಯಿಂದ ನಾನು ಗುಣಮುಖನಾಗುತ್ತಿದ್ದೇನೆ. ಮುಂಜಾಗೃತಾ ಕ್ರಮವಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಶೀಘ್ರವೇ ಮನೆಗೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸದಾ ಶೂಟಿಂಗ್​, ಡಬ್ಬಿಂಗ್​ ಎಂದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವ ಅಕ್ಷಯ್​ ಕುಮಾರ್​ ಅವರು ಇತ್ತೀಚೆಗೆ ‘ರಾಮ್​ ಸೇತು’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಅವರಿಗೆ ವೈರಸ್​ ಅಂಟಿದೆ ಎನ್ನಲಾಗುತ್ತಿದೆ. ಅನೇಕ ಸೆಲೆಬ್ರಿಟಿಗಳಿಗೆ ಇತ್ತೀಚೆಗೆ ಕೋವಿಡ್​-19 ಸೋಂಕು ತಗುಲಿದೆ. ಆಲಿಯಾ ಭಟ್​, ರಣಬೀರ್​ ಕಪೂರ್, ಪರೇಶ್​ ರಾವಲ್​, ಆಮೀರ್​ ಖಾನ್​, ಆರ್​. ಮಾಧವನ್​, ಮನೋಜ್​ ಭಾಜಪಾಯಿ ಸೇರಿದಂತೆ ಹಲವರಿಗೆ ಪಾಸಿಟಿವ್​ ಆಗಿತ್ತು.

ಇದನ್ನೂ ಓದಿ: Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್