AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ತೆಲುಗು ಸಿನಿಮಾನಲ್ಲಿ ನಟಿಸಲಿರುವ ಆಲಿಯಾ ಭಟ್, ನಾಯಕ ಯಾರು?

Ali Bhatt Movie: ಹಿಂದಿ ಮಾತ್ರವಲ್ಲದೆ, ತೆಲುಗಿನ ‘ಆರ್​​ಆರ್​​ಆರ್’ ಸಿನಿಮಾನಲ್ಲಿ ಆಲಿಯಾ ಭಟ್ ನಟಿಸಿದ್ದರು. ಆ ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಇದೀಗ ಹಲವು ವರ್ಷಗಳ ಬಳಿಕ ಆಲಿಯಾ ಭಟ್ ಮತ್ತೊಮ್ಮೆ ತೆಲುಗು ಸಿನಿಮಾನಲ್ಲಿ ನಟಿಸಲಿದ್ದಾರೆ. ಅಂದಹಾಗೆ ಈ ಬಾರಿಯೂ ಅತಿಥಿ ಪಾತ್ರದಲ್ಲೇ.

ಮತ್ತೆ ತೆಲುಗು ಸಿನಿಮಾನಲ್ಲಿ ನಟಿಸಲಿರುವ ಆಲಿಯಾ ಭಟ್, ನಾಯಕ ಯಾರು?
Alia Bhatt
ಮಂಜುನಾಥ ಸಿ.
|

Updated on: Apr 14, 2026 | 4:41 PM

Share

ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಆಲಿಯಾ ಭಟ್ (Alia Bhatt), ಬಾಲಿವುಡ್​​ನ ಸೂಪರ್ ಸ್ಟಾರ್ ನಟಿ. ಹಿಂದಿ ಚಿತ್ರರಂಗದ ಸ್ಟಾರ್ ನಟಿ ಆಗಿರುವ ಆಲಿಯಾ ಭಟ್, ಬಾಲಿವುಡ್​​ನ ಬಲು ದುಬಾರಿ ನಟಿ ಸಹ ಹೌದು. ಹಿಂದಿ ಮಾತ್ರವಲ್ಲದೆ, ತೆಲುಗಿನ ‘ಆರ್​​ಆರ್​​ಆರ್’ ಸಿನಿಮಾನಲ್ಲಿಯೂ ಆಲಿಯಾ ಭಟ್ ನಟಿಸಿದ್ದು, ಆ ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಇದೀಗ ಹಲವು ವರ್ಷಗಳ ಬಳಿಕ ಆಲಿಯಾ ಭಟ್ ಮತ್ತೊಮ್ಮೆ ತೆಲುಗು ಸಿನಿಮಾನಲ್ಲಿ ನಟಿಸಲಿದ್ದಾರೆ. ಅಂದಹಾಗೆ ಈ ಬಾರಿಯೂ ಅತಿಥಿ ಪಾತ್ರದಲ್ಲೇ.

ಈ ಹಿಂದೆ ‘RRR’ ಚಿತ್ರದಲ್ಲಿ ‘ಸೀತಾ’ ಪಾತ್ರದ ಮೂಲಕ ದಕ್ಷಿಣ ಭಾರತದ ಪ್ರೇಕ್ಷಕರ ಮನ ಗೆದ್ದಿದ್ದ ಆಲಿಯಾ ಭಟ್, ಈಗ ಮತ್ತೊಂದು ಭಾರಿ ಬಜೆಟ್‌ನ ಪ್ಯಾನ್ ಇಂಡಿಯಾ ಚಿತ್ರದ ಭಾಗವಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಜೂನಿಯರ್ ಎನ್​​ಟಿಆರ್ ಮತ್ತು ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಸದ್ಯ ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಈ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಆಲಿಯಾ ಭಟ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

‘ಡ್ರ್ಯಾಗನ್’ ಸಿನಿಮಾದ ನಾಯಕಿಯಾಗಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ. ಆದರೆ ಈ ಸಿನಿಮಾನಲ್ಲಿ ಜೂ ಎನ್​​ಟಿಆರ್ ಅವರದ್ದು ದ್ವಿಪಾತ್ರ ಎನ್ನಲಾಗುತ್ತಿದ್ದು, ಜೂ ಎನ್​​ಟಿಆರ್ ಅವರ ಒಂದು ಪಾತ್ರದ ನಾಯಕಿಯಾಗಿ ಆಲಿಯಾ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೆ, ಆಲಿಯಾ ನಟಿಸುತ್ತಿರುವ ಪಾತ್ರ ಸಹ ಸಖತ್ ಪವರ್​​ಫುಲ್ ಆಗಿ ಇರಲಿದೆಯಂತೆ. ಆಲಿಯಾ ಅವರದ್ದು ಪರಿಪೂರ್ಣ ನಾಯಕಿ ಪಾತ್ರ ಅಲ್ಲದೆ, ಎಕ್ಸ್​​ಟೆಂಡೆಂಡ್ ಕ್ಯಾಮಿಯೋ ರೀತಿ ಇರಲಿದೆಯಂತೆ.

ಇದನ್ನೂ ಓದಿ:550 ಕೋಟಿ ರೂಪಾಯಿ ಒಡತಿ ಆಲಿಯಾ ಭಟ್; ಗಳಿಕೆ ಹೇಗೆ?

ಆಲಿಯಾ ಭಟ್ ಅವರು ‘ಆರ್​​ಆರ್​​ಆರ್’ ಸಿನಿಮಾನಲ್ಲಿ ನಟ ರಾಮ್ ಚರಣ್ ಪ್ರೇಯಸಿಯಾಗಿ ನಟಿಸಿದ್ದರು. ರಾಮ್ ಚರಣ್, ಜೂ ಎನ್​​ಟಿಆರ್ ಮತ್ತು ಆಲಿಯಾ ಅವರ ಹಾಡು ಸಹ ಸಿನಿಮಾದ ಅಂತ್ಯದಲ್ಲಿ ಇತ್ತು. ಆದರೆ ಜೂ ಎನ್​​ಟಿಆರ್ ಮತ್ತು ಆಲಿಯಾ ನಡುವೆ ಕೇವಲ ಒಂದು ದೃಶ್ಯವಷ್ಟೆ ಇತ್ತು. ಇದೀಗ ಜೂ ಎನ್​​ಟಿಆರ್ ಅವರಿಗೆ ನಾಯಕಿಯಾಗಿ ಆಲಿಯಾ ಭಟ್ ನಟಿಸುತ್ತಿದ್ದಾರೆ.

‘ಡ್ರ್ಯಾಗನ್’ ಸಿನಿಮಾಕ್ಕಾಗಿ ಜೂ ಎನ್​​ಟಿಆರ್ ಸಾಕಷ್ಟು ಶ್ರಮಪಡುತ್ತಿದ್ದಾರೆ. ದೇಹವನ್ನು ಹುರಿಗೊಳಿಸಿಕೊಂಡಿದ್ದು, ಸಿನಿಮಾಕ್ಕಾಗಿ ಸಿಕ್ಸ್ ಪ್ಯಾಕ್ ಸಹ ಮಾಡಿಕೊಂಡಿದ್ದಾರೆ. ಇನ್ನು ಈ ಸಿನಿಮಾನಲ್ಲಿ ಸಾಕಷ್ಟು ಪ್ರತಿಭಾವಂತ ಕಲಾವಿದರು ನಟಿಸುತ್ತಿದ್ದಾರೆ. ಬಾಲಿವುಡ್ ನಟ ವಿವೇಕ್ ಒಬೆರಾಯ್, ಈ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕನ್ನಡದ ನಟರೊಬ್ಬರು ಸಹ ಈ ಸಿನಿಮಾನಲ್ಲಿ ಇರಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ