ಆಲಿಯಾ ಭಟ್​ ಜನ್ಮದಿನಕ್ಕೆ RRR ನಿರ್ದೇಶಕ ರಾಜಮೌಳಿ ಕಡೆಯಿಂದ ಭರ್ಜರಿ ಗಿಫ್ಟ್​! ಫ್ಯಾನ್ಸ್​ ಫಿದಾ

Alia Bhatt Birthday: ಬಾಲಿವುಡ್​ನ ಖ್ಯಾತ ನಟಿ ಆಲಿಯಾ ಭಟ್​ ಅವರಿಗೆ ಮಾ.15ರಂದು ಜನ್ಮದಿನದ ಸಂಭ್ರಮ. ಆ ಸಂಭ್ರಮವನ್ನು ನಿರ್ದೇಶಕ ರಾಜಮೌಳಿ ದ್ವಿಗುಣಗೊಳಿಸಿದ್ದಾರೆ.

ಆಲಿಯಾ ಭಟ್​ ಜನ್ಮದಿನಕ್ಕೆ RRR ನಿರ್ದೇಶಕ ರಾಜಮೌಳಿ ಕಡೆಯಿಂದ ಭರ್ಜರಿ ಗಿಫ್ಟ್​! ಫ್ಯಾನ್ಸ್​ ಫಿದಾ
ಆಲಿಯಾ ಭಟ್​- ರಾಜಮೌಳಿ
Follow us
ಮದನ್​ ಕುಮಾರ್​
|

Updated on: Mar 15, 2021 | 1:26 PM

ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿ ಆಲಿಯಾ ಭಟ್​ ಅವರಿಗೆ ಸೋಮವಾರ (ಮಾ.15) ಹುಟ್ಟುಹಬ್ಬದ ಸಡಗರ. 28ನೇ ವಸಂತಕ್ಕೆ ಕಾಲಿಟ್ಟಿರುವ ಈ ಬೆಡಗಿಗೆ ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಮೂಲಕ ಶುಭಕೋರುತ್ತಿದ್ದಾರೆ. ಅಲ್ಲದೆ, ಎಸ್​.ಎಸ್. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ತಂಡದಿಂದ ಆಲಿಯಾ ಪಾತ್ರದ ಫಸ್ಟ್​ ಲುಕ್​ ಬಿಡುಗಡೆ ಆಗಿದೆ.

ಈವರೆಗೂ ಬಾಲಿವುಡ್​ನಲ್ಲಿ ಮಿಂಚಿರುವ ಆಲಿಯಾ ಭಟ್​, ಇದೇ ಮೊದಲ ಬಾರಿಗೆ RRR ಸಿನಿಮಾ ಮೂಲಕ ದಕ್ಷಿಣ ಭಾರತಕ್ಕೆ ಕಾಲಿಡುತ್ತಿದ್ದಾರೆ. ಬಹುನಿರೀಕ್ಷಿತ ಸಿನಿಮಾದ ಮೂಲಕ ಆಲಿಯಾ ದಕ್ಷಿಣದತ್ತ ಹೆಜ್ಜೆ ಹಾಕುತ್ತಿರುವುದರಿಂದ ಅವರ ಪಾತ್ರದ ಬಗ್ಗೆ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಕುತೂಹಲ ಇದೆ. ಸೀತಾ ಎಂಬ ಪಾತ್ರಕ್ಕೆ ಆಲಿಯಾ ಬಣ್ಣ ಹಚ್ಚುತ್ತಿದ್ದಾರೆ. ಅವರ ಗೆಟಪ್​ ಹೇಗಿರಲಿದೆ ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ. ರಾಜಮೌಳಿ ಅವರು ಸೀತಾ ಪಾತ್ರದ ಫಸ್ಟ್​ಲುಕ್​ ಬಿಡುಗಡೆ ಮಾಡಿದ್ದಾರೆ.

ಫಸ್ಟ್​ಲುಕ್​ ಪೋಸ್ಟರ್​ ಮೂಲಕ ಆಲಿಯಾಗೆ ಆರ್​ಆರ್​ಆರ್​ ತಂಡ ಶುಭಾಶಯ ಕೋರಿದೆ. ಸೀರೆ ಮತ್ತು ಆಭರಣ ಧರಿಸಿ ಸಾಂಪ್ರದಾಯಿಕ ಗೆಟಪ್​ನಲ್ಲಿ ಆಲಿಯಾ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳು ಈ ಪೋಸ್ಟರ್​ ಕಂಡು ಫಿದಾ ಆಗಿದ್ದಾರೆ. ಬಾಹುಬಲಿ, ಮಗಧೀರ, ಮುಂತಾದ ಸಿನಿಮಾಗಳಲ್ಲಿ ಮಹಿಳಾ ಪಾತ್ರಗಳನ್ನು ಅದ್ದೂರಿಯಾಗಿ ತೋರಿಸಿದ್ದ ರಾಜಮೌಳಿ ಅವರು ಆರ್​ಆರ್​ಆರ್​ ಚಿತ್ರದಲ್ಲಿ ಆಲಿಯಾರನ್ನು ಇನ್ನೆಷ್ಟು ಅದ್ಭುತವಾಗಿ ತೋರಿಸಲಿದ್ದಾರೆ ಎಂಬ ನಿರೀಕ್ಷೆ ಮೂಡಿದೆ.

ಈ ಚಿತ್ರದಲ್ಲಿ ಜ್ಯೂನಿಯರ್ ಎನ್​ಟಿಆರ್ ಮತ್ತು ರಾಮ್​ ಚರಣ್​ ನಾಯಕರಾಗಿ ನಟಿಸಿದ್ದಾರೆ. ಕೊರೊನಾ ವೈರಸ್​ ಕಾರಣದಿಂದ ಚಿತ್ರದ ಕೆಲಸಗಳು ವಿಳಂಬ ಆಗಿದ್ದವು. ಕಳೆದ ವರ್ಷ ಡಿಸೆಂಬರ್​ನಲ್ಲಿ ಆಲಿಯಾ ಭಟ್​ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದರು. ಹೈದರಾಬಾದ್​ನ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಬೃಹತ್​ ಸೆಟ್​ಗಳನ್ನು ನಿರ್ಮಿಸಿ, ಅದರಲ್ಲಿ ಚಿತ್ರೀಕರಣ ಮಾಡಲಾಗಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದೆ. ಇದೇ ವರ್ಷ ಅಕ್ಟೋಬರ್​ 13ರಂದು ‘ಆರ್​ಆರ್​ಆರ್​’ ತೆರೆಕಾಣಲಿದೆ. ಚಿತ್ರದ ಇನ್ನೊಂದು ಮುಖ್ಯ ಪಾತ್ರದಲ್ಲಿ ಅಜಯ್​ ದೇವಗನ್​ ಕೂಡ ನಟಿಸಿದ್ದಾರೆ.

ಆಲಿಯಾ ಭಟ್​ ಅವರ ಫಸ್ಟ್​ಲುಕ್​ ಪೋಸ್ಟರ್​ ಹಂಚಿಕೊಂಡ ನಿರ್ದೇಶಕ ರಾಜಮೌಳಿ

ಇದನ್ನೂ ಓದಿ: ಬಿಟೌನ್​ನಲ್ಲಿ ಮದುವೆ ಗುಸುಗುಸು: ಮೌನ ಮುರಿದ ಆಲಿಯಾ ಭಟ್ ಮದುವೆ ಬಗ್ಗೆ ಹೇಳಿದ್ದೇನು?

RRR ಸಿನಿಮಾದ ಶೂಟಿಂಗ್‌ ಗಿಂತ ಗ್ರಾಫಿಕ್ಸ್‌ಗೇ ಅತಿಹೆಚ್ಚು ಹಣ ಖರ್ಚಾ.. ತೆರೆಮೇಲೆ ಹುಟ್ಟಲಿದೆ ಅದ್ಭುತ ದೃಶ್ಯ ವೈಭವ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ