Alia Bhatt ನಟಿ ಆಲಿಯಾ ಭಟ್‌ಗೆ ಕೊರೊನಾ ಸೋಂಕು ದೃಢ

28 ವರ್ಷದ ನಟಿ ಆಲಿಯಾ ಭಟ್ ಗುರುವಾರ ತಡರಾತ್ರಿ ತಮಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಮಾಹಿತಿಯನ್ನು ತಮ್ಮ ಇನ್ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದಾರೆ.

Alia Bhatt ನಟಿ ಆಲಿಯಾ ಭಟ್‌ಗೆ ಕೊರೊನಾ ಸೋಂಕು ದೃಢ
ನಟಿ ಆಲಿಯಾ ಭಟ್‌

Updated on: Apr 02, 2021 | 7:43 AM

ಮುಂಬೈ: ಬಾಲಿವುಡ್ ನಟಿ ಆಲಿಯಾ ಭಟ್ ಅವರಿಗೆ ಮಹಾಮಾರಿ ಕೊರೊನಾ ವೈರಸ್ ಸೋಂಕು ತಗುಲಿದೆ. ಹೀಗಾಗಿ ಅವರು ಪ್ರತ್ಯೇಕವಾಸದಲ್ಲಿರುವುದಾಗಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯ ಮೂಲಕ ತಿಳಿಸಿದ್ದಾರೆ. 28 ವರ್ಷದ ಆಲಿಯಾ ಭಟ್ ಗುರುವಾರ ತಡರಾತ್ರಿ ಈ ಮಾಹಿತಿಯನ್ನು ತಮ್ಮ ಇನ್ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿರುವ ಆಲಿಯಾ, “ಎಲ್ಲರಿಗೂ ನಮಸ್ಕಾರ, ನನಗೆ ಕೊವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಕೂಡಲೇ ನಾನು ಪ್ರತ್ಯೇಕವಾಸಕ್ಕೆ ಒಳಗಾಗಿದ್ದು, ಹೋಮ್ ಕ್ವಾರಂಟೈನ್​ನಲ್ಲಿದ್ದೇನೆ. ನನ್ನ ವೈದ್ಯರ ಸಲಹೆಯಂತೆ ಎಲ್ಲ ಸುರಕ್ಷಾ ಕ್ರಮಗಳನ್ನು ಅನುಸರಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿ ಹಾಗೂ ಬೆಂಬಲಕ್ಕೆ ಕೃತಜ್ಞಳಾಗಿದ್ದೇನೆ. ದಯವಿಟ್ಟು ಸುರಕ್ಷಿತವಾಗಿರಿ, ಕಾಳಜಿ ವಹಿಸಿ” ಎಂದು ಬರೆದುಕೊಂಡಿದ್ದಾರೆ. ಇನ್ನು ಇತ್ತೀಚೆಗಷ್ಟೇ ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಚಿಕಿತ್ಸೆ ಪಡೆದು ಸೋಂಕಿನಿಂದ ಗುಣಮುಖರಾಗಿದ್ದರು.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ಮುಂಬೈ ಮಾಫಿಯಾ ಕ್ವೀನ್​ ಗಂಗುಬಾಯಿ ಕಾಠಿಯಾವಾಡಿ ಜೀವನಾಧಾರಿತ ಚಿತ್ರದಲ್ಲಿ ನಟಿ ಆಲಿಯಾ ಭಟ್ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಆಲಿಯಾ ಭಟ್​ ವಿಚಾರಕ್ಕೆ ದೀಪಿಕಾ ಪಡುಕೋಣೆ- ಸಂಜಯ್​ ಲೀಲಾ ಬನ್ಸಾಲಿ ನಡುವೆ ಕೋಲ್ಡ್​ ವಾರ್!