AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಟಾರ್ ಕಿಡ್ ಎಂದು ಟೀಕಿಸಿದವರ ಮುಖಕ್ಕೆ ಗುದ್ದಬೇಕು’; ಆಲಿಯಾ ಭಟ್

ಸೋನಮ್ ಕಪೂರ್, ಅನನ್ಯಾ ಪಾಂಡೆ ದೊಡ್ಡ ಹಿನ್ನೆಲೆ ಹೊಂದಿರುವವರು. ಆದರೆ, ಅವರಿಗೆ ತಮ್ಮ ತನವನ್ನು ಸಾಬೀತು ಮಾಡಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಅವರಿಗೆ ಈವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ.

‘ಸ್ಟಾರ್ ಕಿಡ್ ಎಂದು ಟೀಕಿಸಿದವರ ಮುಖಕ್ಕೆ ಗುದ್ದಬೇಕು’; ಆಲಿಯಾ ಭಟ್
ಆಲಿಯಾ ಭಟ್
ರಾಜೇಶ್ ದುಗ್ಗುಮನೆ
|

Updated on: Nov 17, 2023 | 10:32 AM

Share

ಅನೇಕ ಸ್ಟಾರ್​ ಕಿಡ್​​ಗಳು ಬಾಲಿವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕೆಲವರಿಗೆ ಯಶಸ್ಸು ಸಿಕ್ಕಿದೆ. ಆದರೆ, ಇನ್ನೂ ಕೆಲವರಿಗೆ ಗೆಲುವು ಸಿಕ್ಕಿಲ್ಲ. ಸ್ಟಾರ್ ಕಲಾವಿದರ ಮಕ್ಕಳಾದರೂ ಅವರು ತಮ್ಮ ತನವನ್ನು ಸಾಬೀತು ಮಾಡಿಕೊಳ್ಳಬೇಕು. ಅಂದಾಗ ಮಾತ್ರ ಜನಪ್ರಿಯತೆ ಪಡೆಯಲು ಸಾಧ್ಯ. ಆಲಿಯಾ ಭಟ್ (Alia Bhatt) ಖ್ಯಾತ ನಿರ್ದೇಶಕ ಮಹೇಶ್ ಭಟ್ ಅವರ ಮಗಳು. ಈ ಕಾರಣದಿಂದಲೇ ಅವರಿಗೆ ಬಾಲಿವುಡ್​ನಲ್ಲಿ ಸುಲಭದಲ್ಲಿ ಅವಕಾಶ ಸಿಕ್ಕಿತು. ಇದನ್ನು ಅವರೂ ಒಪ್ಪಿಕೊಳ್ಳುತ್ತಾರೆ. ಆದರೆ, ಅವರು ತನ್ನ ತನವನ್ನು ಸಾಬೀತು ಮಾಡಿದ್ದಾರೆ. ಅವರು ಹೇಳಿರುವ ಹೇಳಿಕೆ ವೈರಲ್ ಆಗಿದೆ.

ಆಲಿಯಾ ಭಟ್ ಅವರು ‘ಕಾಫಿ ವಿತ್ ಕರಣ್​’ ಶೋದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ಅವರ ಹಳೆಯ ಹೇಳಿಕೆ ವೈರಲ್ ಆಗಿದೆ. ‘ಯಾವುದೇ ಕುಟುಂಬದಿಂದ ಬಂದರೂ ಕೊನೆಯಲ್ಲಿ ಅದು ನಮ್ಮ ಜರ್ನಿಯೇ ಆಗಿರುತ್ತದೆ. ನಿಮ್ಮ ತಂದೆ, ತಾಯಿ, ಅಜ್ಜ ಇದನ್ನು ಬದಲಾಯಿಸಲು ಸಾಧ್ಯವಿಲ್ಲ. ಸ್ಟಾರ್ ಮಕ್ಕಳಿಗೆ ಇದು ಸುಲಭ ಎಂದು ಹೇಳುವ ಎಲ್ಲ ಜನರ ಮುಖಕ್ಕೆ ಗುದ್ದಲು ಬಯಸುತ್ತೇನೆ’ ಎಂದು ಆಲಿಯಾ ಭಟ್ ಹೇಳಿದ್ದರು.

ಸೋನಮ್ ಕಪೂರ್, ಅನನ್ಯಾ ಪಾಂಡೆ ದೊಡ್ಡ ಹಿನ್ನೆಲೆ ಹೊಂದಿರುವವರು. ಆದರೆ, ಅವರಿಗೆ ತಮ್ಮ ತನವನ್ನು ಸಾಬೀತು ಮಾಡಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಅವರಿಗೆ ಈವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ. ನಟನೆಯ ಮೂಲಕ ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಲು ಅವರ ಬಳಿ ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಅವರು ಹೆಚ್ಚು ಗುರುತಿಸಿಕೊಂಡಿಲ್ಲ. ಆದರೆ, ಆಲಿಯಾ ಭಟ್ ಇವರಿಗಿಂತ ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: SSE Side B Review: ‘ಸೈಡ್​ ಎ’ ಬಳಿಕ ಮನು, ಪ್ರಿಯಾ ಬದುಕು ಬದಲಾದರೂ ‘ಸೈಡ್​ ಬಿ’ ಲಯ ಬದಲಾಗಿಲ್ಲ

ಆಲಿಯಾ ಭಟ್ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ರಾಜಿ’, ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸೇರಿ ಅನೇಕ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಇತ್ತೀಚೆಗೆ ಅವರಿಗೆ ರಾಷ್ಟ್ರಪ್ರಶಸ್ತಿ ಸಿಕ್ಕಿದೆ. ಹಾಲಿವುಡ್​ ಚಿತ್ರರಂಗಕ್ಕೂ ಅವರು ಕಾಲಿಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು