AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್‌ ಲಕ್ಕಿ ತಿಂಗಳಲ್ಲೇ ಬರಲಿದೆ ‘ರಾಕಾ’? ಈ ಡೇಟ್​ ಮೇಲೆ ಕಣ್ಣು

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ಅಟ್ಲಿ ಕಾಂಬಿನೇಷನ್‌ನ ಬೃಹತ್ ಸಿನಿಮಾ 'ರಾಕಾ' 2027ರ ಡಿಸೆಂಬರ್ 31ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ. 'ಪುಷ್ಪ' ಸರಣಿಯಂತೆ ಡಿಸೆಂಬರ್ ತಿಂಗಳ ಲಕ್ಕಿ ಸೆಂಟಿಮೆಂಟ್ ಆಧಾರದ ಮೇಲೆ ಹೊಸ ವರ್ಷದ ಕೊಡುಗೆಯಾಗಿ ಈ ಚಿತ್ರವನ್ನು ತರಲು ಅಲ್ಲು ಅರ್ಜುನ್ ಪ್ಲಾನ್ ಮಾಡಿದ್ದಾರೆ.

ಅಲ್ಲು ಅರ್ಜುನ್‌ ಲಕ್ಕಿ ತಿಂಗಳಲ್ಲೇ ಬರಲಿದೆ 'ರಾಕಾ’? ಈ ಡೇಟ್​ ಮೇಲೆ ಕಣ್ಣು
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Sep 04, 2026 | 10:50 AM

Share

ಟಾಲಿವುಡ್ ನಟ ಅಲ್ಲು ಅರ್ಜುನ್ ಮತ್ತು ತಮಿಳಿನ ಮಾಸ್ ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ರಾಕಾ’ ಸಿನಿಮಾ  ದಿನದಿಂದ ದಿನಕ್ಕೆ ಭಾರಿ ನಿರೀಕ್ಷೆ ಹುಟ್ಟುಹಾಕುತ್ತಿದೆ. ‘ಸನ್ ಪಿಕ್ಚರ್ಸ್’ ಸಂಸ್ಥೆ ನಿರ್ಮಿಸುತ್ತಿರುವ ಈ ಬಿಗ್ ಬಜೆಟ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಟ್ರೆಂಡ್ ಆಗುತ್ತಿದೆ. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕಕ್ಕೆ ಸಂಬಂಧಿಸಿದಂತೆ ಹೊಸ ಸುದ್ದಿಯೊಂದು ಹರಿಹಾಡುತ್ತಿದ್ದು, ಅಭಿಮಾನಿಗಳ ಕಾತುರವನ್ನು ಇಮ್ಮಡಿಗೊಳಿಸಿದೆ.

ವರದಿಗಳ ಪ್ರಕಾರ ‘ರಾಕಾ’ ಸಿನಿಮಾ 2027ರ ಡಿಸೆಂಬರ್ 31ರಂದು ಅಂದರೆ ಹೊಸ ವರ್ಷದ ಆಗಮನದ ದಿನವೇ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲು ಪ್ಲಾನ್ ಮಾಡಿದೆ ಎನ್ನಲಾಗುತ್ತಿದೆ. ಅಲ್ಲು ಅರ್ಜುನ್‌ಗೆ ಡಿಸೆಂಬರ್ ತಿಂಗಳು ಭಾರಿ ಲಕ್ಕಿ ಎನಿಸಿಕೊಂಡಿದೆ.

ಅಲ್ಲು ಅರ್ಜುನ್ ಅವರ ಬ್ಲಾಕ್‌ಬಸ್ಟರ್ ‘ಪುಷ್ಪ 1’ ಸಿನಿಮಾ 2021ರ ಡಿಸೆಂಬರ್ 17ರಂದು ರಿಲೀಸ್ ಆಗಿ ಹಿಟ್ ಆಗಿದ್ದರೆ, ‘ಪುಷ್ಪ 2’ ಸಿನಿಮಾ ಕೂಡ ಡಿಸೆಂಬರ್ 5ರಂದೇ ರಿಲೀಸ್ ಆಗಿ ಇತಿಹಾಸ ಬರೆದಿತ್ತು. ಈ ಸಕ್ಸಸ್ ಸೂತ್ರವನ್ನೇ ನೆಚ್ಚಿಕೊಂಡಿರುವ ಅಲ್ಲು ಅರ್ಜುನ್, ‘ರಾಕಾ’ ಚಿತ್ರವನ್ನು ಸಹ ಡಿಸೆಂಬರ್‌ ಕೊನೆಯಲ್ಲೇ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ರಾಕಾ’ ಚಿತ್ರಕ್ಕಾಗಿ ದೊಡ್ಡ ಚಾಲೆಂಜ್ ಸ್ವೀಕರಿಸಿದ ಅಲ್ಲು ಅರ್ಜುನ್

‘ರಾಕಾ’ ಸಿನಿಮಾದಲ್ಲಿ ಅಲ್ಲು ಅರ್ಜುನ್‌ಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ಕಾಣಿಸಿಕೊಳ್ಳುತ್ತಿದ್ದು, ರಶ್ಮಿಕಾ ಮಂದಣ್ಣ ಮತ್ತು ಮೃಣಾಲ್ ಠಾಕೂರ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ ಎಂದು ವರದಿಯಾಗಿದೆ. ಸಾಯಿ ಅಭ್ಯಂಕರ್ ಸಂಗೀತ ಸಂಯೋಜಿಸುತ್ತಿದ್ದು, ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಮೂರು ವಿಭಿನ್ನ ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಮತ್ತೊಂದು ಹೈಲೈಟ್. ಚಿತ್ರತಂಡದಿಂದ ಅಧಿಕೃತ ಬಿಡುಗಡೆ ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದ್ದು, 2028ರ ಹೊಸ ವರ್ಷದ ಸ್ವಾಗತಕ್ಕೆ ‘ರಾಕಾ’ ಭರ್ಜರಿ ಎಂಟ್ರಿ ಕೊಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ