AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಕಾ’ ಆಗಿ ಅಲ್ಲು ಅರ್ಜುನ್: ಹೀರೋನಾ-ವಿಲನ್ನಾ?

Allu Arjun movie: ಅಲ್ಲು ಅರ್ಜುನ್ ಹುಟ್ಟುಹಬ್ಬ ಇಂದು (ಏಪ್ರಿಲ್ 08). ಹುಟ್ಟುಹಬ್ಬದ ಪ್ರಯುಕ್ತ ಅಲ್ಲು ಅರ್ಜುನ್ ನಟಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾದ ಟೈಟಲ್ ಬಿಡುಗಡೆ ಮಾಡಲಾಗಿದೆ. ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಬಳಿಕ ಅಲ್ಲು ಅರ್ಜುನ್, ಅಟ್ಲಿ ನಿರ್ದೇಶನದ ಸಿನಿಮಾನಲ್ಲಿ ನಟಿಸುತ್ತಿದ್ದು, ಈ ಸಿನಿಮಾ ಫ್ಯಾಂಟಸಿ ಸಿನಿಮಾದ ಕತೆಯನ್ನು ಒಳಗೊಂಡಿದೆ. ಇದೀಗ ಸಿನಿಮಾದ ಪೋಸ್ಟರ್ ಜೊತೆಗೆ ಹೆಸರು ಬಿಡುಗಡೆ ಮಾಡಲಾಗಿದ್ದು, ಅಲ್ಲು ಅರ್ಜುನ್ ಅಭಿಮಾನಿಗಳಲ್ಲಿ ಮಿಶ್ರ ಪ್ರತಿಕ್ರಿಯೆ ಹುಟ್ಟುಹಾಕಿದೆ.

‘ರಾಕಾ’ ಆಗಿ ಅಲ್ಲು ಅರ್ಜುನ್: ಹೀರೋನಾ-ವಿಲನ್ನಾ?
Raaka Movie
ಮಂಜುನಾಥ ಸಿ.
|

Updated on:Apr 08, 2026 | 11:20 AM

Share

ಅಲ್ಲು ಅರ್ಜುನ್ (Allu Arjun) ಹುಟ್ಟುಹಬ್ಬ ಇಂದು (ಏಪ್ರಿಲ್ 08). ಹುಟ್ಟುಹಬ್ಬದ ಪ್ರಯುಕ್ತ ಅಲ್ಲು ಅರ್ಜುನ್ ನಟಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾದ ಟೈಟಲ್ ಬಿಡುಗಡೆ ಮಾಡಲಾಗಿದೆ. ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಬಳಿಕ ಅಲ್ಲು ಅರ್ಜುನ್, ಅಟ್ಲಿ ನಿರ್ದೇಶನದ ಸಿನಿಮಾನಲ್ಲಿ ನಟಿಸುತ್ತಿದ್ದು, ಈ ಸಿನಿಮಾ ಫ್ಯಾಂಟಸಿ ಸಿನಿಮಾದ ಕತೆಯನ್ನು ಒಳಗೊಂಡಿದೆ. ಇದೀಗ ಸಿನಿಮಾದ ಪೋಸ್ಟರ್ ಜೊತೆಗೆ ಹೆಸರು ಬಿಡುಗಡೆ ಮಾಡಲಾಗಿದ್ದು, ಅಲ್ಲು ಅರ್ಜುನ್ ಅಭಿಮಾನಿಗಳಲ್ಲಿ ಮಿಶ್ರ ಪ್ರತಿಕ್ರಿಯೆ ಹುಟ್ಟುಹಾಕಿದೆ.

ಅಲ್ಲು ಅರ್ಜುನ್ ನಟಿಸಿ, ಅಟ್ಲಿ ನಿರ್ದೇಶನ ಮಾಡುತ್ತಿರುವ ಸಿನಿಮಾಕ್ಕೆ ‘ರಾಕಾ’ ಎಂದು ಹೆಸರಿಡಲಾಗಿದೆ. ಈಗ ಬಿಡುಗಡೆ ಮಾಡಿರುವ ಪೋಸ್ಟರ್​​ನಲ್ಲಿ ಅಲ್ಲು ಅರ್ಜುನ್ ರಾಕ್ಷಸನ ರೀತಿ ಕಾಣಿಸಿಕೊಂಡಿದ್ದಾರೆ. ದೈತ್ಯ ಕೈ, ಚೂಪಾದ ಉಗುರು, ಕೂದಲಿಲ್ಲದ ತಲೆ, ತೀಕ್ಷ್ಣ ಕಣ್ಣುಗಳು, ಇವೆಲ್ಲವನ್ನೂ ನೋಡಿದರೆ ಅಲ್ಲು ಅರ್ಜುನ್, ರಾಕ್ಷಸನ ಪಾತ್ರದಲ್ಲಿ ನಟಿಸುತ್ತಿರುವಂತಿದೆ. ಸಿನಿಮಾದ ಹೆಸರು ‘ರಾಕಾ’, ಅಲ್ಲು ಅರ್ಜುನ್ ಅವರ ರಾಕ್ಷಸನ ಪಾತ್ರದ ಹೆಸರೇ ಆಗಿರಬಹುದು ಎಂಬ ಅನುಮಾನವೂ ಇದೆ.

ಅಟ್ಲಿ ನಿರ್ದೇಶಿಸುತ್ತಿರುವ ಈ ಸಿನಿಮಾ ಫ್ಯಾಂಟಸಿ ಕತೆಯುಳ್ಳ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ದೈತ್ಯ ಪ್ರಾಣಿಗಳು, ವಿಚಿತ್ರ ಜೀವಿಗಳು, ಅತ್ಯಾಧುನಿಕ ಶಸ್ತ್ರಾಸ್ತ್ರಗಳು, ವಾಹನಗಳು, ಚಿತ್ರ, ವಿಚಿತ್ರ ಲೊಕೇಶನ್​​ಗಳು ಇರಲಿವೆಯಂತೆ. ಸಿನಿಮಾದ ಕತೆ ಸಹ ಭೂಮಿಯ ಮೇಲಲ್ಲದೆ ಬೇರೆ ಯಾವುದೋ ಗ್ರಹದಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ. ಅಲ್ಲಿ ಮಾನವರು ಮತ್ತು ದಾನವರ ನಡುವೆ ಯುದ್ಧದ ಕತೆಯನ್ನು ‘ರಾಕಾ’ ಸಿನಿಮಾ ಒಳಗೊಂಡಿರಲಿದೆಯಂತೆ.

ಇದನ್ನೂ ಓದಿ:ತುಂಬಾನೇ ಶ್ರೀಮಂತ ಅಲ್ಲು ಅರ್ಜುನ್; ಅವರ ಬಳಿ ಇರೋ ದುಬಾರಿ ವಸ್ತುಗಳಿವು

ಭಾರಿ ಬಜೆಟ್ ಸಿನಿಮಾ ಇದಾಗಿದ್ದು, ಸಿನಿಮಾನಲ್ಲಿ ದೀಪಿಕಾ ಪಡುಕೋಣೆ ನಾಯಕಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗ ಬಿಡುಗಡೆ ಆಗಿರುವ ಪೋಸ್ಟರ್ ನೋಡಿದರೆ ಅಲ್ಲು ಅರ್ಜುನ್ ದ್ವಿಪಾತ್ರದಲ್ಲಿ ನಟಿಸುತ್ತಿರಬಹುದಾದ ಅನುಮಾನ ಮೂಡುತ್ತಿದೆ. ಸಿನಿಮಾನಲ್ಲಿ ರಶ್ಮಿಕಾ ಮಂದಣ್ಣ ಸಹ ನಟಿಸಲಿದ್ದು, ಅವರು ವಿಲನ್ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾಕ್ಕೆ ಸನ ನೆಟ್​​ವರ್ಕ್ಸ್​​ನ ಕಲಾನಿಧಿ ಮಾರನ್ ಬಂಡವಾಳ ಹೂಡಿದ್ದಾರೆ. ಸಿನಿಮಾಕ್ಕಾಗಿ ಕೆಲವು ಹಾಲಿವುಡ್ ಸಂಸ್ಥೆಗಳು ಸಹ ಕೆಲಸ ಮಾಡುತ್ತಿವೆ. ಸಿನಿಮಾ ಇದೇ ವರ್ಷ ಬಿಡುಗಡೆ ಆಗುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Wed, 8 April 26

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ದಿನ ಭವಿಷ್ಯ: ಇಂದು ಅಪರೂಪದ ಗಜಕೇಸರಿ ಯೋಗ!
ದಿನ ಭವಿಷ್ಯ: ಇಂದು ಅಪರೂಪದ ಗಜಕೇಸರಿ ಯೋಗ!