ಸ್ನೇಹಾ ರೆಡ್ಡಿ ಜತೆ ಲಂಡನ್​ನಲ್ಲಿ ಅಲ್ಲು ಅರ್ಜುನ್ ಹಾಲಿಡೇ; ಹೇಗಿದೆ ನೋಡಿ ಸ್ಟೈಲಿಶ್ ಸ್ಟಾರ್ ಮಕ್ಕಳ ಪೋಸ್

ಸ್ನೇಹಾ ರೆಡ್ಡಿ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅಲ್ಲು ಅರ್ಜುನ್​, ಸ್ನೇಹಾ ರೆಡ್ಡಿ, ಮಕ್ಕಳಾದ ಅಲ್ಲು ಆರ್ಯನ್​ ಹಾಗೂ ಅಲ್ಲು ಅರ್ಹ ಗಮನ ಸೆಳೆಯುತ್ತಾರೆ.

ಸ್ನೇಹಾ ರೆಡ್ಡಿ ಜತೆ ಲಂಡನ್​ನಲ್ಲಿ ಅಲ್ಲು ಅರ್ಜುನ್ ಹಾಲಿಡೇ; ಹೇಗಿದೆ ನೋಡಿ ಸ್ಟೈಲಿಶ್ ಸ್ಟಾರ್ ಮಕ್ಕಳ ಪೋಸ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 27, 2022 | 4:58 PM

ಅಲ್ಲು ಅರ್ಜುನ್ ಅವರು (Allu Arjun) ಪಕ್ಕಾ ಫ್ಯಾಮಿಲಿಮ್ಯಾನ್ ಅನ್ನೋದು ಸಾಕಷ್ಟು ಬಾರಿ ಸಾಬೀತಾಗಿದೆ. ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ‘ಪುಷ್ಪ’ ಸಿನಿಮಾ (Pushpa Movie) ಗೆದ್ದು ಬೀಗಿದ ನಂತರ ಅವರು ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಜುಲೈ ತಿಂಗಳಿಂದ ‘ಪುಷ್ಪ 2’ ಸಿನಿಮಾ ಕೆಲಸಗಳು ಆರಂಭವಾಗಲಿದೆ. ಅದಕ್ಕೂ ಮೊದಲು ಅಲ್ಲು ಅರ್ಜುನ್, ಪತ್ನಿ ಸ್ನೇಹಾ ರೆಡ್ಡಿ ಹಾಗೂ ಮಕ್ಕಳ ಜತೆ ಲಂಡನ್​ ಟ್ರಿಪ್​ಗೆ ತೆರಳಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫ್ಯಾನ್ಸ್​ ಇದಕ್ಕೆ ಲೈಕ್ಸ್ ಒತ್ತುತ್ತಿದ್ದಾರೆ.

ಸ್ನೇಹಾ ರೆಡ್ಡಿ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅಲ್ಲು ಅರ್ಜುನ್​, ಸ್ನೇಹಾ ರೆಡ್ಡಿ, ಮಕ್ಕಳಾದ ಅಲ್ಲು ಆರ್ಯನ್​ ಹಾಗೂ ಅಲ್ಲು ಅರ್ಹ ಗಮನ ಸೆಳೆಯುತ್ತಾರೆ. ಈ ಫೋಟೋ ಫ್ಯಾನ್ಸ್​ ವಲಯದಲ್ಲಿ ವೈರಲ್ ಆಗುತ್ತಿದೆ. ಪ್ರತಿ ಸಿನಿಮಾ ತೆರೆಕಂಡ ನಂತರದಲ್ಲಿ ಅಲ್ಲು ಅರ್ಜುನ್ ಬ್ರೇಕ್ ತೆಗೆದುಕೊಳ್ಳುತ್ತಾರೆ. ಈ ವೇಳೆ ಅವರು ವಿದೇಶಕ್ಕೆ ಟ್ರಿಪ್ ತೆರಳುತ್ತಾರೆ. ಇಡೀ ಕುಟುಂಬದ ಜತೆ ವಿದೇಶ ಸುತ್ತಾಡಿ ಬರುತ್ತಾರೆ. ಈ ಕಾರಣಕ್ಕೂ ಅವರು ಅನೇಕರಿಗೆ ಇಷ್ಟವಾಗುತ್ತಾರೆ.

ಇದನ್ನೂ ಓದಿ
Image
‘ಕೆಜಿಎಫ್ 2’ ಸಿನಿಮಾ ನೋಡಿ ಭೇಷ್ ಎಂದ ಅಲ್ಲು ಅರ್ಜುನ್; ಯಶ್ ಪರ್ಫಾರ್ಮೆನ್ಸ್​​ಗೆ ಸ್ಟೈಲಿಶ್ ಸ್ಟಾರ್ ಫಿದಾ
Image
‘ಪುಷ್ಪ 2’ ಚಿತ್ರದ ಬಗ್ಗೆ ಮೂಡಿದೆ ಎರಡು ಅನುಮಾನ; ಇದಕ್ಕೆಲ್ಲ ಕಾರಣ ಅಲ್ಲು ಅರ್ಜುನ್​ ಹೊಸ ಲುಕ್​
Image
ತಮಿಳಿಗೆ ಕಾಲಿಟ್ಟ ‘ಆಹಾ’ ಒಟಿಟಿ; ವಿಶ್ ಮಾಡಿದ ನಟ ಅಲ್ಲು ಅರ್ಜುನ್, ಸಿಎಂ ಸ್ಟಾಲಿನ್
Image
ವಿದೇಶದಲ್ಲಿ ಅಲ್ಲು ಅರ್ಜುನ್ ಬರ್ತ್​​ಡೇ ಸೆಲಬ್ರೇಷನ್; ಇಲ್ಲಿದೆ ಫೋಟೋ ಗ್ಯಾಲರಿ

ಅಲ್ಲು ಅರ್ಜುನ್ ಅವರು ಏಪ್ರಿಲ್ 8ರಂದು ಬರ್ತ್​ಡೇ ಆಚರಿಸಿಕೊಂಡರು. ಅವರಿಗೆ ಈಗ 40 ವರ್ಷ ವಯಸ್ಸು. ಯುರೋಪ್​ ಖಂಡಕ್ಕೆ ತೆರಳಿ ಅದ್ದೂರಿ ಬರ್ತ್​ಡೇ ಆಚರಿಸಿಕೊಂಡಿದ್ದರು. ಇದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಪಾರ್ಟಿಗೆ ಕುಟುಂಬದವರು ಹಾಗೂ ಗೆಳೆಯರು ಮಾತ್ರ ಹಾಜರಿ ಹಾಕಿದ್ದರು.

ಇದನ್ನೂ ಓದಿ: ‘ಕೆಜಿಎಫ್ 2’ ಸಿನಿಮಾ ನೋಡಿ ಭೇಷ್ ಎಂದ ಅಲ್ಲು ಅರ್ಜುನ್; ಯಶ್ ಪರ್ಫಾರ್ಮೆನ್ಸ್​​ಗೆ ಸ್ಟೈಲಿಶ್ ಸ್ಟಾರ್ ಫಿದಾ

ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿದೆ. ಒಟ್ಟೂ 300 ಕೋಟಿ ರೂಪಾಯಿ ಕಲೆಕ್ಷನ್ ಮಾಡಿರುವ ಈ ಸಿನಿಮಾ, ಹಿಂದಿಯಿಂದ 100 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಜುಲೈ ತಿಂಗಳಿಂದ ಎರಡನೇ ಚಾಪ್ಟರ್ ಶೂಟಿಂಗ್ ಆರಂಭವಾಗಲಿದೆ. ಮುಂದಿನ ಏಪ್ರಿಲ್ ವೇಳೆಗೆ ಸಿನಿಮಾ ತೆರೆಕಾಣುವ ನಿರೀಕ್ಷೆ ಇದೆ. ‘ಕೆಜಿಎಫ್ 2’ ಹಿಂದಿ ಬಾಕ್ಸ್ ಆಫೀಸ್​ನಿಂದ 420+ ಕೋಟಿ ರೂಪಾಯಿ ಬಾಚಿಕೊಂಡಿದೆ. ಇದರಿಂದ ‘ಪುಷ್ಪ 2’ ಗಳಿಕೆ ಬಗ್ಗೆ ಈಗಲೇ ಕುತೂಹಲ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:57 pm, Fri, 27 May 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ