ಅಂತಾರಾಷ್ಟ್ರೀಯ ಡ್ರೈವಿಂಗ್ ಲೈಸೆನ್ಸ್​ಗೆ ಅಪ್ಲೈ ಮಾಡಿದ ಅಲ್ಲು ಅರ್ಜುನ್; ಕಾರಣ ಏನು?

ಅಲ್ಲು ಅರ್ಜುನ್ ‘ಪುಷ್ಪ 2’ ಚಿತ್ರಕ್ಕಾಗಿ ಸಂಪೂರ್ಣ ಕಾಲ್​ಶೀಟ್ ನೀಡಿದ್ದಾರೆ. ಅವರು ಸದ್ಯ ಬೇರೆ ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಅವರು ಹೈದರಾಬಾದ್​ನ ಆರ್​ಟಿಒದಲ್ಲಿ ಅಂತಾರಾಷ್ಟ್ರೀಯ ವಾಹನ ಚಾಲನೆ ಪರವಾನಿಗೆ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅಂತಾರಾಷ್ಟ್ರೀಯ ಡ್ರೈವಿಂಗ್ ಲೈಸೆನ್ಸ್​ಗೆ ಅಪ್ಲೈ ಮಾಡಿದ ಅಲ್ಲು ಅರ್ಜುನ್; ಕಾರಣ ಏನು?
ಅಲ್ಲು ಅರ್ಜುನ್
Follow us
ರಾಜೇಶ್ ದುಗ್ಗುಮನೆ
|

Updated on: Mar 21, 2024 | 7:02 AM

ನಟ ಅಲ್ಲು ಅರ್ಜುನ್ (Allu Arjun) ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ  ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದ ಶೂಟಿಂಗ್ ಹೈದರಾಬಾದ್ ಮಾತ್ರವಲ್ಲ ವಿದೇಶದಲ್ಲೂ ನಡೆಯಲಿದೆ. ಈ ಕಾರಣಕ್ಕೆ ಅಲ್ಲು ಅರ್ಜುನ್ ಅವರು ಅಂತಾರಾಷ್ಟ್ರೀಯ ಡ್ರೈವಿಂಗ್ ಲೈಸೆನ್ಸ್​ಗೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ವಿದೇಶದಲ್ಲಿ ಕಾರು ಚಲಾಯಿಸಲು ಅವರು ರೆಡಿ ಆಗಿದ್ದಾರೆ.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರಕ್ಕಾಗಿ ಸಂಪೂರ್ಣ ಕಾಲ್​ಶೀಟ್ ನೀಡಿದ್ದಾರೆ. ಅವರು ಸದ್ಯ ಬೇರೆ ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಅವರು ಹೈದರಾಬಾದ್​ನ ಆರ್​ಟಿಒದಲ್ಲಿ ಅಂತಾರಾಷ್ಟ್ರೀಯ ವಾಹನ ಚಾಲನೆ ಪರವಾನಿಗೆ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೂಲಗಳ ಪ್ರಕಾರ ಈ ತಂಡ ಬ್ಯಾಂಕಾಕ್​ಗೆ ತೆರಳಿ ಆ್ಯಕ್ಷನ್ ಸೀಕ್ವೆನ್ಸ್​ಗಳನ್ನು ಶೂಟ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ ಎನ್ನಲಾಗಿದೆ.

ಅಲ್ಲು ಅರ್ಜುನ್ ಅವರು ಬ್ಯಾಂಕಾಕ್​ನಲ್ಲಿ ಕಾರುಗಳ ಜೊತೆ ಟ್ರಕ್ ಕೂಡ ಓಡಿಸಲಿದ್ದಾರೆ. ಜಪಾನ್​ನಲ್ಲೂ ಸಿನಿಮಾದ ಶೂಟಿಂಗ್ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ, ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸಿನಿಮಾದ ಕಥೆ ಎಲ್ಲೆಲ್ಲಿ ಸಾಗಲಿದೆ ಎನ್ನುವ ಕುತೂಹಲ ಮೂಡಿದೆ.

ಕೆಲವು ಮೂಲಗ ಪ್ರಕಾರ ಮೇ ಕೊನೆಯಲ್ಲಿ ಸಂಪೂರ್ಣ ಶೂಟಿಂಗ್ ಪೂರ್ಣಗೊಳಿಸುವ ಆಲೋಚನೆಯಲ್ಲಿ ತಂಡ ಇದೆ. ಎಡಿಟಿಂಗ್, ವಿಎಫ್​ಎಕ್ಸ್, ಡಬ್ಬಿಂಗ್ ಬಿಜಿಎಂ ಸೆಟ್​ ಮಾಡಲು ಸಾಕಷ್ಟು ಸಮಯದ ಅಗತ್ಯವಿದೆ. ಎರಡು ತಿಂಗಳಲ್ಲಿ ಇದನ್ನು ಪೂರ್ಣಗೊಳಿಸೋ ಆಲೋಚನೆ ತಂಡದ್ದಾಗಿದೆ.

ಇದನ್ನೂ ಓದಿ: ‘ನಾವು ಸಹೋದರರು, ಪರಸ್ಪರ ಗೌರವ ಇದೆ’; ಬಾಲಿವುಡ್​ ಬಗ್ಗೆ ಅಲ್ಲು ಅರ್ಜುನ್​ ಮಾತು

ಅಲ್ಲು ಅರ್ಜುನ್ ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ಗೆ ಜೊತೆಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?