AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಕಾ’ ಸಿನಿಮಾ ಮೂಲಕ ಗಿನ್ನೆಸ್ ದಾಖಲೆ ಬರೆದ ಅಲ್ಲು ಅರ್ಜುನ್, ಅಟ್ಲಿ

ಅಲ್ಲು ಅರ್ಜುನ್, ಅಟ್ಲಿ ಕಾಂಬಿನೇಷನ್​ನ ‘ರಾಕಾ’ ಸಿನಿಮಾಗೆ ಗಿನ್ನೆಸ್ ದಾಖಲೆಯ ಗರಿ. 2026ರ ಫೆಬ್ರವರಿಯಲ್ಲಿ ನಡೆದ ಅಭೂತಪೂರ್ವ ತಾಂತ್ರಿಕ ಪ್ರಯತ್ನಕ್ಕೆ ಈ ಫಲ ಸಿಕ್ಕಿದೆ. ನಿರ್ಮಾಣ ಹಂತದಲ್ಲಿಯೇ ಈ ಸಿನಿಮಾ ಸದ್ದು ಮಾಡುತ್ತಿದೆ. ಬಹಳ ಅದ್ದೂರಿಯಾಗಿ ‘ಸನ್ ಪಿಕ್ಚರ್ಸ್’ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಿಸುತ್ತಿದೆ.

‘ರಾಕಾ’ ಸಿನಿಮಾ ಮೂಲಕ ಗಿನ್ನೆಸ್ ದಾಖಲೆ ಬರೆದ ಅಲ್ಲು ಅರ್ಜುನ್, ಅಟ್ಲಿ
Atlee, Allu Arjun
ಮದನ್​ ಕುಮಾರ್​
|

Updated on: Sep 21, 2026 | 8:30 PM

Share

ನಟ ಅಲ್ಲು ಅರ್ಜುನ್ ಅವರು ಭಾರತೀಯ ಚಿತ್ರರಂಗದಲ್ಲಿ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದ್ದಾರೆ. ಈಗ ಅವರ ವೃತ್ತಿ ಜೀವನದಲ್ಲಿ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ನಿರ್ದೇಶಕ ಅಟ್ಲಿ ಆ್ಯಕ್ಷನ್-ಕಟ್ ಹೇಳುತ್ತಿರುವ ‘ರಾಕಾ’ ಚಿತ್ರವು ಸಿನಿಮಾ ನಿರ್ಮಾಣದ ತಂತ್ರಜ್ಞಾನದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿ ಪ್ರತಿಷ್ಠಿತ ಗಿನ್ನೆಸ್ ವಿಶ್ವ ದಾಖಲೆ ಬರೆದಿದೆ. ‘ಏಕಕಾಲಕ್ಕೆ ಗರಿಷ್ಠ ಸಂಖ್ಯೆಯ ಕಲಾವಿದರ ಮೋಷನ್-ಕ್ಯಾಪ್ಚರ್’ ಚಿತ್ರೀಕರಣ ಮಾಡುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದೆ.

‘ಸನ್ ಪಿಕ್ಚರ್ಸ್’ ಸಂಸ್ಥೆಯ ಕಲಾನಿಧಿ ಮಾರನ್ ಅವರು ಈ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಒಂದೇ ಸೆಷನ್‌ನಲ್ಲಿ ಒಟ್ಟು 37 ಕಲಾವಿದರನ್ನು ರಿಯಲ್-ಟೈಮ್‌ನಲ್ಲಿ ಚಿತ್ರಿಸುವ ಮೂಲಕ ಗಿನ್ನೆಸ್ ದಾಖಲೆ ಮಾಡಲಾಗಿದೆ. ಸೆಪ್ಟೆಂಬರ್ 15ರಂದು ಈ ದಾಖಲೆಯನ್ನು ಗಿನ್ನೆಸ್ ಸಂಸ್ಥೆಯು ಅಧಿಕೃತವಾಗಿ ದೃಢೀಕರಿಸಿದೆ. ಚಿತ್ರತಂಡದ ಪ್ರಮುಖ ಕಲಾವಿದರು ಮತ್ತು ತಾಂತ್ರಿಕ ವರ್ಗದ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ, ಗಿನ್ನೆಸ್ ವಿಶ್ವ ದಾಖಲೆಯ ಹಿರಿಯ ತೀರ್ಪುಗಾರರಾದ ಸ್ವಪ್ನಿಲ್ ದಂಗ್ರಿಕರ್ ಅವರು ನಟ ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಅಟ್ಲಿ ಅವರಿಗೆ ಅಧಿಕೃತ ಪ್ರಮಾಣಪತ್ರವನ್ನು ನೀಡಿದರು.

ಚಿತ್ರತಂಡ ಹಂಚಿಕೊಂಡ ಮಾಹಿತಿ ಪ್ರಕಾರ, ಈ ಅಪರೂಪದ ಮೋಷನ್-ಕ್ಯಾಪ್ಚರ್ ಪ್ರಕ್ರಿಯೆಯು ಭಾರತೀಯ ಚಿತ್ರರಂಗದ ಮಟ್ಟಿಗೆ ಅತ್ಯಂತ ಸವಾಲಿನದ್ದಾಗಿತ್ತು. ಇದರಲ್ಲಿ 4 ವರ್ಷದ ಪುಟ್ಟ ಮಗುವಿನಿಂದ ಹಿಡಿದು 70 ವರ್ಷದ ಹಿರಿಯ ವೃದ್ಧರವರೆಗೆ ಒಟ್ಟು 37 ಕಲಾವಿದರು ಭಾಗವಹಿಸಿದ್ದರು. ಒಂದೇ ಕ್ಯಾಪ್ಚರ್ ವ್ಯಾಪ್ತಿಯಲ್ಲಿ ಪ್ರತಿಯೊಬ್ಬ ಕಲಾವಿದರ ಮುಖಭಾವ, ದೈಹಿಕ ಭಾಷೆ ಹಾಗೂ ಅಭಿನಯದ ಸೂಕ್ಷ್ಮಾತಿಸೂಕ್ಷ್ಮ ವಿವರಗಳು ತಪ್ಪಿಹೋಗದಂತೆ ನೈಜವಾಗಿ ಸೆರೆಹಿಡಿಯುವುದು ದೊಡ್ಡ ಸವಾಲಾಗಿತ್ತು ಎಂದು ‘ರಾಕಾ’ ಚಿತ್ರತಂಡ ತಿಳಿಸಿದೆ.

View this post on Instagram

A post shared by Sun Pictures (@sunpictures)

‘ರಾಕಾ’ ಚಿತ್ರತಂಡ ಈ ಸಾಹಸವನ್ನು ಸಾಕಾರಗೊಳಿಸಲು ಚಿತ್ರದ ವಿಎಫ್‌ಎಕ್ಸ್ ಪ್ರೊಡ್ಯೂಸರ್ ನೇತೃತ್ವದಲ್ಲಿ ಹೊಚ್ಚಹೊಸ ಮೋಷನ್-ಕ್ಯಾಪ್ಚರ್ ಪೈಪ್‌ಲೈನ್ ಹಾಗೂ ವರ್ಕ್‌ಫ್ಲೋ ಸಿದ್ಧಪಡಿಸಲಾಗಿತ್ತು. ಬರೋಬ್ಬರಿ 92 ಅತ್ಯಾಧುನಿಕ ಆಪ್ಟಿಕಲ್ ಮೋಷನ್-ಕ್ಯಾಪ್ಚರ್ ಕ್ಯಾಮೆರಾಗಳು, ನಿಖರ ಕ್ಯಾಲಿಬ್ರೇಷನ್, ನೆಟ್‌ವರ್ಕಿಂಗ್, ಸಿಂಕ್ರೊನೈಸೇಶನ್, ಅನ್‌ರಿಯಲ್ ಎಂಜಿನ್‌ನ ರಿಯಲ್-ಟೈಮ್ ದೃಶ್ಯೀಕರಣ, ವಿಟ್‌ನೆಸ್ ಕ್ಯಾಮೆರಾಗಳು ಹಾಗೂ ಫೇಶಿಯಲ್ ಕ್ಯಾಪ್ಚರ್ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದ ತಾಂತ್ರಿಕ ವಾತಾವರಣವನ್ನು ಇದಕ್ಕಾಗಿ ನಿರ್ಮಿಸಲಾಗಿತ್ತು.

ಇದನ್ನೂ ಓದಿ: ಅಲ್ಲು ಅರ್ಜುನ್ ಅಭಿಮಾನಿಗಳಿಂದ ಸಮಾಜಮುಖಿ ಕೆಲಸ; 3 ಲಕ್ಷ ಯುವತಿಯರಲ್ಲಿ ಜಾಗೃತಿ

‘ಸನ್ ಪಿಕ್ಚರ್ಸ್ ಸಂಸ್ಥೆಯ ಭವ್ಯ ನಿರ್ಮಾಣ ಮೌಲ್ಯ, ಅಟ್ಲಿಯವರ ದೂರದೃಷ್ಟಿ, ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಕಲಾ ಬದ್ಧತೆ, ಆಪಲ್ ಆರ್ಟ್ ಸ್ಟುಡಿಯೋದ ತಾಂತ್ರಿಕ ಪರಿಣತಿ ಹಾಗೂ ಸಮಗ್ರ ವಿಎಫ್‌ಎಕ್ಸ್ ತಂಡದ ಒಗ್ಗಟ್ಟಿನ ಶ್ರಮದಿಂದ ಈ ಜಾಗತಿಕ ಮೈಲಿಗಲ್ಲು ಸಾಧ್ಯವಾಗಿದೆ. ಈ ಐತಿಹಾಸಿಕ ಹೆಗ್ಗಳಿಕೆಯು ಭಾರತೀಯ ಚಿತ್ರರಂಗದ ಸೃಜನಶೀಲತೆ ಮತ್ತು ಆಧುನಿಕ ತಂತ್ರಜ್ಞಾನದ ಸಾಮರ್ಥ್ಯವನ್ನು ಜಾಗತಿಕ ಭೂಪಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದೆ’ ಎಂದು ಚಿತ್ರತಂಡ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ