ಆ ಒಂದು ಕಾರಣಕ್ಕೆ ಮುಖಮುಚ್ಚಿಕೊಂಡು ನಗುತ್ತಾರಾ ಅಲ್ಲು ಅರ್ಜುನ್?
ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಈ ಮಧ್ಯೆ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರ ಬಗೆಗಿನ ಒಂದು ಅಚ್ಚರಿಯ ವಿಚಾರ ರಿವೀಲ್ ಆಗಿದೆ.
ಅಲ್ಲು ಅರ್ಜುನ್ ಅವರು ಟಾಲಿವುಡ್ನ ಬಹುಬೇಡಿಕೆಯ ಹೀರೋ ಎಂದು ಎನಿಸಿಕೊಂಡಿದ್ದಾರೆ. ಅವರಿಗೆ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಸಾಕಷ್ಟು ಹೆಸರು ಮಾಡಿದ್ದು ಮಾತ್ರವಲ್ಲ ದೊಡ್ಡ ಅಭಿಮಾನಿ ಬಳಗವನ್ನು ಕೂಡ ಸೃಷ್ಟಿಸಿಕೊಂಡಿದ್ದಾರೆ. ಅವರು ಈಗ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ನಗುವಾಗ ಮುಖ ಮುಚ್ಚಿಕೊಂಡು ನಗೋದು ಏಕೆ ಎಂಬ ಪ್ರಶ್ನೆ ಅನೇಕರನ್ನು ಕಾಡಿದ್ದು ಇದೆ. ಇದಕ್ಕೆ ಫ್ಯಾನ್ಸ್ ಉತ್ತರ ಕಂಡು ಹಿಡಿದಿದ್ದಾರೆ ಅನ್ನೋದು ಗೊತ್ತಾ? ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.
ಅಲ್ಲು ಅರ್ಜುನ್ ಅವರು ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಅವರ ಮಗ. ಈ ಕಾರಣಕ್ಕೆ ಅಲ್ಲು ಅರ್ಜುನ್ ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಯಿತು. ಈಗ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಅವರು ಇಷ್ಟು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದು ಅವರ ಸ್ವಂತ ಶ್ರಮದಿಂದ. ಅಲ್ಲು ಅರ್ಜುನ್ ಅವರು ನಗುವಾಗ ಏಕೆ ಮುಖ ಮುಚ್ಚಿಕೊಳ್ಳುತ್ತಾರೆ ಎಂಬುದಕ್ಕೆ ವಿಡಿಯೋ ಒಂದು ವೈರಲ್ ಆಗಿದೆ.
View this post on Instagram
ಅಲ್ಲು ಅರ್ಜುನ್ ಅವರು ನಗುವಾಗ ಸಾಕಷ್ಟು ಅಸಹ್ಯವಾಗಿ ಕಾಣುತ್ತದೆ ಎಂದು ಕೆಲವರು ಟೀಕೆ ಮಾಡಿದ್ದು ಇದೆ. ಈ ಟೀಕೆಯ ಕಾರಣಕ್ಕೆ ಅಲ್ಲು ಅರ್ಜುನ್ ಅವರು ನಗುವಾಗ ಮುಖವನ್ನು ಮುಚ್ಚಿಕೊಳ್ಳುತ್ತಾರೆ ಎಂದು ಕೆಲವು ಕಡೆಗಳಲ್ಲಿ ವಿಡಿಯೋಗಳು ವೈರಲ್ ಆಗಿವೆ. ಇದು ನಿಜವೇ ಅಥವಾ ಸುಳ್ಳೇ ಎನ್ನುವ ಪ್ರಶ್ನೆ ಕೆಲವರನ್ನು ಕಾಡಿದೆ.
ಇದನ್ನೂ ಓದಿ: ‘ಪುಷ್ಪ ನಾನು ಮಾಡಬೇಕಿತ್ತು, ಅಲ್ಲು ಅರ್ಜುನ್ ಸರ್ ಗ್ರೇಟ್ ಬಿಡಿ’: ಶಾರುಖ್ ಖಾನ್
ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ರಿಲೀಸ್ಗೆ ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್ ಮೊದಲಾದ ಸ್ಟಾರ್ ಹೀರೋಗಳು ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ಗೆ ಸಖತ್ ನಿರೀಕ್ಷೆ ಇದೆ. ಡಿಸೆಂಬರ್ 6ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ಸುಕುಮಾರ್ ಅವರು ನಿರ್ದೇಶನ ಮಾಡುತ್ತಿದ್ದು, ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ. ಕಾರಣಾಂತರಗಳಿಂದ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗುತ್ತಲೇ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 7:48 am, Mon, 7 October 24