AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಪ್ರಭಾಸ್​ ಫ್ಯಾನ್​​ಗೆ ಅಲ್ಲು ಅರ್ಜುನ್​ ಅಭಿಮಾನಿಗಳಿಂದ ಥಳಿತ

ಟಾಲಿವುಡ್​ ನಟ ಅಲ್ಲು ಅರ್ಜುನ್​ ಅವರನ್ನು ಟ್ರೋಲ್​ ಮಾಡಿದ್ದಕ್ಕಾಗಿ ವ್ಯಕ್ತಿಯೊಬ್ಬನಿಗೆ ಥಳಿಸಲಾಗಿದೆ. ಮಿತಿ ಮೀರಿ ವರ್ತಿಸಿರುವ ಅಲ್ಲು ಅರ್ಜುನ್​ ಫ್ಯಾನ್ಸ್​ ವಿರುದ್ಧ ಖಂಡನೆ ವ್ಯಕ್ತವಾಗಿದೆ. ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರು ಪೊಲೀಸರು ಈ ಘಟನೆ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಪ್ರಭಾಸ್​ ಫ್ಯಾನ್​​ಗೆ ಅಲ್ಲು ಅರ್ಜುನ್​ ಅಭಿಮಾನಿಗಳಿಂದ ಥಳಿತ
ಪ್ರಭಾಸ್​ ಅವರ ಅಭಿಮಾನಿಗೆ ಥಳಿಸಿದ ಅಲ್ಲು ಅರ್ಜುನ್​ ಅಭಿಮಾನಿಗಳು
Follow us
ಮದನ್​ ಕುಮಾರ್​
|

Updated on: Mar 11, 2024 | 10:41 PM

ತೆಲುಗು ಹೀರೋಗಳ ಅಭಿಮಾನಿಗಳು ಆಂಧ್ರ, ತೆಲಂಗಾಣದಲ್ಲಿ ಪರಸ್ಪರ ಕಿತ್ತಾಟ ಮಾಡಿಕೊಳ್ಳುವುದು ಆಗಾಗ ವರದಿ ಆಗುತ್ತದೆ. ಆದರೆ ಕರ್ನಾಟಕದಲ್ಲೂ ಕೂಡ ತೆಲುಗು ನಟರ ಅಭಿಮಾನಿಗಳು ಬಡಿದಾಡಿಕೊಂಡಿರುವ ಘಟನೆ ನಡೆದಿದೆ. ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ವೈರಲ್​ ಆಗಿದೆ. ಬೆಂಗಳೂರಿನ ಕೆ.ಆರ್​. ಪುರದಲ್ಲಿ ಪ್ರಭಾಸ್​ (Prabhas) ಅವರ ಅಭಿಮಾನಿಗೆ ಅಲ್ಲು ಅರ್ಜುನ್​ ಅಭಿಮಾನಿಗಳು (Allu Arjun Fans) ಥಳಿಸಿದ್ದಾರೆ. ಆನ್​ಲೈನ್​ನಲ್ಲಿ ಶುರುವಾದ ಫ್ಯಾನ್ಸ್​ ವಾರ ಈಗ ಪರಸ್ಪರ ಹಲ್ಲೆ ಮಾಡಿಕೊಳ್ಳುವ ಹಂತಕ್ಕೆ ಬಂದಿದೆ. ಈ ಘಟನೆಯನ್ನು ಸೋಶಿಯಲ್​ ಮೀಡಿಯಾ ಮೂಲಕ ಬೆಂಗಳೂರು ಪೊಲೀಸರ (Bengaluru City Police) ಗಮನಕ್ಕೆ ತರಲಾಗಿದೆ.

‘ಅಲ್ಲು ಅರ್ಜುನ್​ನ ಟ್ರೋಲ್​ ಮಾಡುತ್ತೀಯಾ? ಜೈ ಅಲ್ಲು ಅರ್ಜುನ್​ ಅಂತ ಹೇಳು. ನಿನ್ನ ಬಿಟ್ಟು ಬಿಡುತ್ತೀನಿ’ ಎಂದು ಹೇಳುತ್ತ ವ್ಯಕ್ತಿಯೊಬ್ಬನ ಮೇಲೆ ಹತ್ತಾರು ಮಂದಿ ಹಲ್ಲೆ ಮಾಡಿದ್ದಾರೆ. ‘ಬೆಂಗಳೂರು ಪೊಲೀಸರು ಈ ಘಟನೆಯ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ನೆಟ್ಟಿಗರೊಬ್ಬರು ವಿಡಿಯೋ ಪೋಸ್ಟ್​ ಮಾಡಿದ್ದಾರೆ. ಸ್ಥಳದ ಬಗ್ಗೆ ಸೂಕ್ತ ಮಾಹಿತಿ ಪಡೆದ ಬಳಿಕ ಕೆ.ಆರ್​. ಪುರ ಪೊಲೀಸರಿಗೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸರು ಎಕ್ಸ್​ (ಟ್ವಿಟರ್​) ಖಾತೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ವ್ಯಕ್ತಿಯ ಮೇಲೆ ಹಲ್ಲೆ ಮಾಡುತ್ತಿರುವ ವೈರಲ್​ ವಿಡಿಯೋ:

ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಪ್ರಭಾಸ್​ ಅಭಿಮಾನಿ ಎನ್ನಲಾಗಿದೆ. ಅಲ್ಲು ಅರ್ಜುನ್​ ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಈಗ ಹಲ್ಲೆ ನಡೆದಿದೆ. ಸ್ಟಾರ್ ನಟರ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಪರಸ್ಪರ ಕಚ್ಚಾಟ ನಡೆಸುತ್ತಾರೆ. ಆದರೆ ಈಗ ಮಾರಣಾಂತಿಕವಾಗಿ ಹಲ್ಲೆ ಮಾಡುವ ಹಂತಕ್ಕೆ ಅಭಿಮಾನಿಗಳ ವರ್ತನೆ ಮಿತಿ ಮೀರಿರುವುದಕ್ಕೆ ನೆಟ್ಟಿಗರು ಖಂಡನೆ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಘಟನೆ ಬಗ್ಗೆ ಅಲ್ಲು ಅರ್ಜುನ್​ ಮತ್ತು ಪ್ರಭಾಸ್​ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಕರ್ನಾಟಕದಲ್ಲಿ ಅಲ್ಲು ಅರ್ಜುನ್​ ಅವರಿಗೆ ಅಭಿಮಾನಿಗಳಿದ್ದಾರೆ. ಅವರ ಸಿನಿಮಾಗಳು ಇಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತವೆ. ಅದೇ ರೀತಿ ಪ್ರಭಾಸ್​ ಕೂಡ ಕರುನಾಡಿನಲ್ಲಿ ಅಭಿಮಾನಿ ಬಳಗ ಹೊಂದಿದ್ದಾರೆ. ಈ ಸ್ಟಾರ್​ ನಟರಿಬ್ಬರ ಅಭಿಮಾನಿಗಳು ರೌಡಿಗಳಂತೆ ವರ್ತಿಸಿರುವುದಕ್ಕೆ ಟೀಕೆ ಎದುರಾಗುತ್ತಿದೆ.

ಇದನ್ನೂ ಓದಿ: ಅಲ್ಲು ಅರ್ಜುನ್​ಗೆ ಟಿವಿ9 ನಕ್ಷತ್ರ ಅವಾರ್ಡ್: ‘ಪುಷ್ಪ’ ಹೇಳಿದ್ದೇನು?

ಅಲ್ಲು ಅರ್ಜುನ್​ ಅವರು ಸದ್ಯ ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ಗಾಗಿ ಅವರು ವಿಶಾಖಪಟ್ಟಣ್ಣಕ್ಕೆ ತೆರಳಿದ್ದಾರೆ. ಅಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಅವರಿಗೆ ಭರ್ಜರಿ ಸ್ವಾಗತ ಕೋರಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬಂದ ಅವರ ಮೇಲೆ ಹೂವಿನ ಮಳೆ ಸುರಿಸಲಾಗಿದೆ. ದಾರಿಯುದ್ಧಕ್ಕೂ ಅಭಿಮಾನಿಗಳು ಬೈಕ್​ ರ‍್ಯಾಲಿ ಮಾಡಿದ್ದಾರೆ. ಜೈಕಾರ ಕೂಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ