Allu Arjun Arrest: ಅಲ್ಲು ಅರ್ಜುನ್​ಗೆ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್

Allu Arjun arrest: ಕಾಲ್ತುಳಿದಿಂದ ಮಹಿಳೆ ಸಾವು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈಗಾಗಲೇ ಅಲ್ಲು ಅರ್ಜುನ್​ಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ನಾಂಪಲ್ಲಿ ನ್ಯಾಯಾಲಯ ವಿಧಿಸಿತ್ತು, ಇದೀಗ ಹೈಕೋರ್ಟ್​ ಮಧ್ಯಂತರ ಜಾಮೀನನ್ನು ಹೈಕೋರ್ಟ್ ನೀಡಿದೆ.

Allu Arjun Arrest: ಅಲ್ಲು ಅರ್ಜುನ್​ಗೆ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್
ಅಲ್ಲು ಅರ್ಜುನ್
Follow us
ಮಂಜುನಾಥ ಸಿ.
|

Updated on:Dec 13, 2024 | 5:56 PM

ಕಾಲ್ತುಳಿದಿಂದ ಮಹಿಳೆ ಸಾವು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈಗಾಗಲೇ ಅಲ್ಲು ಅರ್ಜುನ್​ಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ನಾಂಪಲ್ಲಿ ನ್ಯಾಯಾಲಯ ವಿಧಿಸಿತ್ತು, ಇದೀಗ ಹೈಕೋರ್ಟ್​ ಮಧ್ಯಂತರ ಜಾಮೀನನ್ನು ಹೈಕೋರ್ಟ್ ನೀಡಿದೆ. ಅಲ್ಲು ಅರ್ಜುನ್ 14 ದಿನಗಳ ಜೈಲು ವಾಸದಿಂದ ತಪ್ಪಿಸಿಕೊಂಡಂತಾಗಿದೆ. ಆದರೆ ಒಂದು ದಿನ ಅಥವಾ ಸೋಮವಾರದ ವರೆಗೆಯಾದರೂ ಜೈಲು ವಾಸ ಅನುಭವಿಸುವ ಸಾಧ್ಯತೆ ಇದೆ.

ಎಫ್​ಐಆರ್ ರದ್ದು ಕೋರಿ ಅಲ್ಲು ಅರ್ಜುನ್ ಪರ ವಕೀಲರು ತೆಲಂಗಾಣ ಹೈಕೋರ್ಟ್​ನಲ್ಲಿ ಅರ್ಜಿ ಹಾಕಿದ್ದರು. ಶಾರುಖ್ ಖಾನ್ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಉಲ್ಲೇಖ ಮಾಡಿ ಅಲ್ಲು ಅರ್ಜುನ್ ಪರ ವಕೀಲರು ವಾದ ಮಂಡಿಸಿದರು. ಆದರೆ ಹೈಕೋರ್ಟ್​ನಲ್ಲಿ ಎಫ್​ಐಆರ್ ರದ್ದು ಸಾಧ್ಯವಾಗಲಿಲ್ಲ. ವಾದ ಮುಂದುವರೆಸಿ, ಮಧ್ಯಂತರ ಜಾಮೀನಿನ ಅರ್ಜಿಯ ವಾದ ಮಂಡಿಸಿದ ಅಲ್ಲು ಅರ್ಜುನ್ ಪರ ವಕೀಲರು ಅರ್ನಬ್ ಗೋಸ್ವಾಮಿ ಪ್ರಕರಣ ಉಲ್ಲೇಖಿಸಿ ವಾದ ಮಂಡಿಸಿದರು.

ಅಲ್ಲು ಅರ್ಜುನ್​ಗೆ, ರೇವತಿ ಸಾವಿಗೆ ನೇರ ಸಂಬಂಧವೇ ಇಲ್ಲ. ಇದು ಅಚಾನಕ್ಕಾಗಿ ನಡೆದಿರುವ ಘಟನೆ. ಇಂಥಹಾ ಅಪಘಾತಗಳು ಸಾಕಷ್ಟು ನಡೆಯುತ್ತಲೇ ಇರುತ್ತವೆ. ಈ ರೀತಿಯ ಘಟನೆಗಳಿಗೆ ನಟರನ್ನು, ರಾಜಕಾರಣಿಗಳನ್ನು ಕೊಲೆಗಾರರು ಎನ್ನಲಾಗದು ಎಂದು ವಾದಿಸಿದರು. ಹಲವು ಇತರೆ ಪ್ರಕರಣಗಳ ಉಲ್ಲೇಖಗಳನ್ನು ಸಹ ವಕೀಲರು ನ್ಯಾಯಾಲಯದಲ್ಲಿ ಮಾಡಿದರು. ವಾದ ಆಲಿಸಿದ ನ್ಯಾಯಮೂರ್ತಿಗಳು ಅಲ್ಲು ಅರ್ಜುನ್​ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ.

ಅಲ್ಲು ಅರ್ಜುನ್​ಗೆ ನಿಯಮಿತ ಅವಧಿಯ ಮಧ್ಯಂತರ ಜಾಮೀನು ಮಂಜೂರು ಮಾಡಿದ ತೆಲಂಗಾಣ ಹೈಕೋರ್ಟ್​, ಬಂಧನ ಈಗಾಗಲೇ ಆಗಿರುವ ಕಾರಣ ಜೈಲು ಸೂಪರಿಂಡೆಂಟ್​ಗೆ ಬಾಂಡ್​ಗಳನ್ನು ನೀಡಿ ಬಿಡುಗಡೆ ಆಗಬಹುದು ಎಂದು ಆದೇಶಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Fri, 13 December 24

ವಕ್ಫ್​ ಜಟಾಪಟಿ: ಸಚಿವ ಸ್ಥಾನಕ್ಕೆ ರಾಜೀನಾಮೆ ಸವಾಲ್ ಹಾಕಿದ ಜಮೀರ್!
ವಕ್ಫ್​ ಜಟಾಪಟಿ: ಸಚಿವ ಸ್ಥಾನಕ್ಕೆ ರಾಜೀನಾಮೆ ಸವಾಲ್ ಹಾಕಿದ ಜಮೀರ್!
ವಿಷಯ ಪ್ರಸ್ತಾಪಿಸಿ ಸಮರ್ಥಿಸಿಕೊಳ್ಳಲು ಹೆಣಗುತ್ತಿರುವ ವಿಪಕ್ಷ ನಾಯಕ ಅಶೋಕ
ವಿಷಯ ಪ್ರಸ್ತಾಪಿಸಿ ಸಮರ್ಥಿಸಿಕೊಳ್ಳಲು ಹೆಣಗುತ್ತಿರುವ ವಿಪಕ್ಷ ನಾಯಕ ಅಶೋಕ
ಪವಿತ್ರಾ ಗೌಡಗೆ ಜಾಮೀನು; ಮೊದಲ ಬಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಾಯಿ
ಪವಿತ್ರಾ ಗೌಡಗೆ ಜಾಮೀನು; ಮೊದಲ ಬಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಾಯಿ
ಮದವೇರಿದಾಗ ಸ್ಮಶಾನದಲ್ಲಿ ಸುತ್ತು ಹಾಕಬೇಕು: ಹೀಗೆಂದಿದ್ದೇಕೆ ಅಶೋಕ್?
ಮದವೇರಿದಾಗ ಸ್ಮಶಾನದಲ್ಲಿ ಸುತ್ತು ಹಾಕಬೇಕು: ಹೀಗೆಂದಿದ್ದೇಕೆ ಅಶೋಕ್?
ಹಿಂದೆ ನೀವು ಸದನವನ್ನು ಹೀಗಾ ನಡೆಸಿದ್ದು ಅಂತ ಸಿಎಂರನ್ನು ಪ್ರಶ್ನಿಸಿದ ಅಶೋಕ
ಹಿಂದೆ ನೀವು ಸದನವನ್ನು ಹೀಗಾ ನಡೆಸಿದ್ದು ಅಂತ ಸಿಎಂರನ್ನು ಪ್ರಶ್ನಿಸಿದ ಅಶೋಕ
ತಮ್ಮದೇ ಪಕ್ಷದ ಮಂತ್ರಿಯನ್ನು ಮಾತಾಡಲುಮ ಬಿಡದ ನರೇಂದ್ರ ಸ್ವಾಮಿ
ತಮ್ಮದೇ ಪಕ್ಷದ ಮಂತ್ರಿಯನ್ನು ಮಾತಾಡಲುಮ ಬಿಡದ ನರೇಂದ್ರ ಸ್ವಾಮಿ
ಅಲ್ಲು ಅರ್ಜುನ್ ಬಂಧಿಸಿ ಕರೆದೊಯ್ದ ಪೊಲೀಸರು: ವಿಡಿಯೋ ಇಲ್ಲಿದೆ
ಅಲ್ಲು ಅರ್ಜುನ್ ಬಂಧಿಸಿ ಕರೆದೊಯ್ದ ಪೊಲೀಸರು: ವಿಡಿಯೋ ಇಲ್ಲಿದೆ
ಉಡುಪಿ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದ ಬಾಲಕನಿಗೆ ಥಳಿತ
ಉಡುಪಿ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದ ಬಾಲಕನಿಗೆ ಥಳಿತ
ಒಂದು ದೇಶ ಒಂದು ಚುನಾವಣೆ ಬಗ್ಗೆ ಬಹಳಷ್ಟು ಚರ್ಚೆ ಆಗಬೇಕಿದೆ: ಪರಮೇಶ್ವರ್
ಒಂದು ದೇಶ ಒಂದು ಚುನಾವಣೆ ಬಗ್ಗೆ ಬಹಳಷ್ಟು ಚರ್ಚೆ ಆಗಬೇಕಿದೆ: ಪರಮೇಶ್ವರ್
ಮೀಸಲಾತಿ ವಿಷಯದಲ್ಲಿ ಯತ್ನಾಳ್ ತಮ್ಮ ಸರ್ಕಾರವನ್ನು ಸಮರ್ಥಿಸಿಕೊಳ್ಳುತ್ತಾರೆ
ಮೀಸಲಾತಿ ವಿಷಯದಲ್ಲಿ ಯತ್ನಾಳ್ ತಮ್ಮ ಸರ್ಕಾರವನ್ನು ಸಮರ್ಥಿಸಿಕೊಳ್ಳುತ್ತಾರೆ