AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ಪೊಲೀಸ್ ವಿಚಾರಣೆ ವೇಳೆ ಅಲ್ಲು ಅರ್ಜುನ್​ಗೆ ಕೇಳಿದ ಪ್ರಶ್ನೆಗಳಿವು

ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಡಿಸೆಂಬರ್ 23ರಂದು ನೋಟಿಸ್ ನೀಡಲಾಗಿತ್ತು. ಈ ಘಟನೆಯಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಪೊಲೀಸರು ಅಲ್ಲು ಅರ್ಜುನ್ ಅವರನ್ನು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

Allu Arjun: ಪೊಲೀಸ್ ವಿಚಾರಣೆ ವೇಳೆ ಅಲ್ಲು ಅರ್ಜುನ್​ಗೆ ಕೇಳಿದ ಪ್ರಶ್ನೆಗಳಿವು
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Dec 24, 2024 | 12:27 PM

Share

ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ನಡೆದ ಕಾಲ್ತುಳಿತದ ಕೇಸ್​ಗೆ ಸಂಬಂಧಿಸಿ ಅಲ್ಲು ಅರ್ಜುನ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಪೊಲೀಸರು ಅಲ್ಲು ಅರ್ಜುನ್​ಗೆ ಡಿಸೆಂಬರ್ 23ರಂದು ನೋಟಿಸ್ ಕಳುಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ವಿಚಾರಣೆ ಎದುರಿಸಿದ್ದಾರೆ. ಈ ವೇಳೆ ಪೊಲೀಸರು ಹಲವು ಪ್ರಶ್ನೆಗಳನ್ನು ಎದುರಿಸಿದ್ದಾರೆ. ಇದಕ್ಕೆ ಅವರು ಯಾವ ರೀತಿಯಲ್ಲಿ ಉತ್ತರಿಸಿದರು ಎನ್ನುವ ಪ್ರಶ್ನೆ ಮೂಡಿದೆ.

ಅಲ್ಲು ಅರ್ಜುನ್ ಥಿಯೇಟರ್​ಗೆ ಬಂದಾಗ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದರು. ಅಲ್ಲು ಅರ್ಜುನ್ ಅವರ ಬೌನ್ಸರ್‌ಗಳು ಪ್ರೇಕ್ಷಕರನ್ನು ಹಿಂದಕ್ಕೆ ತಳ್ಳಿದಾಗ ಕಾಲ್ತುಳಿತ ಉಂಟಾಯಿತು ಎನ್ನಲಾಗಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅವರ ಮಗನೂ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಥಿಯೇಟರ್ ಮಾಲೀಕರೊಂದಿಗೆ ಅಲ್ಲು ಅರ್ಜುನ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಅಲ್ಲು ಅರ್ಜುನ್ ಅವರು ಈ ಪ್ರಕರಣದಲ್ಲಿ A11 ಆಗಿದ್ದಾರೆ. ಈಗ ಅವರಿಗೆ ವಿಚಾರಣೆ ವೇಳೆ ಕೆಲವು ಪ್ರಶ್ನೆಗಳನ್ನು ಕೇಳಲಾಗಿದೆ.

  • ಥಿಯೇಟರ್‌ಗೆ ಬರುವ ಬಗ್ಗೆ ನೀವು ಯಾರಿಗೆ ತಿಳಿಸಿದ್ದಿರಿ?
  • ನೀವು ರೋಡ್ ಶೋಗೆ ಅನುಮತಿ ತೆಗೆದುಕೊಂಡಿದ್ದೀರಾ ಅಥವಾ ಇಲ್ಲವೇ?
  • ಅನುಮತಿ ನಿರಾಕರಿಸಲಾಗಿದೆ ಎಂದು ಯಾರೂ ಹೇಳಲಿಲ್ಲವೇ?
  • ನಿಮ್ಮ ಕುಟುಂಬದ ಯಾವ ಸದಸ್ಯರು ಥಿಯೇಟರ್​ಗೆ ಬಂದಿದ್ದರು?
  • ನೀವು ಥಿಯೇಟರ್​ನಲ್ಲಿ ಇದ್ದಾಗ ರೇವತಿ ಸತ್ತಿದ್ದು ಗೊತ್ತಿರಲಿಲ್ಲವೇ?
  • ಎಸಿಪಿ ಮತ್ತು ಸಿಐ ನಿಮ್ಮನ್ನು ಭೇಟಿ ಮಾಡಿದ್ದು ನಿಜವಲ್ಲವೇ?
  • ನಿಮ್ಮೊಂದಿಗೆ ಎಷ್ಟು ಬೌನ್ಸರ್‌ಗಳು ಬಂದರು? ನೀವು ಎಲ್ಲಿಂದ ಬಂದಿರಿ?
  • ಅಭಿಮಾನಿಗಳ ಮೇಲೆ ದಾಳಿ ಮಾಡಿದ ಬೌನ್ಸರ್‌ಗಳ ವಿವರಗಳೇನು?
  • ಪ್ರೆಸ್‌ಮೀಟ್‌ನಲ್ಲಿ ನೀವು ಹೇಳಿದ್ದಕ್ಕೆ ಅರ್ಥವೇನು?
  • ಮಹಿಳೆಯ ಸಾವಿನ ಬಗ್ಗೆ ನಿಮಗೆ ಯಾವಾಗ ಗೊತ್ತಾಯಿತು?
  • ನೀವು 2:45 ಕ್ಕೆ ಥಿಯೇಟರ್‌ನಲ್ಲಿದ್ದೀರಿ ಎಂಬುದು ನಿಜವಲ್ಲವೇ?
  • 850 ಮೀಟರ್ ರೋಡ್ ಶೋ ಮಾಡಿದ್ದು ಏಕೆ?
  • ಹೊರಡುವಾಗ ಮತ್ತೇಕೆ ಅಭಿಮಾನಿಗಳತ್ತ ಕೈ ಬೀಸಬೇಕಿತ್ತು?

ಇದನ್ನೂ ಓದಿ: ವಕೀಲರ ಜೊತೆಗೆ ಪೊಲೀಸರ ವಿಚಾರಣೆಗೆ ಹಾಜರಾದ ಅಲ್ಲು ಅರ್ಜುನ್

ಈ ಪ್ರಶ್ನೆಗಳನ್ನು ಅಲ್ಲು ಅರ್ಜುನ್ ಅವರು ಕೇಳಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅಲ್ಲು ಅರ್ಜುನ್ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಮ್ಮ ತಪ್ಪು ಇಲ್ಲ ಎಂದು ಹೇಳಿದ್ದರು. ಪೊಲೀಸರು ನನಗೆ ಏನು ಹೇಲೇ ಇಲ್ಲ ಎಂದು ಅಲ್ಲು ಅರ್ಜುನ್ ವಾದಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ