ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತದ ಕೇಸ್ಗೆ ಸಂಬಂಧಿಸಿ ಅಲ್ಲು ಅರ್ಜುನ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಪೊಲೀಸರು ಅಲ್ಲು ಅರ್ಜುನ್ಗೆ ಡಿಸೆಂಬರ್ 23ರಂದು ನೋಟಿಸ್ ಕಳುಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ವಿಚಾರಣೆ ಎದುರಿಸಿದ್ದಾರೆ. ಈ ವೇಳೆ ಪೊಲೀಸರು ಹಲವು ಪ್ರಶ್ನೆಗಳನ್ನು ಎದುರಿಸಿದ್ದಾರೆ. ಇದಕ್ಕೆ ಅವರು ಯಾವ ರೀತಿಯಲ್ಲಿ ಉತ್ತರಿಸಿದರು ಎನ್ನುವ ಪ್ರಶ್ನೆ ಮೂಡಿದೆ.
ಅಲ್ಲು ಅರ್ಜುನ್ ಥಿಯೇಟರ್‌ಗೆ ಬಂದಾಗ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದರು. ಅಲ್ಲು ಅರ್ಜುನ್ ಅವರ ಬೌನ್ಸರ್‌ಗಳು ಪ್ರೇಕ್ಷಕರನ್ನು ಹಿಂದಕ್ಕೆ ತಳ್ಳಿದಾಗ ಕಾಲ್ತುಳಿತ ಉಂಟಾಯಿತು ಎನ್ನಲಾಗಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅವರ ಮಗನೂ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಥಿಯೇಟರ್ ಮಾಲೀಕರೊಂದಿಗೆ ಅಲ್ಲು ಅರ್ಜುನ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಅಲ್ಲು ಅರ್ಜುನ್ ಅವರು ಈ ಪ್ರಕರಣದಲ್ಲಿ A11 ಆಗಿದ್ದಾರೆ. ಈಗ ಅವರಿಗೆ ವಿಚಾರಣೆ ವೇಳೆ ಕೆಲವು ಪ್ರಶ್ನೆಗಳನ್ನು ಕೇಳಲಾಗಿದೆ.
ಇದನ್ನೂ ಓದಿ: ವಕೀಲರ ಜೊತೆಗೆ ಪೊಲೀಸರ ವಿಚಾರಣೆಗೆ ಹಾಜರಾದ ಅಲ್ಲು ಅರ್ಜುನ್
ಈ ಪ್ರಶ್ನೆಗಳನ್ನು ಅಲ್ಲು ಅರ್ಜುನ್ ಅವರು ಕೇಳಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅಲ್ಲು ಅರ್ಜುನ್ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಮ್ಮ ತಪ್ಪು ಇಲ್ಲ ಎಂದು ಹೇಳಿದ್ದರು. ಪೊಲೀಸರು ನನಗೆ ಏನು ಹೇಲೇ ಇಲ್ಲ ಎಂದು ಅಲ್ಲು ಅರ್ಜುನ್ ವಾದಿಸಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.