ಕರ್ನಾಟಕದಲ್ಲಿ ‘ಪುಷ್ಪ 2’ ವಿರುದ್ಧ ಬೀದಿಗಿಳಿದ ಅಲ್ಲು ಅರ್ಜುನ್ ಫ್ಯಾನ್ಸ್; ಇದಕ್ಕಿದೆ ಅಚ್ಚರಿಯ ಕಾರಣ

‘ಪುಷ್ಪ 2’ ಚಿತ್ರದ ಶೂಟಿಂಗ್ ಶುರುವಾಗಿದೆ. ಅಲ್ಲು ಅರ್ಜುನ್ ಅವರು ಶೂಟಿಂಗ್​ನಲ್ಲಿ ಈವರೆಗೆ ಭಾಗಿ ಆಗಿಲ್ಲ ಎನ್ನಲಾಗಿದೆ. ಡಿಸೆಂಬರ್ ವೇಳೆಗೆ ಅವರು ಚಿತ್ರೀಕರಣದಲ್ಲಿ ಭಾಗಿ ಆಗುತ್ತಾರೆ ಎನ್ನಲಾಗಿದೆ.

ಕರ್ನಾಟಕದಲ್ಲಿ ‘ಪುಷ್ಪ 2’ ವಿರುದ್ಧ ಬೀದಿಗಿಳಿದ ಅಲ್ಲು ಅರ್ಜುನ್ ಫ್ಯಾನ್ಸ್; ಇದಕ್ಕಿದೆ ಅಚ್ಚರಿಯ ಕಾರಣ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 17, 2022 | 2:37 PM

‘ಪುಷ್ಪ’ ಸಿನಿಮಾ (Pushpa Movie) ತೆರೆಗೆ ಬಂದು ವರ್ಷ ಕಳೆಯುತ್ತಾ ಬಂದಿದೆ. ಸಿನಿಮಾ ರಿಲೀಸ್ ಆದ ಕೆಲವೇ ತಿಂಗಳಲ್ಲಿ ಸೀಕ್ವೆಲ್​ಗೆ ಶೂಟಿಂಗ್ ಆರಂಭ ಆಗಬೇಕಿತ್ತು. ಆದರೆ, ಚಿತ್ರದ ಕೆಲಸಗಳು ವಿಳಂಬ ಆದವು. ‘ಪುಷ್ಪ’ ಸೂಪರ್ ಹಿಟ್ ಆದ ಕಾರಣ ‘ಪುಷ್ಪ 2’ ಚಿತ್ರದ ಕಥೆಯಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳಲಾಗಿದೆ. ಸ್ಕ್ರಿಪ್ಟ್​ಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಹೀಗಾಗಿ ಚಿತ್ರದ ಪ್ರೀಪ್ರೊಡಕ್ಷನ್​ ಕೆಲಸಕ್ಕೆ ಒಂದು ವರ್ಷ ಬೇಕಾಗಿದೆ. ಈ ಮಧ್ಯೆ ‘ಪುಷ್ಪ 2’ (Pushpa 2) ಚಿತ್ರದ ವಿರುದ್ಧ ಕರ್ನಾಟಕ, ಮಹಾರಾಷ್ಟ್ರದಲ್ಲಿರುವ ಅಲ್ಲು ಅರ್ಜುನ್ ಅಭಿಮಾನಿಗಳು ಬೀದಿಗೆ ಇಳಿದಿದ್ದಾರೆ. ಚಿತ್ರದ ಬಗ್ಗೆ ಅಪ್​​ಡೇಟ್ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

‘ಪುಷ್ಪ 2’ ಚಿತ್ರಕ್ಕೆ ಕೆಲ ತಿಂಗಳ ಹಿಂದೆ ಮುಹೂರ್ತ ನಡೆದಿತ್ತು. ಆ ಸಂದರ್ಭದಲ್ಲಿ ಅಲ್ಲು ಅರ್ಜುನ್ ಅವರು ಇರಲಿಲ್ಲ. ಅವರು ವಿದೇಶಿ ಪ್ರವಾಸದಲ್ಲಿ ಇದ್ದ ಕಾರಣ ಈ ಕಾರ್ಯಕ್ರಮದಲ್ಲಿ ಭಾಗಿ ಆಗಲು ಸಾಧ್ಯವಾಗಿರಲಿಲ್ಲ. ಈಗ ‘ಪುಷ್ಪ 2’ ಚಿತ್ರದ ಶೂಟಿಂಗ್ ಶುರುವಾಗಿದೆ. ಅಲ್ಲು ಅರ್ಜುನ್ ಅವರು ಶೂಟಿಂಗ್​ನಲ್ಲಿ ಈವರೆಗೆ ಭಾಗಿ ಆಗಿಲ್ಲ ಎನ್ನಲಾಗಿದೆ. ಡಿಸೆಂಬರ್ ವೇಳೆಗೆ ಅವರು ಚಿತ್ರೀಕರಣದಲ್ಲಿ ಭಾಗಿ ಆಗುತ್ತಾರೆ ಎನ್ನಲಾಗಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಈ ಕಾರಣಕ್ಕೆ ಫ್ಯಾನ್ಸ್ ಬೀದಿಗೆ ಇಳಿದಿದ್ದಾರೆ.

ಇದನ್ನೂ ಓದಿ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ಕಿರುತೆರೆ ಜಗತ್ತಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಇವರೇ ನೋಡಿ; ಒಂದು ದಿನಕ್ಕೆ ಎಷ್ಟು ಲಕ್ಷ?
Image
‘ಕೆಜಿಎಫ್: ಚಾಪ್ಟರ್​​ 2’ ಸಿನಿಮಾ ಹಿಟ್​ ಆದ್ಮೇಲೆ ಶ್ರೀನಿಧಿ ಶೆಟ್ಟಿ ಕೇಳ್ತಿರುವ ಸಂಭಾವನೆ ಎಷ್ಟು ಕೋಟಿ?
Image
1992ರಲ್ಲಿ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು? ನೀವು ಅಚ್ಚರಿ ಪಡೋದು ಗ್ಯಾರಂಟಿ

ಪ್ರತಿಭಟನೆ ನಡೆಸಿರುವ ಅಲ್ಲು ಅರ್ಜುನ್ ಫ್ಯಾನ್ಸ್, ‘ನಮಗೆ ಪುಷ್ಪ 2 ಚಿತ್ರದ ಅಪ್​ಡೇಟ್​ ಬೇಕು’ ಎಂದು ಬ್ಯಾನರ್ ಹಿಡಿದು ನಿಂತಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗಿದೆ. ಯುಎಇ, ಕರ್ನಾಟಕ, ಮಹಾರಾಷ್ಟ್ರ, ಕೇರಳ ಮೊದಲಾದ ಕಡೆಗಳಲ್ಲಿ ಈ ಪ್ರತಿಭಟನೆ ನಡೆದಿದೆ.

ಇದನ್ನೂ ಓದಿ: ‘ಪುಷ್ಪ 2’ ರಿಲೀಸ್ ವಿಚಾರದಲ್ಲಿ ‘ಕೆಜಿಎಫ್ 2’ ಹಾದಿಯನ್ನೇ ಅನುಸರಿಸಿದ ನಿರ್ದೇಶಕ ಸುಕುಮಾರ್?

‘ಪುಷ್ಪ’ ಸಿನಿಮಾ 300 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಬಾಲಿವುಡ್ ಒಂದರಲ್ಲೇ ಈ ಸಿನಿಮಾ 100 ಕೋಟಿ ರೂಪಾಯಿ ಗಳಿಸಿತ್ತು. ಈ ಕಾರಣಕ್ಕೆ ಸೀಕ್ವೆಲ್ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರ 2024ರ ಏಪ್ರಿಲ್​ ವೇಳೆಗೆ ರಿಲೀಸ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಚಿತ್ರದ ಶೂಟಿಂಗ್​​ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ತಂಡ ಹೆಚ್ಚಿನ ಸಮಯ ಮೀಸಲಿಡುತ್ತಿದೆ. ಈ ಕಾರಣಕ್ಕೆ ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಇನ್ನೂ ಒಂದೂವರೆ ವರ್ಷ ಕಾಯಲೇಬೇಕಿದೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ