AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದ ಅಲ್ಲು ಅರ್ಜುನ್​; ಆಲಿಯಾ ಭಟ್​, ಕೃತಿ ಸನೋನ್​ಗೆ ‘ಅತ್ಯುತ್ತಮ ನಟಿ’ ಅವಾರ್ಡ್​

ಟಾಲಿವುಡ್​ ನಟ ಅಲ್ಲು ಅರ್ಜುನ್​ ಅವರು ‘ಪುಷ್ಪ’ ಚಿತ್ರದಲ್ಲಿನ ಅಭಿನಯಕ್ಕೆ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರಕ್ಕಾಗಿ ಆಲಿಯಾ ಭಟ್​ ಮತ್ತು ‘ಮಿಮಿ’ ಸಿನಿಮಾಗಾಗಿ ಕೃತಿ ಸನೋನ್​ ಅವರು ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದ ಅಲ್ಲು ಅರ್ಜುನ್​; ಆಲಿಯಾ ಭಟ್​, ಕೃತಿ ಸನೋನ್​ಗೆ ‘ಅತ್ಯುತ್ತಮ ನಟಿ’ ಅವಾರ್ಡ್​
ಕೃತಿ ಸನೋನ್​, ಅಲ್ಲು ಅರ್ಜುನ್​, ಆಲಿಯಾ ಭಟ್​
ಮದನ್​ ಕುಮಾರ್​
|

Updated on: Aug 24, 2023 | 7:05 PM

Share

ಸಿನಿಪ್ರಿಯರು ಮತ್ತು ಸೆಲೆಬ್ರಿಟಿಗಳು ಬಹಳ ಕಾತರದಿಂದ ಕಾಯುತ್ತಿದ್ದ ರಾಷ್ಟ್ರ ಪ್ರಶಸ್ತಿ (69th National Film Award) ಪಟ್ಟಿ ಪ್ರಕಟ ಆಗಿದೆ. ಇಂದು (ಆಗಸ್ಟ್​ 24) ದೆಹಲಿಯಲ್ಲಿ 69ನೇ ನ್ಯಾಷನಲ್​ ಫಿಲ್ಮ್​ ಅವಾರ್ಡ್​ ಘೋಷಣೆ ಮಾಡಲಾಗಿದೆ. 2021ರಲ್ಲಿ ಸೆನ್ಸಾರ್​ ಪ್ರಮಾಣ ಪತ್ರ ಪಡೆದ ಸಿನಿಮಾಗಳನ್ನು ಈ ಸಾಲಿನ ಪ್ರಶಸ್ತಿಗೆ ಪರಿಗಣಿಸಲಾಗಿದೆ. ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅವರು ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅವರಿಗೆ ಈ ಗೌರವ ಸಂದಿದೆ. ಇನ್ನು, ನಟಿಯಾದ ಆಲಿಯಾ ಭಟ್​ ಮತ್ತು ಕೃತಿ ಸನೋನ್​ ಅವರು ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ಈ ಸಾಧನೆ ಮಾಡಿದ್ದಕ್ಕಾಗಿ ಎಲ್ಲರೂ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಲ್ಲು ಅರ್ಜುನ್​, ಕೃತಿ ಸನೋನ್​ ಮತ್ತು ಆಲಿಯಾ ಭಟ್ (Alia Bhatt)​ ಅವರ ಅಭಿಮಾನಿಗಳು ಹಿರಿಹಿರಿ ಹಿಗ್ಗುತ್ತಿದ್ದಾರೆ.

‘ಪುಷ್ಪ’ ಸಿನಿಮಾಗೆ ಸುಕುಮಾರ್​ ಅವರು ನಿರ್ದೇಶನ ಮಾಡಿದ್ದಾರೆ. 2021ರ ಡಿಸೆಂಬರ್​ 17ರಂದು ಈ ಸಿನಿಮಾ ಬಿಡುಗಡೆ ಆಯಿತು. ಅಲ್ಲು ಅರ್ಜುನ್​ ಅವರು ಭಿನ್ನವಾದ ಗೆಟಪ್​ನಲ್ಲಿ ಕಾಣಿಸಿಕೊಂಡರು. ಅವರ ಮ್ಯಾನರಿಸಂ ನೋಡಿ ಅಭಿಮಾನಿಗಳು ಫಿದಾ ಆದರು. ‘ಶ್ರೀವಲ್ಲಿ..’ ಹಾಡಿನಲ್ಲಿ ಅಲ್ಲು ಅರ್ಜುನ್​ ಮಾಡಿದ ಡ್ಯಾನ್ಸ್​ ಸ್ಟೆಪ್​ ಸಖತ್​ ವೈರಲ್​ ಆಯಿತು. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿದ್ದ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತು. ಈಗ ಆ ಸಿನಿಮಾಗೆ ಸೀಕ್ವೆಲ್​ ಸಿದ್ಧವಾಗುತ್ತಿದೆ. ಅಲ್ಲು ಅರ್ಜುನ್​ ಅವರಿಗೆ ನ್ಯಾಷನಲ್​ ಅವಾರ್ಡ್​ ಸಿಕ್ಕಿರುವುದರಿಂದ ‘ಪುಷ್ಪ 2’ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.

ಇದನ್ನೂ ಓದಿ: ಭಾರತಿ ವಿಷ್ಣುವರ್ಧನ್​ ಜೀವನದ ಕುರಿತ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಅನಿರುದ್ಧ್​ ಜತ್ಕರ್​

ನಟಿ ಕೃತಿ ಸನೋನ್​ ಅವರು ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಬರೀ ಗ್ಲಾಮರ್ ಪಾತ್ರಗಳು ಮಾತ್ರವಲ್ಲದೇ ಅಭಿನಯಕ್ಕೆ ಮಹತ್ವ ಇರುವಂತಹ ಪಾತ್ರಗಳ ಮೂಲಕವೂ ಅವರು ಗಮನ ಸೆಳೆಯುತ್ತಾರೆ. ‘ಮಿಮಿ’ ಸಿನಿಮಾದಲ್ಲಿ ಕೃತಿ ಸನೋನ್​ ಅವರು ಬಾಡಿಗೆ ತಾಯಿ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ‘ಪರಮ ಸುಂದರಿ..’ ಹಾಡು ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಕೃತಿ ಸನೋನ್​ ಅವರ ನಟನೆಗೆ ಅಭಿಮಾನಿಗಳು ಫಿದಾ ಆದರು. ಈಗ 69ನೇ ರಾಷ್ಟ್ರ ಪ್ರಶಸ್ತಿಯಲ್ಲಿ ಆಲಿಯಾ ಭಟ್​ ಜೊತೆ ಕೃತಿ ಸನೋನ್​ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಯಾರಿಗೆಲ್ಲ ಸಿಕ್ಕಿದೆ ನ್ಯಾಷನಲ್​ ಅವಾರ್ಡ್​? ಇಲ್ಲಿದೆ ಲೈವ್​ ವಿಡಿಯೋ

ಆಲಿಯಾ ಭಟ್​ ಅವರ ನಟನೆ ಬಗ್ಗೆ ಹೊಸದಾಗಿ ಹೇಳಬೇಕಾಗಿದ್ದಿಲ್ಲ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದಲ್ಲಿ ಅವರು ಗಂಗೂಬಾಯಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಖ್ಯಾತ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. 2022ರ ಫೆಬ್ರವರಿ 25ರಂದು ಈ ಸಿನಿಮಾ ಬಿಡುಗಡೆ ಆಯಿತು. ಈ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿತು. ಈಗ ಪ್ರಶಸ್ತಿ ಬಂದಿರುವುದು ಚಿತ್ರತಂಡಕ್ಕೆ ಸಂತಸ ತಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್