‘ಪುಷ್ಪ 2’ ಚಿತ್ರದ ಬಗ್ಗೆ ಮೂಡಿದೆ ಎರಡು ಅನುಮಾನ; ಇದಕ್ಕೆಲ್ಲ ಕಾರಣ ಅಲ್ಲು ಅರ್ಜುನ್​ ಹೊಸ ಲುಕ್​

Allu Arjun: ಅಲ್ಲು ಅರ್ಜುನ್​ ಅಭಿಮಾನಿಗಳು ‘ಪುಷ್ಪ 2’ ಚಿತ್ರದ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ ಈ ನಡುವೆ ಒಂದಷ್ಟು ಅನುಮಾನಗಳು ಹುಟ್ಟಿಕೊಂಡಿವೆ.

‘ಪುಷ್ಪ 2’ ಚಿತ್ರದ ಬಗ್ಗೆ ಮೂಡಿದೆ ಎರಡು ಅನುಮಾನ; ಇದಕ್ಕೆಲ್ಲ ಕಾರಣ ಅಲ್ಲು ಅರ್ಜುನ್​ ಹೊಸ ಲುಕ್​
ಅಲ್ಲು ಅರ್ಜುನ್
Follow us
TV9 Web
| Updated By: ಮದನ್​ ಕುಮಾರ್​

Updated on: Apr 17, 2022 | 12:00 PM

ಇತ್ತೀಚಿನ ವರ್ಷಗಳಲ್ಲಿ ಬ್ಲಾಕ್​ ಬಸ್ಟರ್​ ಹಿಟ್​ ಎನಿಸಿಕೊಂಡ ಸಿನಿಮಾಗಳಲ್ಲಿ ‘ಪುಷ್ಪ’ ಚಿತ್ರ (Pushpa Movie) ಕೂಡ ಪ್ರಮುಖವಾಗಿದೆ. ರಕ್ತಚಂದನ ಕಳ್ಳ ಸಾಗಣೆ ಕುರಿತ ಕಥೆ ಹೊಂದಿದ್ದ ಈ ಸಿನಿಮಾಗೆ ಸುಕುಮಾರ್​ ನಿರ್ದೇಶನವಿದೆ. ಅಲ್ಲು ಅರ್ಜುನ್​ (Allu Arjun) ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿದ ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಬಂಪರ್​ ಬೆಳೆ ತೆಗೆಯಿತು. ಈಗ ಇದರ ಎರಡನೇ ಪಾರ್ಟ್​ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರ ಲುಕ್​ ವಿಶೇಷವಾಗಿತ್ತು. ಬೇರೆಲ್ಲ ಚಿತ್ರದಲ್ಲಿ ಸ್ಟೈಲಿಶ್​ ಆಗಿ ಕಾಣಿಸಿಕೊಳ್ಳುವ ಅವರು ‘ಪುಷ್ಪ’ ಚಿತ್ರದಲ್ಲಿ ರಗಡ್​ ಆಗಿ ಕಾಣಿಸಿಕೊಂಡಿದ್ದರು. ಆದರೆ ಈಗ ಅವರು ಈ ಚಿತ್ರದ 2ನೇ ಪಾರ್ಟ್​ನಲ್ಲಿ (Pushpa 2 Movie) ಲುಕ್​ ಬದಲಾಯಿಸಿಕೊಳ್ಳುತ್ತಾರಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಈ ಕುರಿತು ಅಭಿಮಾನಿಗಳು ಚರ್ಚೆ ಮಾಡುತ್ತಿದ್ದಾರೆ. ಅಷ್ಟಕ್ಕೂ ಜನರಿಗೆ ಈ ಅನುಮಾನ ಮೂಡಲು ಕಾರಣ ಆಗಿರುವುದು ಅಲ್ಲು ಅರ್ಜುನ್​ ಅವರ ಕೆಲವು ಹೊಸ ಫೋಟೋಗಳು.

ಅಲ್ಲು ಅರ್ಜುನ್ ಅವರು ಕುಟುಂಬದವರ ಜೊತೆ ವಿದೇಶಕ್ಕೆ ತೆರಳಿದ್ದಾರೆ. ಅವರ ಯುರೋಪ್ ಟ್ರಿಪ್​ನ ಕೆಲವು ಫೋಟೋಗಳು ವೈರಲ್​ ಆಗಿವೆ. ಅದರಲ್ಲಿ ಅಲ್ಲು ಅರ್ಜುನ್​ ಲುಕ್​ ಬದಲಾಗಿದೆ. ‘ಪುಷ್ಪ’ ಚಿತ್ರದಲ್ಲಿ ಉದ್ದ ಕೂಡಲು ಮತ್ತು ಗಡ್ಡ ಬಿಟ್ಟುಕೊಂಡು ಅವರು ನಟಿಸಿದ್ದರು. 2ನೇ ಪಾರ್ಟ್​ನ ಶೂಟಿಂಗ್​ ಕೆಲವೇ ದಿನಗಳಲ್ಲಿ ಆರಂಭ ಆಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈಗ ಅಲ್ಲು ಅರ್ಜುನ್​ ಅವರು ಉದ್ದ ಕೂದಲಿಗೆ ಕತ್ತರಿ ಹಾಕಿಕೊಂಡು, ಗಡ್ಡ ಟ್ರಿಮ್​ ಮಾಡಿಕೊಂಡಿದ್ದಾರೆ. ಹಾಗಾದರೆ ‘ಪುಷ್ಪ 2​’ ಚಿತ್ರದಲ್ಲಿ ಹಳೇ ಲುಕ್​ ಮುಂದುವರಿಯುವುದಿಲ್ಲವೇ ಎಂಬ ಅನುಮಾನ ಹುಟ್ಟಿಕೊಂಡಿದೆ.

ಒಂದು ವೇಳೆ ಅಲ್ಲು ಅರ್ಜುನ್​ ಅವರು ಮೊದಲ ಪಾರ್ಟ್​ ರೀತಿಯೇ ಎರಡನೇ ಪಾರ್ಟ್​ನಲ್ಲೂ ಕಾಣಿಸಿಕೊಳ್ಳಬೇಕು ಎಂದರೆ ಆ ರೀತಿ ಕೂದಲು ಬಿಡಲು, ಗಡ್ಡ ಬೆಳೆಸಿಕೊಳ್ಳಲು ಇನ್ನೂ ಎರಡು-ಮೂರು ತಿಂಗಳು ಬೇಕಾಗುತ್ತದೆ. ಹಾಗಾಗಿ ಜನರು ಎರಡು ಸಾಧ್ಯತೆಗಳನ್ನು ಊಹಿಸುತ್ತಿದ್ದಾರೆ. 2ನೇ ಪಾರ್ಟ್​ನಲ್ಲಿ ಅಲ್ಲು ಅರ್ಜುನ್​ ಅವರ ಲುಕ್​ ಬದಲಾಗಿರಬಹುದು ಅಥವಾ ಶೂಟಿಂಗ್​ ದಿನಾಂಕ ಮುಂದೂಡಿಕೆ ಆಗಿರಬಹುದು. ಆದರೆ ಈ ಕುರಿತು ಚಿತ್ರತಂಡದವರು ಯಾವುದೇ ಹೇಳಿಕೆ ನೀಡಿಲ್ಲ.

‘ಕೆಜಿಎಫ್​’ ಮತ್ತು ‘ಪುಷ್ಪ’ ಸಿನಿಮಾಗಳ ನಡುವೆ ಮೊದಲಿನಿಂದಲೂ ಹೋಲಿಕೆ ಮಾಡಲಾಗುತ್ತಿದೆ. ಈ ಸಿನಿಮಾಗಳ ನಡುವೆ ನೇರ ಪೈಪೋಟಿ ಇಲ್ಲದಿದ್ದರೂ ಕೂಡ ಯಾವ ಚಿತ್ರ ಎಷ್ಟು ರೆಕಾರ್ಡ್​ ಮಾಡಿತು ಎಂಬ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ‘ಒಂದು ಪುಷ್ಪ ಸಿನಿಮಾ 10 ಕೆಜಿಎಫ್​ ಸಿನಿಮಾಗಳಿಗೆ ಸಮ’ ಎಂದು ಮಾತು ಟಾಲಿವುಡ್​ ಮಂದಿಯಿಂದ ಕೇಳಿಬಂದ ಬಳಿಕ ಈ ಹಣಾಹಣಿ ಶುರುವಾಯಿತು. ಈಗ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಊಹಿಸಲಾಗದಂತಹ ದಾಖಲೆಗಳನ್ನು ಮಾಡುತ್ತಿದೆ. ಎರಡನೇ ದಿನಕ್ಕೆ ಭಾರತದ ಮಾರುಕಟ್ಟೆಯಲ್ಲಿ ಬರೋಬ್ಬರಿ 240 ಕೋಟಿ ರೂಪಾಯಿ ರೂಪಾಯಿ ಗಳಿಸಿದೆ. ಈ ಗೆಲುವಿನಿಂದಾಗಿ ‘ಪುಷ್ಪ 2’ ತಂಡದ ಮೇಲೆ ಒತ್ತಡ ಹೆಚ್ಚಿದೆ ಎಂದು ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್​ ಅಭಿಮಾನಿಗಳು ‘ಪುಷ್ಪ 2’ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ:

ಅಲ್ಲು ಅರ್ಜುನ್​ ಜನ್ಮದಿನ: ಟಾಲಿವುಡ್​ ಸ್ಟಾರ್​ ನಟನ ಬಗ್ಗೆ ಇಲ್ಲಿವೆ 5 ವಿಶೇಷ ಮಾಹಿತಿ

ಅಲ್ಲು ಅರ್ಜುನ್ ರಿಜೆಕ್ಟ್ ಮಾಡಿದ್ದ ಈ ಚಿತ್ರಗಳು ಸೂಪರ್​ಹಿಟ್

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ