AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಅಲ್ಲು ಅರ್ಜುನ್ ಹೊಸ ಸಿನಿಮಾಗೆ ಮುಹೂರ್ತ; ಶೂಟಿಂಗ್ ಆರಂಭ

ಅಲ್ಲು ಅರ್ಜುನ್ ಅವರು ಚಿತ್ರೀಕರಣಕ್ಕೆ ಸಜ್ಜಾಗಿದ್ದಾರೆ. ನಿರ್ದೇಶಕ ಅಟ್ಲಿ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಬಳಿಕ ಫೋಟೋಶೂಟ್ ಕೂಡ ನಡೆದಿದೆ. ಸ್ವಲ್ಪ ದಿನಗಳ ನಂತರ ದೀಪಿಕಾ ಪಡುಕೋಣೆ ಅವರು ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಮುಂಬೈನಲ್ಲಿ ಅಲ್ಲು ಅರ್ಜುನ್ ಹೊಸ ಸಿನಿಮಾಗೆ ಮುಹೂರ್ತ; ಶೂಟಿಂಗ್ ಆರಂಭ
Allu Arjun, Atlee
ಮದನ್​ ಕುಮಾರ್​
|

Updated on: Jun 11, 2025 | 11:10 PM

Share

ನಟ ಅಲ್ಲು ಅರ್ಜುನ್ (Allu Arjun) ಅವರು ನಿರ್ದೇಶಕ ಅಟ್ಲಿ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ‘ಪುಷ್ಪ 2’ ಸಿನಿಮಾದಿಂದ ಭಾರಿ ಗೆಲುವು ಕಂಡಿರುವ ಅಲ್ಲು ಅರ್ಜುನ್ ಹಾಗೂ ‘ಜವಾನ್’ ಸಿನಿಮಾದಿಂದ ಜಯಭೇರಿ ಬಾರಿಸಿರುವ ಅಟ್ಲಿ (Atlee) ಅವರು ಒಂದಾಗಿ ಸಿನಿಮಾ ಮಾಡುತ್ತಾರೆ ಎಂದಾಗಲೇ ಪ್ರೇಕ್ಷಕರ ನಿರೀಕ್ಷೆ ಜೋರಾಗಿತ್ತು. ಈಗ ಅವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಮುಂಬೈನಲ್ಲಿ ಜೂನ್ 11ರಂದು ಮುಹೂರ್ತ ನಡೆದಿದೆ. ಇದರಲ್ಲಿ ಅಲ್ಲು ಅರ್ಜುನ್, ಅಟ್ಲಿ ಹಾಗೂ ಇಡೀ ಚಿತ್ರತಂಡ ಭಾಗಿಯಾಗಿತ್ತು.

ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಏನೆಂಬುದು ಬಹಿರಂಗ ಆಗಿಲ್ಲ. ತಾತ್ಕಾಲಿಕವಾಗಿ ‘AA22xA6’ ಎಂದು ಕರೆಯಲಾಗುತ್ತಿದೆ. ಪಾತ್ರವರ್ಗದ ಬಗ್ಗೆ ಕೂಡ ಹೆಚ್ಚಿನ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಅಲ್ಲು ಅರ್ಜುನ್ ಜೊತೆ ದೀಪಿಕಾ ಪಡುಕೋಣೆ ಅಭಿನಯಿಸುತ್ತಾರೆ ಎಂಬುದಷ್ಟೇ ಖಚಿತವಾಗಿದೆ. ಇನ್ನುಳಿದ ಪಾತ್ರಧಾರಿಗಳ ಬಗ್ಗೆ ಮುಂದಿನ ದಿನಗಳಲ್ಲಿ ಸುದ್ದಿ ಸಿಗಲಿದೆ.

ವರದಿಗಳ ಪ್ರಕಾರ, ಜೂನ್ 12ರಿಂದ ‘AA22xA6’ ಸಿನಿಮಾದ ಶೂಟಿಂಗ್ ಆರಂಭ ಆಗಲಿದೆ. ಇಷ್ಟು ದಿನಗಳ ಕಾಲ ಭರ್ಜರಿಯಾಗಿ ಪ್ರೀ-ಪ್ರೊಡಕ್ಷನ್ ಕೆಲಸಗಳನ್ನು ಮಾಡಲಾಗಿದೆ. ಸಾಕಷ್ಟು ತಯಾರಿಯೊಂದಿಗೆ ಅಲ್ಲು ಅರ್ಜುನ್ ಮತ್ತು ಅಟ್ಲಿ ಅವರು ಸಿನಿಮಾದ ಶೂಟಿಂಗ್ ಆರಂಭಿಸುತ್ತಿದ್ದಾರೆ. ಭಾರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಇದನ್ನೂ ಓದಿ
Image
ಹೆಸರು ಬದಲಾವಣೆ ಮಾಡಿಕೊಳ್ಳಲಿರುವ ಅಲ್ಲು ಅರ್ಜುನ್, ಕಾರಣವೇನು?
Image
ಚಿತ್ರರಂಗದಲ್ಲಿ 22 ವರ್ಷ ಪೂರೈಸಿದ ಅಲ್ಲು ಅರ್ಜುನ್; ಮುಂದಿದೆ ದೊಡ್ಡ ಸವಾಲು
Image
‘ಪುಷ್ಪ 3’ ಚಿತ್ರಕ್ಕಾಗಿ ಎಷ್ಟು ವರ್ಷ ಕಾಯಬೇಕು? ಮಾಹಿತಿ ಕೊಟ್ಟ ನಿರ್ಮಾಪಕ
Image
ನಿರ್ಮಾಪಕರ ಜೊತೆ ಕಿರಿಕ್; ಸಲ್ಲುಗೆ ಮಾಡಬೇಕಿದ್ದ ಸಿನಿಮಾನ ಅಲ್ಲುಗೆ ಶಿಫ್ಟ್

ಜಾಗತಿಕ ಮಟ್ಟದಲ್ಲಿ ಈ ಸಿನಿಮಾ ತಯಾರಾಗಲಿದೆ. ಅದಕ್ಕಾಗಿ ವಿದೇಶದ ತಂತ್ರಜ್ಞರು ಕೂಡ ತೆರೆಹಿಂದೆ ಕೆಲಸ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಅವರು ತ್ರಿಪಾತ್ರದಲ್ಲಿ ನಟಿಸುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಇದು ಭರ್ಜರಿ ಆ್ಯಕ್ಷನ್ ಸಿನಿಮಾ ಆಗಿರಲಿದೆ. ವಿಎಫ್​ಎಕ್ಸ್ ದೃಶ್ಯಗಳು ಹೇರಳವಾಗಿ ಇರಲಿವೆ. ಈ ಎಲ್ಲ ಕಾರಣದಿಂದಾಗಿ ಅಲ್ಲು ಅರ್ಜುನ್ ಅವರ ಅಭಿಮಾನಿಗಳಲ್ಲಿ ನಿರೀಕ್ಷೆ ಜಾಸ್ತಿ ಆಗಿದೆ.

ಇದನ್ನೂ ಓದಿ: ಅಲ್ಲು ಅರ್ಜುನ್-ಅಟ್ಲಿ ಚಿತ್ರಕ್ಕೆ ದೀಪಿಕಾ ಎಂಟ್ರಿ ಅಧಿಕೃತ; ಪ್ರೋಮೋ ರಿಲೀಸ್

ಸನ್ ಪಿಕ್ಚರ್ಸ್​ ಸಂಸ್ಥೆಯು ‘AA22xA6’ ಸಿನಿಮಾಗೆ ಬಂಡವಾಳ ಹೂಡುತ್ತಿದೆ. ಅಂದಾಜು 700 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಮಾಡಲಾಗುತ್ತಿದೆ. ಅಲ್ಲು ಅರ್ಜುನ್ ಅವರ ಗೆಟಪ್ ಹೇಗಿರಲಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್ ಕಾತರರಾಗಿದ್ದಾರೆ. ದೀಪಿಕಾ ಪಡುಕೋಣೆ ಅವರು ಸ್ವಲ್ಪ ದಿನಗಳ ಬಳಿಕ ಶೂಟಿಂಗ್​ನಲ್ಲಿ ಭಾಗಿಯಾಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.