‘ಪುಷ್ಪ 2’ ಸಿನಿಮಾ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಹಲವು. ಈ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿರುವುದು ಒಂದು ಕಡೆಯಾದರೆ, ಈ ಸಿನಿಮಾದ ಹೀರೋ ಅಲ್ಲು ಅರ್ಜುನ್ ಅರೆಸ್ಟ್ ಆಗಿದ್ದು ಮತ್ತೊಂದು ಕಡೆ. ಸಿನಿಮಾ ವಿವಾದಗಳ ಮಧ್ಯೆಯೂ ಭರ್ಜರಿ ಗಳಿಕೆ ಮಾಡುವುದನ್ನು ಮುಂದುವರಿಸಿದೆ. ಈ ಸಿನಿಮಾ ಭಾನುವಾರ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಕಮಾಯಿ ಮಾಡಿದೆ. ಚಿತ್ರದ ಒಟ್ಟಾರೆ ಗಳಿಕೆ 1,322 ರೂಪಾಯಿ ಆಗಿದೆ ಅನ್ನೋದು ವಿಶೇಷ.
‘ಪುಷ್ಪ 2’ ಸಿನಿಮಾ ಭಾನುವಾರ (ಡಿಸೆಂಬರ್ 16) ಒಳ್ಳೆಯ ಗಳಿಕೆ ಮಾಡಿದೆ. ಈ ಚಿತ್ರ ಎರಡನೇ ಭಾನುವಾr 75 ಕೋಟಿ ರೂಪಾಯಿ ಗಳಿಕೆ ಮಾಡಿದೆ. 11ನೇ ದಿನ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡುತ್ತದೆ ಎಂದರೆ ಅದು ನಿಜಕ್ಕೂ ದೊಡ್ಡ ಕಲೆಕ್ಷನ್ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಈ ಸಿನಿಮಾ ಭಾನುವಾರ ತೆಲುಗು ವರ್ಷನ್ 16 ಕೋಟಿ ರೂಪಾಯಿ ಬಾಚಿಕೊಂಡರೆ, ಹಿಂದಿ ವರ್ಷನ್ನಿಂದ 55 ಕೋಟಿ ರೂಪಾಯಿ ಆಗಿದೆ.
ಸದ್ಯ ಭಾರತದ ಬಾಕ್ಸ್ ಆಫೀಸ್ನಲ್ಲಿ ಸಿನಿಮಾದ ಗಳಿಕೆ 900 ಕೋಟಿ ರೂಪಾಯಿ ಆಗಿದೆ. ವಿಶ್ವ ಬಾಕ್ಸ್ ಆಫೀಸ್ನಲ್ಲಿ ಚಿತ್ರ 1300 ಕೋಟಿ ರೂಪಾಯಿ ಬಾಚಿಕೊಂಡಿದೆ. ಶೀಘ್ರವೇ ಭಾರತದ ಕಲೆಕ್ಷನ್ನಲ್ಲಿ ಚಿತ್ರ 1000 ಕೋಟಿ ರೂಪಾಯಿ ಬಾಚಿಕೊಳ್ಳೋ ಸಾಧ್ಯತೆ ಇದೆ. ಈ ಮೂಲಕ ಸಿನಿಮಾ ದಾಖಲೆ ಬರೆಯಲಿದೆ.
ಸದ್ಯ ಎದ್ದಿರೋ ವಿವಾದ ಚಿತ್ರದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಈ ಚಿತ್ರವನ್ನು ವೀಕ್ಷಣೆ ಮಾಡುವವರು ನಿರಂತರವಾಗಿ ಸಿನಿಮಾ ನೋಡುವ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ. ಉತ್ತರ ಭಾರತದ ಮಂದಿ ಚಿತ್ರಕ್ಕೆ ಹೆಚ್ಚು ಆಕರ್ಷಿತರಾಗಿದ್ದಾರೆ. ಈ ಕಾರಣಕ್ಕೆ ಉತ್ತರ ಭಾರತದಲ್ಲಿ ಸಿನಿಮಾ ಹೆಚ್ಚು ಕಲೆಕ್ಷನ್ ಮಾಡುತ್ತಿದೆ.
ಇದನ್ನೂ ಓದಿ: ‘ಪುಷ್ಪ 2’ ಸಿನಿಮಾದ ಜಾತರ ಸೀನ್ ಬಗ್ಗೆ ನಟ ತಾರಕ್ ಪೊನ್ನಪ್ಪ ಮಾತು
ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತಕ್ಕೂ ಅಲ್ಲು ಅರ್ಜುನ್ಗೂ ಲಿಂಕ್ ಮಾಡಲಾಗಿತ್ತು. ಈ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು. ಸದ್ಯ ಅವರು ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದಾರೆ. ಜನರು ತೋರಿದ ಪ್ರೀತಿಗೆ ಧನ್ಯವಾದ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 11:57 am, Mon, 16 December 24