AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ಚಿತ್ರವನ್ನು ಕ್ಲಾಸಿಕ್​ ಎಂದು ಹೊಗಳಿದ ಅಲ್ಲು ಅರ್ಜುನ್​; ರಶ್ಮಿಕಾ ನಟನೆಗೂ ಮೆಚ್ಚುಗೆ

ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಸಿನಿಮಾ ಅಬ್ಬರಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಈ ಚಿತ್ರ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಅದಕ್ಕಾಗಿ ಅಲ್ಲು ಅರ್ಜುನ್​ ಅವರು ಅಭಿನಂದನೆ ತಿಳಿಸಿದ್ದಾರೆ. ಡಿಸೆಂಬರ್​ 1ರಂದು ಬಿಡುಗಡೆ ಆದ ಈ ಸಿನಿಮಾ ಇನ್ನೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

‘ಅನಿಮಲ್​’ ಚಿತ್ರವನ್ನು ಕ್ಲಾಸಿಕ್​ ಎಂದು ಹೊಗಳಿದ ಅಲ್ಲು ಅರ್ಜುನ್​; ರಶ್ಮಿಕಾ ನಟನೆಗೂ ಮೆಚ್ಚುಗೆ
ರಣಬೀರ್​ ಕಪೂರ್​, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Dec 08, 2023 | 7:04 PM

Share

ಬಾಲಿವುಡ್​ ನಟ ರಣಬೀರ್​ ಕಪೂರ್​ ಅವರು ಅಭಿನಯಿಸಿರುವ ‘ಅನಿಮಲ್​’ ಸಿನಿಮಾ (Animal Movie) ಸೂಪರ್​ ಹಿಟ್​ ಆಗಿದೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಅಬ್ಬರಿಸಿದೆ. ರಣಬೀರ್​ ಕಪೂರ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಚಿತ್ರದ ಯಶಸ್ಸಿನಿಂದ ರಶ್ಮಿಕಾ ಡಿಮ್ಯಾಂಡ್​ ಹೆಚ್ಚಾಗಿದೆ. ಕೆಲವರು ಈ ಸಿನಿಮಾವನ್ನು ಟೀಕಿಸಿದ್ದಾರೆ. ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅವರಿಗೆ ಈ ಸಿನಿಮಾ ಸಖತ್​ ಇಷ್ಟ ಆಗಿದೆ. ಈ ಸಿನಿಮಾವನ್ನು ಅವರು ಕ್ಲಾಸಿಕ್ ಎಂದು ಕರೆದಿದ್ದಾರೆ. ನಿರ್ದೇಶಕ ಸಂದೀಪ್​ ರೆಡ್ಡಿ ವಂಗ, ನಟ ರಣಬೀರ್​ ಕಪೂರ್​ (Ranbir Kapoor) ಸೇರಿದಂತೆ ಅನೇಕರ ಕೆಲಸವನ್ನು ಅಲ್ಲು ಅರ್ಜುನ್ ಹೊಗಳಿದ್ದಾರೆ.

‘ಸಿನಿಮಾದ ಎಲ್ಲ ಮಿತಿಗಳನ್ನು ಇದು ಮೀರಿದೆ. ಈ ಸಿನಿಮಾದ ತೀವ್ರತೆಗೆ ಸಾಟಿಯೇ ಇಲ್ಲ. ಸಂದೀಪ್​ ರೆಡ್ಡಿ ವಂಗ ಅವರೇ.. ನೀವು ನಮ್ಮೆಲ್ಲರಿಗೂ ಮತ್ತೊಮ್ಮೆ ಹೆಮ್ಮೆ ತಂದಿದ್ದೀರಿ. ಈಗ ಮತ್ತು ಭವಿಷ್ಯದಲ್ಲಿ ಭಾರತೀಯ ಚಿತ್ರರಂಗದ ಚಹರೆಯನ್ನು ನಿಮ್ಮ ಸಿನಿಮಾಗಳು ಹೇಗೆ ಬದಲಾಯಿಸಲಿವೆ ಎಂಬುದು ನನಗೆ ಈಗಲೇ ಸ್ಪಷ್ಟವಾಗಿ ತಿಳಿಯುತ್ತಿದೆ’ ಎಂದು ಅಲ್ಲು ಅರ್ಜುನ್ ಹೊಗಳಿದ್ದಾರೆ.

‘ರಶ್ಮಿಕಾ ಮಂದಣ್ಣ ಅವರ ನಟನೆ ಅತ್ಯುತ್ತಮವಾಗಿದೆ’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ. ಉದಯೋನ್ಮುಖ ಕಲಾವಿದೆ ತೃಪ್ತಿ ದಿಮ್ರಿ ಅವರಿಗೂ ಅಲ್ಲು ಅರ್ಜುನ್​ ಅವರಿಂದ ಮೆಚ್ಚುಗೆ ಸಿಕ್ಕಿದೆ. ರಣಬೀರ್​ ಕಪೂರ್​ ಅವರು ಭಾರತೀಯ ಚಿತ್ರರಂಗದಲ್ಲಿ ನಟನೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದ್ದಾರೆ ಎಂಬುದು ಅಲ್ಲು ಅರ್ಜುನ್​ ಅನಿಸಿಕೆ.

ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಸಿನಿಮಾ ಅಬ್ಬರಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಈ ಚಿತ್ರ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಅದಕ್ಕಾಗಿ ಅಲ್ಲು ಅರ್ಜುನ್​ ಅವರು ಅಭಿನಂದನೆ ತಿಳಿಸಿದ್ದಾರೆ. ಡಿಸೆಂಬರ್​ 1ರಂದು ಬಿಡುಗಡೆ ಆದ ಈ ಸಿನಿಮಾ ಇನ್ನೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ