ಬಿಡುಗಡೆಗೂ ಮುನ್ನ 420 ಕೋಟಿ ರೂಪಾಯಿ ಗಳಿಸಿದ ‘ಪುಷ್ಪ 2’ ಸಿನಿಮಾ

ಪುಷ್ಪ 2 ಚಿತ್ರದ ಪೂರ್ವ ಬಿಡುಗಡೆ ವ್ಯಾಪಾರ 420 ಕೋಟಿ ರೂಪಾಯಿಗಳನ್ನು ದಾಟಿದೆ ಎಂದು ನಿರ್ಮಾಪಕರು ಘೋಷಿಸಿದ್ದಾರೆ. ಡಿಸೆಂಬರ್ 5 ರಂದು ಬಿಡುಗಡೆಯಾಗಲಿರುವ ಈ ಸಿನಿಮಾ, ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅವರ ಅಭಿನಯದಿಂದಾಗಿ ಅಪಾರ ನಿರೀಕ್ಷೆಯಲ್ಲಿದೆ. ಸಿನಿಮಾದ ಯಶಸ್ಸಿನ ಬಗ್ಗೆ ಚಿತ್ರತಂಡ ಭಾರಿ ವಿಶ್ವಾಸ ವ್ಯಕ್ತಪಡಿಸಿದೆ.

ಬಿಡುಗಡೆಗೂ ಮುನ್ನ 420 ಕೋಟಿ ರೂಪಾಯಿ ಗಳಿಸಿದ ‘ಪುಷ್ಪ 2’ ಸಿನಿಮಾ
ಅಲ್ಲು ಅರ್ಜುನ್
Follow us
ಮದನ್​ ಕುಮಾರ್​
|

Updated on: Oct 24, 2024 | 4:00 PM

ಸಿನಿಪ್ರಿಯರು ‘ಪುಷ್ಪ 2’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಟಾಲಿವುಡ್​ ನಟ ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ ನಟಿಸಿರುವ ಈ ಸಿನಿಮಾ ಡಿಸೆಂಬರ್​ 5ರಂದು ಬಿಡುಗಡೆ ಆಗಲಿದೆ. ಈಗ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ನಿರೀಕ್ಷೆ ಜಾಸ್ತಿ ಇರುವುದರಿಂದ ಬಿಡುಗಡೆಗೂ ಮುನ್ನವೇ ನೂರಾರು ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ. ಈ ಬಗ್ಗೆ ಸಿನಿಮಾದ ನಿರ್ಮಾಪಕರೇ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ನಾನ್​-ಥಿಯೆಟ್ರಿಕಲ್ ಹಕ್ಕುಗಳ ಮೂಲಕ ಬರೋಬ್ಬರಿ 420 ಕೋಟಿ ರೂಪಾಯಿ ಸಿಕ್ಕಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.

‘ಪುಷ್ಪ 2’ ಸಿನಿಮಾದ ನಿರ್ಮಾಪಕರು ಮತ್ತು ವಿತರಕರು ಇಂದು (ಅಕ್ಟೋಬರ್​ 24) ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಸಿನಿಮಾದ ಬಿಸ್ನೆಸ್​ ಬಗ್ಗೆ ಮಾತನಾಡಿದ್ದಾರೆ. ಎಲ್ಲರಿಗೂ ಅಚ್ಚರಿ ಆಗುವಂತಹ ಮಾಹಿತಿಯನ್ನು ಅವರು ಹಂಚಿಕೊಂಡಿದ್ದಾರೆ. ‘ಈವರೆಗಿನ ಬೇರೆಲ್ಲ ಸಿನಿಮಾಗಳಿಂತ ಅತಿ ಹೆಚ್ಚಿನ ಮೊತ್ತಕ್ಕೆ ಪ್ರೀ-ರಿಲೀಸ್​ ಬಿಸ್ನೆಸ್ ಆಗಿದೆ. ಬಿಡುಗಡೆ ಬಳಿಕ ಆರಾಮಾಗಿ 1000 ಕೋಟಿ ರೂಪಾಯಿ ಬಿಸ್ನೆಸ್​ ಆಗಲಿದೆ’ ಎಂದಿದ್ದಾರೆ ನಿರ್ಮಾಪಕರು.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಆಗಸ್ಟ್ ತಿಂಗಳಲ್ಲೇ ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾದ ಕೆಲಸಗಳು ಬಾಕಿ ಇರುವ ಕಾರಣದಿಂದ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿತ್ತು. ಈಗ ಡಿಸೆಂಬರ್​ 5ರಂದು ಸಿನಿಮಾ ರಿಲೀಸ್ ಆಗಲಿದೆ ಎಂಬುದನ್ನು ತಿಳಿಸಲು ಚಿತ್ರತಂಡದವರು ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಮೊದಲ ದಿನ ಈ ಸಿನಿಮಾ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಅಲ್ಲು ಅರ್ಜುನ್​ ಅವರ ವೃತ್ತಿ ಜೀವನದಲ್ಲೇ ಅತಿ ದೊಡ್ಡ ಸಿನಿಮಾವಾಗಿ ‘ಪುಷ್ಪ 2’ ಚಿತ್ರ ಧೂಳೆಬ್ಬಿಸುವ ಸೂಚನೆ ಸಿಕ್ಕಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ವಿವಿಧ ಭಾಷೆಗಳಲ್ಲಿ ಡಬ್ ಆಗಿ ಈ ಸಿನಿಮಾ ತೆರೆಕಾಣಲಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ ಹೈಕೋರ್ಟ್ ಮೆಟ್ಟಿಲೇರಿದ ಅಲ್ಲು ಅರ್ಜುನ್: ಕಾರಣ?

‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ‘ಪುಷ್ಪ 2’ ಸಿನಿಮಾವನ್ನು ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಮಾಡಿದೆ. ಈ ಚಿತ್ರಕ್ಕೆ ಸುಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ‘ಪುಷ್ಪ’ ಸಿನಿಮಾಗೆ ಅಲ್ಲು ಅರ್ಜುನ್ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಹಾಗಾಗಿ ಅದರ ಸೀಕ್ವೆಲ್ ಮೇಲೆ ನಿರೀಕ್ಷೆ ದೊಡ್ಡದಾಗಿ. ಫಹಾದ್ ಫಾಸಿಲ್, ಡಾಲಿ ಧನಂಜಯ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.