AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ

ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ ಅಲ್ಲು ಅರ್ಜುನ್ ಲುಕ್​ ಹೇಗಿರಲಿದೆ ಎಂಬುದನ್ನು ಚಿತ್ರತಂಡ ಅನಾವರಣ ಮಾಡಿದೆ.

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ
ಅಲ್ಲು ಅರ್ಜುನ್​-ಯಶ್​
TV9 Web
| Edited By: |

Updated on: Jun 15, 2021 | 7:53 AM

Share

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾದ ಬಗ್ಗೆ ನಿತ್ಯ ಹೊಸ ಹೊಸ ಅಪ್​ಡೇಟ್​ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ರಿಲೀಸ್​ ಆಗಿದ್ದ ಸಿನಿಮಾದ ಟೀಸರ್ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಸಿನಿಮಾ ಹೇಗಿರಲಿದೆ ಎನ್ನುವ ಬಗ್ಗೆ ಉಪ್ಪೇನಾ ನಿರ್ದೇಶಕ ಬುಚಿ ಬಾಬು ಈ ರೀತಿಯ ಹೇಳಿಕೆ ನೀಡಿದ್ದಾರೆ.

ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ ಅಲ್ಲು ಅರ್ಜುನ್ ಲುಕ್​ ಹೇಗಿರಲಿದೆ ಎಂಬುದನ್ನು ಚಿತ್ರತಂಡ ಅನಾವರಣ ಮಾಡಿದೆ. ಈಗ ಸಿನಿಮಾವನ್ನು ಬುಚಿ ಬಾಬು ವೀಕ್ಷಣೆ ಮಾಡಿದ್ದು, ಶ್ಲಾಘಿಸಿದ್ದಾರೆ.

‘ನಾನು ಸಿನಿಮಾದ ಮೊದಲ ಭಾಗವನ್ನು ವೀಕ್ಷಣೆ ಮಾಡಿದ್ದೇನೆ. ಈ ಚಿತ್ರ 10 ಕೆಜಿಎಫ್​ಗೆ ಸಮ. ಸಿನಿಮಾದಲ್ಲಿ ಬರುವ ಪಾತ್ರಗಳು ತುಂಬಾನೇ ಅದ್ಭುತವಾಗಿ ಮೂಡಿ ಬಂದಿವೆ. ನಾನು ಇದನ್ನು ಅತಿಶಯೋಕ್ತಿಯಾಗಿ ಹೇಳುತ್ತಿಲ್ಲ. ಸಿನಿಮಾ ನೋಡಿದ ಮೇಲೆ ನಿಮಗೇ ತಿಳಿಯಲಿದೆ’ ಎಂದಿದ್ದಾರೆ ಬುಚಿ ಬಾಬು.

ಈ ರೀತಿಯ ಸಿನಿಮಾಗಳಲ್ಲಿ ಸಂಗೀತ ಅನ್ನೋದು ತುಂಬಾನೇ ಪ್ರಾಮುಖ್ಯತೆ ಪಡೆದುಕೊಳ್ಳುತ್ತೆ. ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಬುಚಿ ಬಾಬು ಮಾಹಿತಿ ನೀಡಿದ್ದಾರೆ. ‘ದೇವಿ ಪ್ರಸಾದ್ ಈ ಚಿತ್ರದಲ್ಲಿ ಅದ್ಭುತ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿನಿಮಾದ ಕಥೆ ಅದ್ಭುತವಾಗಿ ಮೂಡಿ ಬಂದಿದೆ. ಇದು ಅಭಿಮಾನಿಗಳಿಗೆ ಇಷ್ಟವಾಗಲಿದೆ ಎಂದು ಹೇಳಿದ್ದಾರೆ.

‘ಅಲಾ ವೈಕುಂಠಪುರಮುಲೋ’ ಸಿನಿಮಾ ನಂತರ ಅಲ್ಲು ಅರ್ಜುನ್ ‘ಪುಷ್ಪ’ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2018ರಲ್ಲಿ ತೆರೆಕಂಡ ರಂಗಸ್ಥಲಂ ಚಿತ್ರದ ನಂತರ ಅವರು ಕೈಗೆತ್ತಿಕೊಂಡಿರುವ ಮುಂದಿನ ಚಿತ್ರ ಇದಾಗಿದೆ. ರಂಗಸ್ಥಲಂ ಸಿನಿಮಾ ಕತೆ ಹಳ್ಳಿ ಹಿನ್ನೆಲೆಯಲ್ಲಿ ಸಾಗಿತ್ತು. ಪುಷ್ಪ ಸಿನಿಮಾ ಕಾಡಿನ ಹಿನ್ನೆಲೆ ಹೊಂದಿದೆ.

ಶೇಷಾಚಲಂನ ಅರಣ್ಯದಲ್ಲಿ ನಡೆಯುತ್ತಿದ್ದ ರಕ್ತ ಚಂದನದ ಕಳ್ಳ ಸಾಗಾಣಿಕೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಟ್ರಕ್ ಡ್ರೈವರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ. ಇದೇ ಆಗಸ್ಟ್ 13ರಂದು ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ. ಹೀಗಿರುವಾಗಲೇ ಸಿನಿಮಾ ಬಗ್ಗೆ ಹೊಸ ಅಪ್ಡೇಟ್ ಒಂದು ಸಿಕ್ಕಿದೆ.

ಇದನ್ನೂ ಓದಿ:

 Pushpa: ರಶ್ಮಿಕಾ-ಅಲ್ಲು ಅರ್ಜುನ್ ನಟನೆಯ​ ‘ಪುಷ್ಪ’ ಚಿತ್ರಕ್ಕೆ ಹೆಸರು ಚೇಂಜ್​; ಯಾಕಿಂಥ ನಿರ್ಧಾರ?

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್