AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾಗಲಿದ್ದಾರೆ ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ; ಶೀಘ್ರವೇ ಮುಂಬೈನಲ್ಲಿ ‘ರಾಕಾ’ ಶೂಟಿಂಗ್ ಆರಂಭ

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ 'ರಾಕಾ' ಚಿತ್ರದಲ್ಲಿ ಮತ್ತೆ ಒಂದಾಗುತ್ತಿದ್ದಾರೆ. ಅಟ್ಲಿ ನಿರ್ದೇಶನದ ಈ 700 ಕೋಟಿ ಬೃಹತ್ ಬಜೆಟ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಮೃಣಾಲ್ ಠಾಕೂರ್, ಜಾನ್ವಿ ಕಪೂರ್ ಕೂಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. 2027ರಲ್ಲಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.

ಮತ್ತೆ ಒಂದಾಗಲಿದ್ದಾರೆ ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ; ಶೀಘ್ರವೇ ಮುಂಬೈನಲ್ಲಿ ‘ರಾಕಾ’ ಶೂಟಿಂಗ್ ಆರಂಭ
ಅಲ್ಲು ಅರ್ಜುನ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jun 27, 2026 | 12:35 PM

Share

ಮುಖ್ಯಾಂಶಗಳು

  • ರಾಕಾ' ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಜೋಡಿ ಪುನರ್ಮಿಲನ
  • 700 ಕೋಟಿ ಬಜೆಟ್‌ನಲ್ಲಿ ಸಿದ್ಧವಾಗ್ತಿದೆ 'ರಾಕಾ'
  • 2027ರ ಅಂತ್ಯಕ್ಕೆ ರಿಲೀಸ್ ಆಗಲಿದೆ 'ರಾಕಾ’

‘ಪುಷ್ಪ’ ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಜೋಡಿ ಈಗ ಮತ್ತೆ ಒಂದಾಗುತ್ತಿದೆ. ಆದರೆ ಈ ಬಾರಿ ಇವರು ಪುಷ್ಪರಾಜ್ ಮತ್ತು ಶ್ರೀವಲ್ಲಿಯಾಗಿ ಕಾಣಿಸಿಕೊಳ್ಳುತ್ತಿಲ್ಲ. ನಿರ್ದೇಶಕ ಅಟ್ಲಿ ಅವರ ಮುಂದಿನ ಬಹುನಿರೀಕ್ಷಿತ ‘ರಾಕಾ’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲೇ ಮುಂಬೈನಲ್ಲಿ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ. ಈ ಸುದ್ದಿ ಸದ್ಯ ಸಿನಿಪ್ರಿಯರಲ್ಲಿ ಭಾರಿ ಕುತೂಹಲ ಮೂಡಿಸಿದೆ.

‘ರಾಕಾ’ ಚಿತ್ರಕ್ಕೆ ದೀಪಿಕಾ ಪಡುಕೋಣೆ ನಾಯಕಿ. ಚಿತ್ರದಲ್ಲಿ ದೀಪಿಕಾ ಜೊತೆ ರಶ್ಮಿಕಾ ಮಂದಣ್ಣ, ಮೃಣಾಲ್ ಠಾಕೂರ್ ಮತ್ತು ಜಾನ್ವಿ ಕಪೂರ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ವದಂತಿ ಕೂಡ ಇದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ.

ಇತ್ತೀಚೆಗೆ ನಟ ಅಲ್ಲು ಅರ್ಜುನ್ ಅವರ 44ನೇ ಜನ್ಮದಿನದ ಅಂಗವಾಗಿ ‘ರಾಕಾ’ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿತ್ತು. ಈ ಪೋಸ್ಟರ್‌ನಲ್ಲಿ ಅಲ್ಲು ಅರ್ಜುನ್ ಅವರ ರಗಡ್ ಲುಕ್ ಸಖತ್ ವೈರಲ್ ಆಗಿತ್ತು. ಬೃಹತ್ ಬಜೆಟ್‌ನ ಈ ಚಿತ್ರವನ್ನು ‘ಸನ್ ಪಿಕ್ಚರ್ಸ್’ ಸಂಸ್ಥೆಯು ಬರೋಬ್ಬರಿ 700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿದೆ. ಮುಂಬೈ ಸ್ಟುಡಿಯೋದಲ್ಲಿ ಆರಂಭವಾಗಲಿರುವ ಈ ಚಿತ್ರದ ಶೂಟಿಂಗ್ 2026 ರ ಅಂತ್ಯದ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ನಿರ್ದೇಶಕ ಅಟ್ಲಿ ಅವರ ಈ ಬಿಗ್ ಪ್ರಾಜೆಕ್ಟ್ ಅನ್ನು ಡಿಸೆಂಬರ್ 2027ರಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಮಹಿಳಾ ಪ್ರಧಾನ ಸಿನಿಮಾಗಳತ್ತ ಹೊರಳುತ್ತಿರುವ ನಟಿ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಇವರು, ಫೆಬ್ರವರಿಯಲ್ಲಿ ಮದುವೆ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ