AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

51 ಟೇಕ್​ ತೆಗೆದುಕೊಂಡ ಅಲ್ಲು ಅರ್ಜುನ್​; ‘ಪುಷ್ಪ 2’ ಟೀಸರ್​ ಹಿಂದಿದೆ ಅಚ್ಚರಿ ವಿಷಯ

‘ಪುಷ್ಪ 2’ ಚಿತ್ರದ ಮೇಲೆ ಪ್ರೇಕ್ಷಕರಿಗೆ ಇರುವ ನಿರೀಕ್ಷೆ ದೊಡ್ಡದು. ಅದಕ್ಕೆ ತಕ್ಕಂತೆ ಸಿನಿಮಾ ಮೂಡಿಬರಬೇಕು ಎಂದರೆ ಎಲ್ಲ ದೃಶ್ಯಗಳೂ ಪರ್ಫೆಕ್ಟ್​ ಆಗಿರಬೇಕು. ವೈರಲ್​ ಆಗಿರುವ ಟೀಸರ್​ನಲ್ಲಿ ನಟ ಅಲ್ಲು ಅರ್ಜುನ್ ಅವರು ಸ್ತ್ರೀ ವೇಷ ಧರಿಸಿ ಬಂದಿದ್ದಾರೆ. ಮೈ ತುಂಬ ಬಗೆಬಗೆಯ ಆಭರಣ ಹಾಕಿಕೊಂಡು ಫೈಟ್​ ಮಾಡಿದ್ದಾರೆ.

51 ಟೇಕ್​ ತೆಗೆದುಕೊಂಡ ಅಲ್ಲು ಅರ್ಜುನ್​; ‘ಪುಷ್ಪ 2’ ಟೀಸರ್​ ಹಿಂದಿದೆ ಅಚ್ಚರಿ ವಿಷಯ
ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Apr 09, 2024 | 6:46 PM

Share

ನಟ ಅಲ್ಲು ಅರ್ಜುನ್​ (Allu Arjun) ಅವರ ಅಭಿಮಾನಿಗಳು ‘ಪುಷ್ಪ 2’ (Pushpa 2) ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾಗೆ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದು, ಮೈತ್ರಿ ಮೂವೀ ಮೇಕರ್ಸ್​ ಸಂಸ್ಥೆ ಬಂಡವಾಳ ಹೂಡುತ್ತಿದೆ. ದೊಡ್ಡ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಸೋಮವಾರ (ಏಪ್ರಿಲ್​ 8) ಅಲ್ಲು ಅರ್ಜುನ್​ ಅವರ ಜನ್ಮದಿನದ ಪ್ರಯುಕ್ತ ‘ಪುಷ್ಪ 2’ ಚಿತ್ರದ ಟೀಸರ್​ (Pushpa 2 Teaser) ಬಿಡುಗಡೆ ಆಯಿತು. ಆ ಟೀಸರ್​ ಚಿತ್ರೀಕರಣದ ವೇಳೆ ಅಲ್ಲು ಅರ್ಜುನ್​ ಅವರು 50ಕ್ಕೂ ಹೆಚ್ಚು ಟೇಕ್​ ತೆಗೆದುಕೊಂಡಿದ್ದರು ಎಂಬ ವಿಷಯ ಈಗ ಗೊತ್ತಾಗಿದೆ.

ಸಾಮಾನ್ಯವಾಗಿ ಹೊಸ ಕಲಾವಿದರು ಹೆಚ್ಚು ಟೇಕ್​ ತೆಗೆದುಕೊಳ್ಳುತ್ತಾರೆ. ಆದರೆ ಅನುಭವಿ ಕಲಾವಿದರು ಒಂದು ಅಥವಾ ಎರಡು ಟೇಕ್​ನಲ್ಲಿ ಬೆಸ್ಟ್​ ನಟನೆ ನೀಡುತ್ತಾರೆ. ಅಲ್ಲು ಅರ್ಜುನ್​ ಕೂಡ ಟಾಲಿವುಡ್​ನಲ್ಲಿ ಅನುಭವಿ ನಟ. ಹಾಗಿದ್ದರೂ ಕೂಡ ಅವರು ‘ಪುಷ್ಪ 2’ ಸಿನಿಮಾದ ಟೀಸರ್​ ಚಿತ್ರೀಕರಣದ ವೇಳೆ ಬರೋಬ್ಬರಿ 51 ಟೇಕ್​ ತೆಗೆದುಕೊಂಡಿದ್ದರು. ಆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ಅಟ್ಲಿ ಜೊತೆಗಿನ ಅಲ್ಲು ಅರ್ಜುನ್ ಸಿನಿಮಾಗೆ ಸಮಂತಾ ರುತ್​ ಪ್ರಭು ನಾಯಕಿ?

ಮೊದಲೇ ಹೇಳಿದಂತೆ ‘ಪುಷ್ಪ 2’ ಮೇಲೆ ಜನರಿಗೆ ಇರುವ ನಿರೀಕ್ಷೆ ದೊಡ್ಡದು. ಆ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮೂಡಿಬರಬೇಕು ಎಂದರೆ ಎಲ್ಲವೂ ಪರ್ಫೆಕ್ಟ್​ ಆಗಿರಬೇಕು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಅವರು ಸ್ತ್ರೀ ವೇಷ ಧರಿಸಿದ್ದಾರೆ. ಅಲ್ಲದೇ ಮೈ ತುಂಬ ಆಭರಣಗಳನ್ನು ಹಾಕಿಕೊಂಡು ಅವರು ಫೈಟ್​ ಮಾಡಿದ್ದಾರೆ. ಜಾತ್ರೆಯ ಈ ಸನ್ನಿವೇಶ ತುಂಬ ಚೆನ್ನಾಗಿ ಬರಬೇಕು ಎಂಬ ಕಾರಣಕ್ಕೆ ಅವರು 51 ಟೇಕ್​ ತೆಗೆದುಕೊಂಡರು ಎಂದು ಹೇಳಲಾಗುತ್ತಿದೆ.

‘ಪುಷ್ಪ 2’ ಚಿತ್ರದ ಟೀಸರ್​:

‘ಪುಷ್ಪ 2’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಆಗಸ್ಟ್​ 15ರಂದು ವಿಶ್ವಾದ್ಯಂತ ಈ ಸಿನಿಮಾವನ್ನು ಬಿಡುಗಡೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಪೋಸ್ಟರ್​ ರಿಲೀಸ್ ಆಗಿ ವೈರಲ್​ ಆಯಿತು. ಫಹಾದ್ ಫಾಸಿಲ್​, ಡಾಲಿ ಧನಂಜಯ್​ ಅವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ. ದೇವಿ ಶ್ರೀ ಪ್ರಸಾದ್​ ಅವರು ಸಂಗೀತ ನೀಡುತ್ತಿದ್ದಾರೆ. ಸಿನಿಮಾದ ಬಗ್ಗೆ ಹಲವು ಬಗೆಯ ಸುದ್ದಿಗಳು ಹರಿದಾಡುತ್ತಿವೆ. ವಿದೇಶದಲ್ಲೂ ‘ಪುಷ್ಪ 2’ ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ