ಅಲ್ಲು ಅರ್ಹಾ ಎಷ್ಟೊಂದು ಕ್ಯೂಟ್; ವೈರಲ್ ಆದ ವಿಡಿಯೋ ನೋಡಿ ಮನಸೋತ ಫ್ಯಾನ್ಸ್​

ಜೇನುನೊಣಗಳು ಅಲ್ಲು ಅರ್ಹಾಗೆ ತೊಂದರೆ ಕೊಟ್ಟಿವೆ. ಇದು ಆಕೆಗೆ ಭಯ ಹುಟ್ಟಿಸಿದೆ. ತಲೆ ಕೂದಲ ಒಳಗೆ ನೊಣಗಳು ಹೊಕ್ಕಿಬಿಡಬಹುದು ಎನ್ನುವ ಭಯ ಆಕೆಯನ್ನು ಕಾಡಿದೆ.

ಅಲ್ಲು ಅರ್ಹಾ ಎಷ್ಟೊಂದು ಕ್ಯೂಟ್; ವೈರಲ್ ಆದ ವಿಡಿಯೋ ನೋಡಿ ಮನಸೋತ ಫ್ಯಾನ್ಸ್​
ಅಲ್ಲು ಅರ್ಹಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Nov 21, 2022 | 7:52 PM

ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ (Allu Arjun) ಅವರು ಸಾಕಷ್ಟು ಜನಪ್ರಿಯತೆ ಹೊಂದಿದ್ದಾರೆ. ತೆಲುಗು ಮಾತ್ರವಲ್ಲದೆ, ಪರಭಾಷೆಯಲ್ಲೂ ಅವರು ಖ್ಯಾತಿ ಹೊಂದಿದ್ದಾರೆ. ಅಲ್ಲು ಅರ್ಜುನ್ ಮಗಳು ಅಲ್ಲು ಅರ್ಹಾ (Allu Arha)  ಕೂಡ ಸಾಕಷ್ಟು ಫೇಮಸ್ ಆಗಿದ್ದಾಳೆ. ಅವಳಿಗೆ ಇಂದು (ನವೆಂಬರ್ 21) ಬರ್ತ್​ಡೇ ಸಂಭ್ರಮ. ಆಕೆ ಆರನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ. ಈ ವಿಶೇಷ ದಿನದಂದು ಅಲ್ಲು ಅರ್ಜುನ್ ಅವರು ವಿಡಿಯೋ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಫ್ಯಾನ್ಸ್​ಗೆ ನೆಚ್ಚಿನ ಸೆಲೆಬ್ರಿಟಿ ಮೇಲೆ ಎಷ್ಟು ಗಮನ ಇರುತ್ತದೆಯೋ ಅಷ್ಟೇ ಗಮನ ಅವರ ಕುಟುಂಬದವರ ಮೇಲೂ ಇರುತ್ತದೆ. ಸೆಲೆಬ್ರಿಟಿಗಳ ಮಕ್ಕಳು ಮಾಡುವ ತುಂಟಾಟ ಅನೇಕರಿಗೆ ಇಷ್ಟವಾಗುತ್ತದೆ. ಈ ಕಾರಣಕ್ಕೆ ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ಆಗಗ ಮಕ್ಕಳ ವಿಡಿಯೋ ಹಾಗೂ ಫೋಟೋ ಹಂಚಿಕೊಳ್ಳುತ್ತಾರೆ. ಅಲ್ಲು ಅರ್ಜುನ್ ಕೂಡ ಮಗಳ ಒಂದು ಅಪರೂಪದ ವಿಡಿಯೋ ಅಪ್​ಲೋಡ್ ಮಾಡಿದ್ದಾರೆ.

ಇದನ್ನೂ ಓದಿ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ಕಿರುತೆರೆ ಜಗತ್ತಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಇವರೇ ನೋಡಿ; ಒಂದು ದಿನಕ್ಕೆ ಎಷ್ಟು ಲಕ್ಷ?
Image
‘ಕೆಜಿಎಫ್: ಚಾಪ್ಟರ್​​ 2’ ಸಿನಿಮಾ ಹಿಟ್​ ಆದ್ಮೇಲೆ ಶ್ರೀನಿಧಿ ಶೆಟ್ಟಿ ಕೇಳ್ತಿರುವ ಸಂಭಾವನೆ ಎಷ್ಟು ಕೋಟಿ?
Image
1992ರಲ್ಲಿ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು? ನೀವು ಅಚ್ಚರಿ ಪಡೋದು ಗ್ಯಾರಂಟಿ

ಜೇನುನೊಣಗಳು ಅಲ್ಲು ಅರ್ಹಾಗೆ ತೊಂದರೆ ಕೊಟ್ಟಿವೆ. ಇದು ಆಕೆಗೆ ಭಯ ಹುಟ್ಟಿಸಿದೆ. ತಲೆ ಕೂದಲ ಒಳಗೆ ನೊಣಗಳು ಹೊಕ್ಕಿಬಿಡಬಹುದು ಎನ್ನುವ ಭಯ ಆಕೆಯನ್ನು ಕಾಡಿದೆ. ‘ನನ್ನ ಮುದ್ದಾದ ಜೀವಕ್ಕೆ ಹುಟ್ಟುಹಬ್ಬದ ಶುಭಾಶಯ’ ಎಂದು ಅಲ್ಲು ಅರ್ಜುನ್ ಅವರು ಈ ವಿಡಿಯೋಗೆ ಅಡಿಬರಹ ನೀಡಿದ್ದಾರೆ.

ಸಮಂತಾ ನಟನೆಯ ‘ಶಾಕುಂತಲಂ ಸಿನಿಮಾ ಮೂಲಕ ಅಲ್ಲು ಅರ್ಹಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾಳೆ. ಈ ಚಿತ್ರಕ್ಕೆ ಗುಣಶೇಖರ್ ಅವರು ನಿರ್ದೇಶನ ಮಾಡಿದ್ದಾರೆ. ಸಮಂತಾ ಜೊತೆ ಅಲ್ಲು ಅರ್ಹಾ ತೆರೆ ಹಂಚಿಕೊಂಡಿದ್ದಾಳೆ. ಪೌರಾಣಿಕ ಕಥಾಹಂದರ ಇರುವ ಈ ಸಿನಿಮಾದಲ್ಲಿ ಸಮಂತಾ ಅವರು ಶಕುಂತಲೆಯ ಪಾತ್ರ ಮಾಡಿದ್ದು, ಶಕುಂತಲೆ ಪುತ್ರ ಭರತನ ಪಾತ್ರಕ್ಕೆ ಅಲ್ಲು ಅರ್ಹಾ ಬಣ್ಣ ಹಚ್ಚಿದ್ದಾಳೆ.

ಇದನ್ನೂ ಓದಿ: ಕರ್ನಾಟಕದಲ್ಲಿ ‘ಪುಷ್ಪ 2’ ವಿರುದ್ಧ ಬೀದಿಗಿಳಿದ ಅಲ್ಲು ಅರ್ಜುನ್ ಫ್ಯಾನ್ಸ್; ಇದಕ್ಕಿದೆ ಅಚ್ಚರಿಯ ಕಾರಣ

ಅಲ್ಲು ಅರ್ಜುನ್ ಅವರು ‘ಪುಷ್ಪ’ ಚಿತ್ರ ಹಿಟ್ ಆಗಿದೆ. ಹೀಗಾಗಿ, ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಲಿದ್ದಾರೆ. ಡಿಸೆಂಬರ್ ತಿಂಗಳಿಂದ ಅವರು ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ. ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಸುಕುಮಾರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ