ಕ್ಯಾರವಾನ್, ‘ಪುಷ್ಪ 2’ ಚಿತ್ರದ ಸೆಟ್ ಹೇಗಿದೆ ಎಂಬುದನ್ನು ವಿಡಿಯೋ ಮೂಲಕ ತೋರಿಸಿದ ಅಲ್ಲು ಅರ್ಜುನ್

ಈ ವಿಡಿಯೋ ವೈರಲ್ ಆಗಿದೆ. ಪೋಸ್ಟ್ ಮಾಡಿದ ಒಂದು ಗಂಟೆಯಲ್ಲಿ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದುಕೊಂಡಿದೆ. ‘ಪುಷ್ಪ’ ರಿಲೀಸ್ ಆದ ಬಳಿಕ ಅಲ್ಲು ಅರ್ಜುನ್ ಖ್ಯಾತಿ ಹೆಚ್ಚಿದೆ. ಈಗ ‘ಪುಷ್ಪ 2’ ಚಿತ್ರಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಸುಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಕ್ಯಾರವಾನ್, ‘ಪುಷ್ಪ 2’ ಚಿತ್ರದ ಸೆಟ್ ಹೇಗಿದೆ ಎಂಬುದನ್ನು ವಿಡಿಯೋ ಮೂಲಕ ತೋರಿಸಿದ ಅಲ್ಲು ಅರ್ಜುನ್
ಅಲ್ಲು ಅರ್ಜುನ್
Follow us
ರಾಜೇಶ್ ದುಗ್ಗುಮನೆ
|

Updated on: Aug 30, 2023 | 11:18 AM

ಅಲ್ಲು ಅರ್ಜುನ್ (Allu Arjun) ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಈಗ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಅಭಿಮಾನಿಗಳಿಗೆ ಸ್ಪೆಷಲ್ ಟ್ರೀಟ್ ನೀಡಿದ್ದಾರೆ. ತಮ್ಮ ದಿನಚರಿ ಹೇಗಿರುತ್ತದೆ ಎಂಬುದನ್ನು ಅವರು ವಿವರಿಸಿದ್ದಾರೆ. ಮುಂಜಾನೆ ಎದ್ದಾಗಿನಿಂದ, ಶೂಟಿಂಗ್ ಮುಗಿಯುವವರೆಗೆ ಏನೆಲ್ಲ ಮಾಡಲಾಗುತ್ತದೆ ಎಂಬುದನ್ನು ಅವರು ವಿವರಿಸಿದ್ದಾರೆ.

ಅಲ್ಲು ಅರ್ಜುನ್ ಹೈದರಾಬಾದ್ ಮನೆ ಸಾಕಷ್ಟು ವಿಸ್ತಾರವಾಗಿದೆ. ಅವರ ಮನೆಯಲ್ಲಿ ದೊಡ್ಡ ಗಾರ್ಡನ್ ಇದೆ. ಮುಂಜಾನೆ ಎದ್ದ ತಕ್ಷಣ ಅವರು ಗಾರ್ಡನ್​ಗೆ ಬರುತ್ತಾರೆ. ಬಂದು ಕೆಲ ಸಮಯ ಅಲ್ಲಿ ಕಳೆಯುತ್ತಾರೆ. ಏಕಾಂಗಿಯಾಗಿ ಸಮಯ ಕಳೆಯಲು ಅವರಿಗೆ ಸಿಗುವ ಏಕೈಕ ಅವಕಾಶ ಅದು. ಆ ಬಳಿಕ ಕಾಫಿ ಕುಡಿಯುತ್ತಾರೆ, ತಿಂಡಿ ತಿನ್ನುತ್ತಾರೆ. ನಂತರ ಶೂಟ್ ತೆರಳುತ್ತಾರೆ.

ಮಧ್ಯಾಹ್ನ 1 ಗಂಟೆಗೆ ಕುಟುಂಬದವರ ಜೊತೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಾರೆ. ‘ಪುಷ್ಪ 2’ ಚಿತ್ರೀಕರಣ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ನಡೆಯುತ್ತಿದೆ. ಅಲ್ಲಿಗೆ ಬರುತ್ತಿದ್ದಂತೆ ಅವರಿಗೆ ಅಭಿಮಾನಿಗಳು ಎದುರಾಗುತ್ತಾರೆ. ಅವರಿಗೆ ಶೇಕ್​ ಹ್ಯಾಂಡ್ ಮಾಡಿ ಕ್ಯಾರವಾನ್ ತೆರಳುತ್ತಾರೆ. ಅಲ್ಲಿ ಸುಕುಮಾರ್ ಅವರ ಭೇಟಿ ಆಗುತ್ತದೆ. ಸುಕುಮಾರ್ ಹಾಗೂ ಅಲ್ಲು ಅರ್ಜುನ್ ಪರಸ್ಪರ ಮಾತುಕತೆ ನಡೆಸುತ್ತಾರೆ. ನಂತರ ಶೂಟಿಂಗ್​ಗೋಸ್ಕರ ಅಲ್ಲು ಅರ್ಜುನ್ ರೆಡಿ ಆಗುತ್ತಾರೆ. ಈ ರೀತಿಯಲ್ಲಿ ಅಲ್ಲು ಅರ್ಜುನ್ ದಿನಚರಿ ಇರುತ್ತದೆ.

View this post on Instagram

A post shared by Instagram (@instagram)

ಇದನ್ನೂ ಓದಿ: ಟಾಲಿವುಡ್​ನಲ್ಲೇ ರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡ ಮೊದಲ ನಟ ಅಲ್ಲು ಅರ್ಜುನ್

ಸದ್ಯ ಈ ವಿಡಿಯೋ ವೈರಲ್ ಆಗಿದೆ. ಪೋಸ್ಟ್ ಮಾಡಿದ ಒಂದು ಗಂಟೆಯಲ್ಲಿ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದುಕೊಂಡಿದೆ. ‘ಪುಷ್ಪ’ ರಿಲೀಸ್ ಆದ ಬಳಿಕ ಅಲ್ಲು ಅರ್ಜುನ್ ಖ್ಯಾತಿ ಹೆಚ್ಚಿದೆ. ಈಗ ‘ಪುಷ್ಪ 2’ ಚಿತ್ರಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಸುಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಚಿತ್ರದ ನಾಯಕಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?